
ನಟ ದರ್ಶನ್ ಅಭಿಮಾನಿಗಳಿಗೆ ಇತ್ತೀಚೆಗೆ ರಮ್ಯಾ (Ramya) ಬಿಸಿ ಮುಟ್ಟಿಸಿದ್ದಾರೆ. ತಮಗೆ ಅಶ್ಲೀಲ ಸಂದೇಶ ಕಳುಹಿಸಿದ ಅನೇಕರ ಹೆಸರನ್ನು ಅವರು ಸೈಬರ್ ಕ್ರೈಮ್ಗೆ ನೀಡಿದ್ದು, ಈ ಪೈಕಿ ಕೆಲವರ ಬಂಧನ ಆಗಿದೆ. ಆದಾಗ್ಯೂ ಅವರ ಅಭಿಮಾನಿಗಳು ತಮ್ಮ ಕಾಯಕ ಮುಂದುವರಿಸಿದ್ದಾರೆ. ‘ದರ್ಶನ್ ರೌಡಿ ಆಗಬೇಕಿತ್ತು, ಅಪ್ಪಿ ತಪ್ಪಿ ಹೀರೋ ಆಗಿದ್ದಾರೆ’ ಎಂದಿದ್ದ ಕಂಟೆಂಟ್ ಕ್ರಿಯೇಟರ್ ಸೋನು ಶೆಟ್ಟಿಗೆ ಡಿ ಬಾಸ್ ಫ್ಯಾನ್ಸ್ ಅಶ್ಲೀಲ ಪದ ಬಳಕೆ ಮಾಡಿ ಬೈದಿದ್ದಾರೆ.
‘ಡಿ ಬಾಸ್ ಹಾಗೂ ಅವರ ಫ್ಯಾನ್ಸ್ ಇಷ್ಟ ಆಗಲ್ಲ. ಅವರು ರೌಡಿ ಆಗಬೇಕಿತ್ತು. ಅಪ್ಪಿ-ತಪ್ಪಿ ಹೀರೋ ಆಗಿದ್ದಾರೆ. ಅದುವೇ ಪ್ರಾಬ್ಲಂ. ಅವರ ಫ್ಯಾನ್ಸ್ ಕೂಡ ಹಾಗೆಯೇ ಇದ್ದಾರೆ. ಅವರ ಫ್ಯಾನ್ಸ್ಗೆ ಬುದ್ಧಿ ಕಲಿಸಬೇಕು’ ಎಂದು ವಾರಗಳ ಹಿಂದೆ ಸೋನು ಶೆಟ್ಟಿ ಪೋಸ್ಟ್ ಮಾಡಿದ್ದರು. ಇದಾದ ಬಳಿಕ ಅವರ ಕಮೆಂಟ್ ಬಾಕ್ಸ್ ಹಾಗೂ ಇನ್ಸ್ಟಾಗ್ರಾಮ್ ಇನ್ಬಾಕ್ಸ್ನಲ್ಲಿ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಹಾಗೂ ಬೆದರಿಕೆ ಒಡ್ಡುವ ಸಂದೇಶ ಕಳುಹಿಸುತ್ತಿದ್ದಾರೆ.
ಇದನ್ನೂ ಓದಿ: ಫ್ಯಾನ್ ಪೇಜ್ ನಿರ್ವಹಣೆಗೆ ದರ್ಶನ್ 25 ಲಕ್ಷ ಖರ್ಚು ಮಾಡ್ತಾರೆ; ಲಾಯರ್ ಜಗದೀಶ್
‘ದರ್ಶನ್ ಹೆಸರು ಬಳಸಿಕೊಂಡು ನೀವು ಪಬ್ಲಿಸಿಟಿ ಮಾಡಿಕೊಳ್ಳುತ್ತಿದ್ದೀರಾ ಎಂದು ಅನೇಕರು ಹೇಳುತ್ತಿದ್ದಾರೆ. ಆದರೆ, ನನಗೆ ಅವರ ಹೆಸರನ್ನು ತೆಗೆದುಕೊಂಡು ಪಬ್ಲಿಸಿಟಿ ಪಡೆದುಕೊಳ್ಳೋ ಅಗತ್ಯ ನನಗೆ ಇಲ್ಲ’ ಎಂದು ಸೋನು ಶೆಟ್ಟಿ ಹೇಳಿದ್ದಾರೆ. ಇದಾದ ಬಳಿಕ ಸೋನು ಶೆಟ್ಟಿ ಅವರು ಮತ್ತೊಂದು ವಿಡಿಯೋ ಹಂಚಿಕೊಂಡಿದ್ದು, ಇದರಲ್ಲಿ ದರ್ಶನ್ ಅಭಿಮಾನಿಗಳು ಮಾಡಿದ ಕೆಟ್ಟ ಕಮೆಂಟ್ಗಳನ್ನು ತೋರಿಸಿದ್ದಾರೆ. ಸದ್ಯ ಅವರು ಕಮೆಂಟ್ ಬಾಕ್ಸ್ ಆಫ್ ಮಾಡಿದ್ದಾರೆ.
ರಮ್ಯಾ ಅವರು ‘ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ನಿರೀಕ್ಷೆ ಇದೆ’ ಎಂದು ಹೇಳಿದ್ದರು. ಈ ಹೇಳಿಕೆಯ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಕೆಲವರು ಬೆದರಿಕೆ ಹಾಕಿದ್ದರು. ಇದಕ್ಕೆ ರಮ್ಯಾ ಕೇಸ್ ಹಾಕಿದ್ದಾರೆ. ಈ ಪ್ರಕರಣದಲ್ಲಿ ಕೆಲವರ ಬಂಧನ ಆಗಿದೆ. ಇದಾದ ಬಳಿಕವೂ ಅವರು ಬುದ್ಧಿ ಕಲಿತಂತೆ ಕಾಣಿಸುತ್ತಿಲ್ಲ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 10:13 am, Wed, 6 August 25