AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Movie: ದರ್ಶನ್ ಕಟೌಟ್​ಗೆ ಬಿಯರ್​ನಿಂದ ಅಭಿಷೇಕ; ವಿಡಿಯೋ ವೈರಲ್

ನ್ಸ್​ ಡಿ ಬಾಸ್​ ಮೇಲಿರುವ ಅಭಿಮಾನ ತೋರುತ್ತಿದ್ದಾರೆ. ತುಮಕೂರಿನ ಚಿತ್ರಮಂದಿರದಲ್ಲಿ ದರ್ಶನ್​ ಕಟೌಟ್​ಗೆ ಅಭಿಮಾನಿಗಳು ಬಿಯರ್​ನಿಂದ ಅಭಿಷೇಕ ಮಾಡಿಸಿದ್ದಾರೆ.

Roberrt Movie: ದರ್ಶನ್ ಕಟೌಟ್​ಗೆ ಬಿಯರ್​ನಿಂದ ಅಭಿಷೇಕ; ವಿಡಿಯೋ ವೈರಲ್
ಬಿಯರ್​ ಸುರಿಯುತ್ತಿರುವ ಅಭಿಮಾಣಿಗಳು
Follow us
ರಾಜೇಶ್ ದುಗ್ಗುಮನೆ
|

Updated on:Mar 11, 2021 | 12:49 PM

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಶಿವರಾತ್ರಿ ಪ್ರಯುಕ್ತ ಇಂದು (ಮಾರ್ಚ್​​ 11) ರಿಲೀಸ್​ ಆಗಿದೆ. ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆಗಳಲ್ಲಿ ಮುಂಜಾನೆ 6 ಗಂಟೆಗೆ ರಾಬರ್ಟ್​ ಪ್ರದರ್ಶನ ಕಂಡಿದೆ. ಸಿನಿಮಾ ಬಗ್ಗೆ ಪಾಸಿಟಿವ್​ ವಿಮರ್ಷೆಗಳು ಬರುತ್ತಿದ್ದು, ಅಭಿಮಾನಿಗಳು ಸಖತ್​ ಖುಷಿ ಆಗಿದ್ದಾರೆ. ಈ ಮಧ್ಯೆ ಫ್ಯಾನ್ಸ್​ ಡಿ ಬಾಸ್​ ಮೇಲಿರುವ ಅಭಿಮಾನ ತೋರುತ್ತಿದ್ದಾರೆ. ತುಮಕೂರಿನ ಚಿತ್ರಮಂದಿರದಲ್ಲಿ ದರ್ಶನ್​ ಕಟೌಟ್​ಗೆ ಅಭಿಮಾನಿಗಳು ಬಿಯರ್​ನಿಂದ ಅಭಿಷೇಕ ಮಾಡಿದ್ದಾರೆ. ಸಾಮಾನ್ಯವಾಗಿ ಅಭಿಮಾನಿಗಳು ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ ಹೂವಿನ ಮಳೆ ಸುರಿಯುವುದು ಸಾಮಾನ್ಯ. ಆದರೆ, ತುಮಕೂರಿನಲ್ಲಿ ಅಭಿಮಾನಿಗಳು ಚಿತ್ರಮಂದಿರದ ಎದುರು ದರ್ಶನ್​ ಫೋಟೋ ಹಾಗೂ ಕಟೌಟ್​ಗೆ ಬಿಯರ್​ನಿಂದ ಅಭಿಷೇಕ ಮಾಡಿ ಖುಷಿ ಹಂಚಿಕೊಂಡಿದ್ದಾರೆ.

