AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಸ್​​ ಮೇಲೆ ಕರುಣೆ ತೋರಿ’: ರಾಷ್ಟ್ರಪತಿಗಳಿಗೆ ದರ್ಶನ್ ಅಭಿಮಾನಿಗಳ ಪತ್ರ

ಪ್ರದೋಶ್​​ ಅವರ ಮಾಫಿ ಸಾಕ್ಷಿ ತಡೆಯಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ ನಟ ದರ್ಶನ್. ಇತ್ತ ಹೊರಗೆ ಅವರ ಅಭಿಮಾನಿಗಳು ರಾಷ್ಟ್ರಪತಿ ಅವರಿಗೆ ಪತ್ರ ಬರೆದಿದ್ದು, ತಮ್ಮ ನೆಚ್ಚಿನ ನಟನಿಗೆ ಸಹಾಯ ಮಾಡುವಂತೆ ಕೋರಿದ್ದಾರೆ. ಆದರೆ ಇದು ನಿಜವಾದ ಕಾಳಜಿಯೋ ಅಥವಾ ಪ್ರಚಾರದ ಸ್ಟಂಟೊ ತಿಳಿಯುತ್ತಿಲ್ಲ.

‘ಬಾಸ್​​ ಮೇಲೆ ಕರುಣೆ ತೋರಿ’: ರಾಷ್ಟ್ರಪತಿಗಳಿಗೆ ದರ್ಶನ್ ಅಭಿಮಾನಿಗಳ ಪತ್ರ
Darshan Fans1
ಮಂಜುನಾಥ ಸಿ.
|

Updated on:Sep 24, 2026 | 9:17 PM

Share

ಮುಖ್ಯಾಂಶಗಳು

  • ದರ್ಶನ್ ಅಭಿಮಾನಿಗಳಿಂದ ರಾಷ್ಟ್ರಪತಿಗೆ ಪತ್ರ
  • ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದಿರುವ ದರ್ಶನ್ ಅಭಿಮಾನಿಗಳು
  • ದರ್ಶನ್ ಬಗ್ಗೆ ಕರುಣೆ ತೋರಿ ಎಂದು ಮನವಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪಗೆ ಜಾಮೀನು ದೊರಕುವುದು ಬಹುತೇಕ ಕನಸಾಗಿದೆ. ಕನಿಷ್ಟ ಒಂದು ವರ್ಷಕ್ಕೂ ಹೆಚ್ಚು ಸಮಯ ಅವರು ಜೈಲಿನಲ್ಲಿರಬೇಕಿದೆ. ಇದರ ನಡುವೆ ಪ್ರದೋಶ್, ಮಾಫಿ ಸಾಕ್ಷಿ ಆಗಿ ಪರಿವರ್ತನೆಗೊಂಡಿರುವುದು ದರ್ಶನ್ ಅನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದ್ದು, ಪ್ರದೋಶ್​​ ಅವರ ಮಾಫಿ ಸಾಕ್ಷಿ ತಡೆಯಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ. ಇತ್ತ ಹೊರಗೆ ಅವರ ಅಭಿಮಾನಿಗಳು ರಾಷ್ಟ್ರಪತಿ ಅವರಿಗೆ ಪತ್ರ ಬರೆದಿದ್ದು, ತಮ್ಮ ನೆಚ್ಚಿನ ನಟನಿಗೆ ಸಹಾಯ ಮಾಡುವಂತೆ ಕೋರಿದ್ದಾರೆ. ಆದರೆ ಇದು ನಿಜವಾದ ಕಾಳಜಿಯೋ ಅಥವಾ ಪ್ರಚಾರದ ಸ್ಟಂಟೊ ತಿಳಿಯುತ್ತಿಲ್ಲ.

ಈಗ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೊರೆ ಹೋಗಿರುವ ದರ್ಶನ್ ಅಭಿಮಾನಿಗಳು, ನಟನ ಪ್ರಕರಣವನ್ನು ಮಾನವೀಯ ದೃಷ್ಟಿಯಿಂದ ಪರಿಶೀಲಿಸಬೇಕೆಂದು ಕೋರಿ ಬರೆದಿರುವ ಪತ್ರವೊಂದು ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಪತ್ರದಲ್ಲಿ ಏನಿದೆ?

