AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಮನೆ ಊಟ, ಇಂದು ಹೈಕೋರ್ಟ್ ವಿಚಾರಣೆ

Darshan Thoogudeepa: ಆರೋಪಿ ದರ್ಶನ್, ತಮಗೆ ಮನೆ ಊಟ ಬೇಕೆಂದು ಹೈಕೋರ್ಟ್​ಗೆ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು (ಆಗಸ್ಟ್ 20) ನಡೆಯಲಿದೆ. ಮನೆ ಊಟಕ್ಕೆ ಸಂಬಂಧಿಸಿದಂತೆ ಜೈಲಧಿಕಾರಿಗಳು ತಮ್ಮ ವರದಿಯನ್ನು ಹೈಕೋರ್ಟ್​ಗೆ ಸಲ್ಲಿಸಿದ್ದಾರೆ.

ದರ್ಶನ್​ಗೆ ಮನೆ ಊಟ, ಇಂದು ಹೈಕೋರ್ಟ್ ವಿಚಾರಣೆ
ಮಂಜುನಾಥ ಸಿ.
|

Updated on: Aug 20, 2024 | 9:23 AM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್​ಗೆ ಮನೆ ಊಟ ಬೇಕೆಂದು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು (ಆಗಸ್ಟ್ 20) ನಡೆಯಲಿದೆ. ಮನೆ ಊಟ, ಮಲಗಲು ಹಾಸಿಗೆ ಹಾಗೂ ಕೆಲವು ಪುಸ್ತಕಗಳು ಬೇಕೆಂದು ನಟ ದರ್ಶನ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯಲ್ಲಿ ಆರೋಗ್ಯದ ಕಾರಣ ನೀಡಿದ್ದರು. ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ನ ಏಕಸದಸ್ಯ ಪೀಠ ನಡೆಸಲಿದೆ.

ಕಳೆದ ಬಾರಿ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಈ ಬಗ್ಗೆ ನಿರ್ಣಯ ಕೈಗೊಂಡು ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಈಗಾಗಲೇ ವರದಿ ಸಲ್ಲಿಕೆ ಆಗಲಿದ್ದು, ಇಂದು ಹೈಕೋರ್ಟ್ ಏಕ ಸದಸ್ಯ ಪೀಠ ತನ್ನ ನಿರ್ಣಯ ಪ್ರಕಟಿಸುವ ಸಾಧ್ಯತೆ ಇದೆ. ಜೈಲು ಅಧಿಕಾರಿಗಳು, ಮನೆ ಊಟದ ಅವಶ್ಯಕತೆ ಇಲ್ಲವೆಂದೇ ವರದಿ ನೀಡಿದ್ದಾರೆ ಎನ್ನಲಾಗಿದೆ. ಜೈಲಿನ ವೈದ್ಯಾಧಿಕಾರಿಗಳು ಸಹ ದರ್ಶನ್​ಗೆ ಮನೆ ಊಟದ ಅವಶ್ಯಕತೆ ಇಲ್ಲವೆಂದೇ ವರದಿ ನೀಡಿದ್ದಾರೆ ಎನ್ನಲಾಗುತ್ತಿದೆ.

ಎಫ್​ಎಸ್​ಎಲ್ ವರದಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಈಗಾಗಲೇ ಸುಮಾರು 200 ಕ್ಕೂ ಹೆಚ್ಚು ಸಾಕ್ಷಿಗಳನ್ನು ಕಲೆ ಹಾಕಿದ್ದು ಅವುಗಳಲ್ಲಿ ಸಾಂಧರ್ಭಿಕ ಸಾಕ್ಷಿಗಳು, ಡಿಜಿಟಲ್ ಸಾಕ್ಷಿಗಳು, ಸಿಸಿಟಿವಿ ಫುಟೇಜ್​ಗಳು ಇನ್ನೂ ಕೆಲವು ಹಲವು ಸಾಕ್ಷ್ಯಗಳನ್ನು ಕಲೆ ಹಾಕಲಾಗಿದೆ. ಇವುಗಳ ಸತ್ಯಾಸತ್ಯತೆ ತಿಳಿಯಲು ಇವುಗಳನ್ನು ಹೈದರಾಬಾದ್ ಮತ್ತು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಅವುಗಳಲ್ಲಿ ಸುಮಾರು 70% ಸಾಕ್ಷ್ಯಗಳ ಎಫ್​ಎಸ್​ಎಲ್ ವರದಿಗಳು ಪೊಲೀಸರ ಕೈ ಸೇರಿವೆ. ಇನ್ನುಳಿದ ಸಾಕ್ಷ್ಯಗಳ ಎಫ್​ಎಸ್​ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಹೈದರಾಬಾದ್​ಗೆ ಕಳಿಸಲಾಗಿರುವ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಉಪಕರಣಗಳು, ಸಿಸಿ ಕ್ಯಾಮೆರಾ, ಆಡಿಯೋ ಸ್ಯಾಂಪಲ್ಸ್, ಮೊಬೈಲ್ ಡೇಟಾ ರಿಪೋರ್ಟ್ ಎಫ್​ಎಸ್​ಎಲ್ ವರದಿಗಳು ಮಾತ್ರವೇ ಬರಬೇಕಿದೆ. ಇನ್ನು 30% ವರದಿಗಳು ಮಾತ್ರವೇ ಬರಬೇಕಿದ್ದು, ಈ ವರದಿಗಳು ಇದೇ ವಾರದಲ್ಲಿ ಪೊಲೀಸರ ಕೈ ಸೇರಲಿವೆ ಎನ್ನಲಾಗುತ್ತಿದೆ. ಡಿಜಿಟಲ್ ಡಾಟಾ ರಿಟ್ರೀವ್ ಮಾಡುವ ಡಿವೈಸ್​ಗಳಲ್ಲಿ ಐಫೋನ್​ಗಳು ಸಹ ಇದ್ದು, ಇವುಗಳ ಡಾಟಾ ರಿಟ್ರೀವ್​ಗೆ ಹೆಚ್ಚಿನ ಸಮಯ ಹಿಡಿಯುತ್ತಿದೆ ಎನ್ನಲಾಗುತ್ತಿದೆ.

ಈಗಾಗಲೇ ಚಾರ್ಜ್​ ಶೀಟ್ ತಯಾರಿ ಪ್ರಕ್ರಿಯೆ ಪ್ರಾರಂಭ ಆಗಿದ್ದು, ಎಫ್​ಎಸ್​ಎಲ್ ವರದಿ ಬಂದ ಬಳಿಕ ಚಾರ್ಜ್​ಶೀಟ್ ತಯಾರಿ ಪ್ರಕ್ರಿಯೆಗೆ ವೇಗ ಸಿಗಲಿದೆ. ಇನ್ನು 20 ದಿನಗಳಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ತನಿಖಾ ವರದಿ ಸಲ್ಲಿಸುವ ಸಾಧ್ಯತೆ ದಟ್ಟವಾಗಿದೆ. ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ದರ್ಶನ್​ ಹಾಗೂ ಸಂಗಡಿಗಳು ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಈಗಾಗಲೇ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ ಕ್ಯಾಬ್ ಡ್ರೈವರ್ ಅನು ಕುಮಾರ್ ಸಹ ಜಾಮೀನು ಸಲ್ಲಿಕೆಗೆ ಸರ್ಜಿ ಸಲ್ಲಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್