ಜೆಪಿ ನಗರದಲ್ಲಿ 13 ಕಟೌಟ್ಸ್​ ಬೆಂಗಳೂರಿನ ಹಲವು ಚಿತ್ರಮಂದರಿಗಳಲ್ಲಿ ಮುಂಜಾನೆ 6 ಗಂಟೆಗೆ ರಾಬರ್ಟ್​ ಸಿನಿಮಾ ಪ್ರದರ್ಶನ ಕಂಡಿದೆ. ಜೆಪಿ ನಗರದ ಸಿದ್ಧೇಶ್ವರ ಥಿಯೇಟರ್​​ನಲ್ಲಿ ಫ್ಯಾನ್ಸ್ ಬರೋಬ್ಬರಿ 13 ಕಟೌಟ್ ಹಾಕಿದ್ದಾರೆ. ಒಂದೊಂದು ಕಟೌಟ್ಒಂ ದೊಂದು ರೀತಿ ಇದೆ. ದರ್ಶನ ಅಭಿನಯಿಸಿರುವ ಸಿನಿಮಾಗಳ ಪಾತ್ರಗಳ ಗೆಟಪ್​ನಲ್ಲಿ ಕಟೌಟ್ಸ್ ಸಿದ್ಧಗೊಂಡಿದೆ.

ಭರ್ಜರಿ ಕಲೆಕ್ಷನ್​ ಸಾಧ್ಯತೆ ಗುರುವಾರ ಶಿವರಾತ್ರಿ ಪ್ರಯುಕ್ತ ರಜೆ ಇದೆ. ಹೀಗಾಗಿ ದೊಡ್ಡ ಸಂಖ್ಯೆಯಲ್ಲೇ ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಾರೆ. ಶುಕ್ರವಾರ ಚಿತ್ರರಂಗದ ಪಾಲಿಗೆ ವಿಶೇಷ ದಿನ. ಹೀಗಾಗಿ, ಅಂದು ಕೂಡ ಪ್ರೇಕ್ಷಕರು ಥಿಯೇಟರ್​ಗೆ ಬರುತ್ತಾರೆ. ಇನ್ನು, ಶನಿವಾರ-ಭಾನುವಾರ ವೀಕೆಂಡ್​ ಆದ್ದರಿಂದ ಅಂದು ಕೂಡ ದರ್ಶನ್​ ಸಿನಿಮಾ ಬಾಕ್ಸ್​ ಆಫೀಸ್​ ಧೂಳೆಬ್ಬಿಸುವ ಲಕ್ಷಣ ಇದೆ. ಈ ಹಿಂದೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದ ‘ಚೌಕ’ ಸಿನಿಮಾದಲ್ಲಿ ದರ್ಶನ್​ ಅವರು ರಾಬರ್ಟ್​ ಎಂಬ ಅತಿಥಿ ಪಾತ್ರವನ್ನು ಮಾಡಿದ್ದರು. ಈಗ ಅದೇ ಪಾತ್ರವನ್ನು ಮುಖ್ಯವಾಗಿ ಇಟ್ಟುಕೊಂಡು ತರುಣ್​ ಅವರು ಹೊಸ ಕಥೆ ಬರೆದು ‘ರಾಬರ್ಟ್​’ ಸಿನಿಮಾ ಮಾಡಿದ್ದಾರೆ. ಆಶಾ ಭಟ್​ ಸಿನಿಮಾದ ನಾಯಕಿ. ತೆಲುಗಿನ ಖಳ ಜಗಪತಿ ಬಾಬು ಈ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ವಿನೋದ್​​ ಪ್ರಭಾಕರ್​, ರವಿಶಂಕರ್​, ಸೋನಲ್​ ಮಂಥೆರೋ, ಚಿಕ್ಕಣ್ಣ, ಅವಿನಾಶ್​, ದೇವರಾಜ್​, ಶಿವರಾಜ್​ ಕೆ.ಆರ್​. ಪೇಟೆ, ಐಶ್ವರ್ಯಾ ಪ್ರಸಾದ್​ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಬಾ.. ಬಾ.. ನಾ ರೆಡಿ ಅಂದ ರಾಬರ್ಟ್.. ಚಿತ್ರಮಂದಿರಗಳ ಗ್ಲಾಸ್ ಪುಡಿ ಪುಡಿ, ದರ್ಶನ್ ಅಭಿಮಾನಿಗಳ ಮೇಲೆ ಲಾಠಿ ಚಾರ್ಜ್

Published On - 12:47 pm, Thu, 11 March 21

ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