‘ಡಿ ಬಾಸ್ ಅಭಿಮಾನಿಗಳು, ಕರ್ನಾಟಕ’ ಎಂದು ಸಹಿ ಮಾಡಿರುವ ಪತ್ರ ಇದೀಗ ವೈರಲ್ ಆಗಿದ್ದು, ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆಯಲಾಗಿದೆ. ‘ನಾವು ನಿಮ್ಮನ್ನು ತಾಯಿ ಸ್ಥಾನದಲ್ಲಿ ಕಾಣುತ್ತೇವೆ. ನೀವು ಬಡವರ, ಆದಿವಾಸಿಗಳ, ನೊಂದವರ ಪರವಾಗಿ ನಿಲ್ಲುವ ತಾಯಿ. ನಮ್ಮ ಕರ್ನಾಟಕದ ಹೆಮ್ಮೆಯ ನಟ ಡಿ-ಬಾಸ್ ದರ್ಶನ್ ಸರ್ ಅವರು ಈಗ ಸಂಕಷ್ಟದಲ್ಲಿದ್ದಾರೆ. ಅವರು ಕನ್ನಡ ನಾಡಿನ ಕೋಟ್ಯಾಂತರ ಅಭಿಮಾನಿಗಳಿಗೆ ದೇವರ ಸಮಾನ. ಭಾರತದ ಕಾನೂನು ಮತ್ತು ನ್ಯಾಯಾಲಯದ ಮೇಲೆ ನಮಗೆ 100% ನಂಬಿಕೆ ಇದೆ. ನಾವು ಕಾನೂನನ್ನು ಗೌರವಿಸುತ್ತೇವೆ. ಆದರೆ ಒಬ್ಬ ತಾಯಿಯಾಗಿ, ದಯವಿಟ್ಟು ನಮ್ಮ ದರ್ಶನ್ ಅವರ ಪ್ರಕರಣವನ್ನು ಮಾನವೀಯ ದೃಷ್ಟಿಯಿಂದ ನೋಡಿ. ಅವರ ಆರೋಗ್ಯ, ಅವರ ಕುಟುಂಬ, ಅವರನ್ನು ನಂಬಿರುವ ಕೋಟ್ಯಾಂತರ ಅಭಿಮಾನಿಗಳನ್ನು ಪರಿಗಣಿಸಿ’ ಎಂದಿದ್ದಾರೆ.

ಇದನ್ನು ಓದಿ:ಮಾಫಿ ಸಾಕ್ಷಿ ತಡೆಯಲು ಇನ್ನಿಲ್ಲದ ಯತ್ನ: ದರ್ಶನ್ ಪರ ವಕೀಲರ ವಾದವೇನು?

ಮುಂದುವರೆದು, ‘ಕಾನೂನಿನ ಪ್ರಕಾರ ಏನು ನ್ಯಾಯವೋ ಅದು ಸಿಗಲಿ, ಆದರೆ ಅದಷ್ಟು ಬೇಗ ನ್ಯಾಯ ಸಿಗುವಂತೆ ತಮ್ಮ ಕಡೆಯಿಂದ ಸಾಧ್ಯವಾದ ಸಹಾಯ ಮಾಡಬೇಕೆಂದು ತಮ್ಮಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತೇವೆ. ನಿಮ್ಮ ಮಮತೆಯ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ ಮೇಡಂ’ ಎಂದಿದ್ದಾರೆ. ಕನ್ನಡದಲ್ಲೇ ಬರೆದಿರುವ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರೋಗ್ಯದ ಬಗ್ಗೆ ಕಳವಳ

ಬಂಧನದ ನಂತರ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ದರ್ಶನ್ ಅವರಿಗೆ ಪದೇಪದೇ ಹಿನ್ನಡೆಯಾಗಿದೆ. ಜೈಲಿನಲ್ಲಿ ಅವರು ಬೆನ್ನುಮೂಳೆ ನೋವಿನಿಂದ ಬಳಲುತ್ತಿದ್ದು ಸೂಕ್ತ ಚಿಕಿತ್ಸೆ ಅಗತ್ಯವಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಪತ್ರದ ಚಿತ್ರಗಳು ಮತ್ತು ಪೋಸ್ಟರ್‌ಗಳನ್ನು ಅಭಿಯಾನದ ರೀತಿಯಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:15 pm, Thu, 24 September 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು