ಲ್ಯಾಂಬೋರ್ಗಿನಿ ಕಾರಲ್ಲಿ ದರ್ಶನ್​; ಆಟೋದಲ್ಲಿ ಕಂಡ ಫ್ಯಾನ್ಸ್​ ಮಾತನಾಡಿಸೋಕೆ ಮರೆಯಲಿಲ್ಲ ಡಿ ಬಾಸ್​

ನಟ ದರ್ಶನ್​ ಇತ್ತೀಚಿನ ದಿನಗಳಲ್ಲಿ ಸುದ್ದಿಯಾಗಿದ್ದಾರೆ. ಅವರ ಮೇಲೆ ವಂಚನೆ ಪ್ರಯತ್ನ ನಡೆದಿದೆ ಎನ್ನುವ ಆರೋಪ ತಣ್ಣಗಾಗುವ ಮೊದಲೇ ದರ್ಶನ್​ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.

ಲ್ಯಾಂಬೋರ್ಗಿನಿ ಕಾರಲ್ಲಿ ದರ್ಶನ್​; ಆಟೋದಲ್ಲಿ ಕಂಡ ಫ್ಯಾನ್ಸ್​ ಮಾತನಾಡಿಸೋಕೆ ಮರೆಯಲಿಲ್ಲ ಡಿ ಬಾಸ್​
ಲ್ಯಾಂಬೋರ್ಗಿನಿ ಕಾರಲ್ಲಿ ಕಾಣಿಸಿಕೊಂಡ ದರ್ಶನ್​; ಆಟೋದಲ್ಲಿ ಕಂಡ ಫ್ಯಾನ್ಸ್​ ಮಾತನಾಡಿಸೋಕೆ ಮರೆಯಲಿಲ್ಲ ಡಿ ಬಾಸ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 15, 2021 | 7:03 PM

ನಟ ದರ್ಶನ್​ ಅವರು ದೊಡ್ಡಮಟ್ಟದ ಅಭಿಮಾನಿಗಳನ್ನು ಹೊಂದಿದ್ದಾರೆ. ಇದಕ್ಕೆ ಕಾರಣ, ಅವರು ಅಭಿಮಾನಿಗಳ ಮೇಲೆ ತೋರುವ ಪ್ರೀತಿ. ಎಲ್ಲಾದರೂ ತೆರಳುವಾಗ ಫ್ಯಾನ್ಸ್​ ಸಿಕ್ಕರೆ ಅವರನ್ನು ಮಾತನಾಡಿಸಿಕೊಂಡೇ ಮುಂದೆ ಹೋಗೋದು ದರ್ಶನ್​ ರೂಢಿ. ಇಂದು ಅವರು ಲ್ಯಾಂಬೋರ್ಗಿನಿ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ಸದ್ಯ ಸಾಕಷ್ಟು ವೈರಲ್​ ಆಗುತ್ತಿದೆ.

ನಟ ದರ್ಶನ್​ ಇತ್ತೀಚಿನ ದಿನಗಳಲ್ಲಿ ಸುದ್ದಿಯಾಗಿದ್ದಾರೆ. ಅವರ ಮೇಲೆ ವಂಚನೆ ಪ್ರಯತ್ನ ನಡೆದಿದೆ ಎನ್ನುವ ಆರೋಪ ತಣ್ಣಗಾಗುವ ಮೊದಲೇ ದರ್ಶನ್​ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ವಿವಾದಗಳ ಕೇಂದ್ರಬಿಂದು ಆಗಿದ್ದು ಮೈಸೂರು. ಹೀಗಾಗಿ, ಬೆಂಗಳೂರಿನಿಂದ ದರ್ಶನ್​ ಮೈಸೂರಿಗೆ ತೆರಳಿದ್ದಾರೆ.  ಅದೂ ತಮ್ಮ ಲ್ಯಾಂಬೋರ್ಗಿನಿ ಕಾರಿನಲ್ಲಿ ಅನ್ನೋದು ವಿಶೇಷ.

ನಟ ದರ್ಶನ್ ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ದಾರೆ. ಹಳದಿ ಬಣ್ಣದ ಲ್ಯಾಂಬೋರ್ಗಿನಿ ಉರುಸ್​ಅನ್ನು ತಾವೇ ಚಲಾಯಿಸಿಕೊಂಡು ಮೈಸೂರು ಕಡೆ ಹೊರಟಿದ್ದಾರೆ. ದಾರಿ ಮಧ್ಯೆ ಆಟೋದಲ್ಲಿ ಅವರಿಗೆ ಅಭಿಮಾನಿಗಳು ಎದುರಾಗಿದ್ದಾರೆ. ಈ ವೇಳೆ ದರ್ಶನ್​ ಅವರನ್ನು ಮಾತನಾಡಿಸಿದ್ದಾರೆ. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ನಿರ್ಮಾಪಕ ಸಂದೇಶ್ ಅವರ ‘ಸಂದೇಶ್ ದಿ ಪ್ರಿನ್ಸ್’ ಹೋಟೆಲ್ನಲ್ಲಿರುವ ಸಿಬ್ಬಂದಿ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ ಮಾಡಿದ್ದರು. ಇದಾದ ನಾಲ್ಕು ಗಂಟೆ ನಂತರದಲ್ಲಿ ಮತ್ತೆ ಇಂದ್ರಜಿತ್ ಸುದ್ದಿಗೋಷ್ಠಿ ಕರೆದು ಹೋಟೆಲ್ ಸಿಬ್ಬಂದಿ ಗಂಗಾಧರ ಮಾತ್ರವಲ್ಲ ಜುಲೈ 3ರಂದು ಗೋಪಾಲ್ ರಾಜ್ ಎಂಬುವವರ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ. ಅವರು ಕೋಮಾದಲ್ಲಿದ್ದಾರೆ ಎನ್ನುವ ಗಂಭೀರ ಆರೋಪವನ್ನು ಇಂದ್ರಜಿತ್ ಮಾಡಿದ್ದರು. ಆದರೆ ಇದು ಸುಳ್ಳು ಎಂದು ಗೋಪಾಲ್ ರಾಜ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ‘ತಪ್ಪು ಮಾಡಿದ ಸೆಲೆಬ್ರಿಟಿಗಳು ತಪ್ಪಿಸಿಕೊಳ್ಳಬಾರದು’; ದರ್ಶನ್​ ವಿರುದ್ಧ ಮತ್ತೆ ಹರಿಹಾಯ್ದ ಇಂದ್ರಜಿತ್​ ಲಂಕೇಶ್

‘ದರ್ಶನ್​ ನನ್ನ ಮೇಲೆ ಹಲ್ಲೆ ಮಾಡಿಲ್ಲ, ನಾನು ಕೋಮಾದಲ್ಲೂ ಇಲ್ಲ, ಇಂದ್ರಜಿತ್​ ಲಂಕೇಶ್​ ಹೇಳಿಕೆ ಸುಳ್ಳು’

Published On - 6:56 pm, Thu, 15 July 21

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು