AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ಜೈಲಿಂದಲೇ ಸಂದೇಶ ಕಳಿಸಿದ ನಟ ದರ್ಶನ್

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರ ಜಾಮೀನು ರದ್ದಾಗಿ ಇದೀಗ ಮತ್ತೊಮ್ಮೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಗುರುವಾರ ರಾತ್ರಿ ದರ್ಶನ್ ಅವರನ್ನು ಪರಪ್ಪನ ಜೈಲಿಗೆ ಕಳುಹಿಸಲಾಗಿದೆ. ಇದೀಗ ನಟ ದರ್ಶನ್, ಜೈಲಿಂದಲೇ ತಮ್ಮ ಅಭಿಮಾನಿಗಳಿಗೆ ಸಂದೇಶವೊಂದ್ನು ನೀಡಿದ್ದಾರೆ. ದರ್ಶನ್ ನೀಡಿರುವ ಸಂದೇಶವನ್ನು ವಿಜಯಲಕ್ಷ್ಮಿ ದರ್ಶನ್ ಹಂಚಿಕೊಂಡಿದ್ದಾರೆ.

ಅಭಿಮಾನಿಗಳಿಗೆ ಜೈಲಿಂದಲೇ ಸಂದೇಶ ಕಳಿಸಿದ ನಟ ದರ್ಶನ್
Darshan Thoogudeepa
ಮಂಜುನಾಥ ಸಿ.
|

Updated on: Aug 16, 2025 | 6:44 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೊಮ್ಮೆ ಜೈಲು ಸೇರಿದ್ದಾರೆ. ಈ ಬಾರಿ ಅವರ ಜೈಲು ವಾಸ ತುಸು ಸುದೀರ್ಘವಾಗಿಯೇ ಇರಲಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲ ಆರೋಪಿಗಳ ಜಾಮೀನು ರದ್ದಾಗಿದ್ದು ಎಲ್ಲರೂ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಗುರುವಾರ ರಾತ್ರಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಜೈಲು ಸೇರಿದ ಎರಡೇ ದಿನಕ್ಕೆ ಜೈಲಿನಿಂದಲೇ ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ದರ್ಶನ್ ರವಾನಿಸಿದ್ದಾರೆ.

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ದರ್ಶನ್ ಕಳಿಸಿರುವ ಸಂದೇಶವನ್ನು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ‘ಎಲ್ಲರಿಗು ನಮಸ್ಕಾರ, ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ‌ ಪ್ರೀತಿಯ ದರ್ಶನ್ ರವರು ನಿಮಗೆ ಕಳಿಸಿರುವ ಸಂದೇಶ’ ಎಂದು ವಿಜಯಲಕ್ಷ್ಮಿ ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ, ಮುಂದುವರೆದು, ದರ್ಶನ್ ಅವರ ಸಂದೇಶವನ್ನು ಪ್ರಕಟಿಸಿದ್ದಾರೆ. ‘ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ‌ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು. ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ‌ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ. ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ‌ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ , ಹಾಗಾಗಿ ನನ್ನ “ ದಿ ಡೆವಿಲ್ “ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೆ ಅಡೆತಡೆಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇದ್ದೇನೆ. ಹಾಗು ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿನಂಬಿದ್ದೇನೆ. ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು. ನಿಮ್ಮ ಪ್ರೀತಿಯ ದಾಸ’ ಎಂದು ದರ್ಶನ್ ಸಂದೇಶ ನೀಡಿದ್ದಾರೆ.

ಈ ಸಂದೇಶದ ಮೂಲಕ ‘ಡೆವಿಲ್’ ಸಿನಿಮಾ ಕೆಲವೇ ವಾರಗಳಲ್ಲಿ ಬಿಡುಗಡೆ ಆಗಲಿದೆ. ತಾವು ಒಳಗಿದ್ದರೂ, ಹೊರಗಿದ್ದರೂ ಸಿನಿಮಾ ಅನ್ನು ಗೆಲ್ಲಿಸುವಂತೆ ಪರೋಕ್ಷವಾಗಿ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ದರ್ಶನ್ ನಟಿಸಿರುವ ‘ಡೆವಿಲ್’ ಸಿನಿಮಾ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಆ ವೇಳೆಗೆ ದರ್ಶನ್ ಜೈಲಿನಲ್ಲೇ ಇರುವ ಸಾಧ್ಯತೆ ಹೆಚ್ಚಾಗಿದೆ. ಆದರೆ ಸಿನಿಮಾ ಮೇಲೆ ಬಂಡವಾಳ ಹಾಕಿ ವರ್ಷಗಳಿಂದಲೂ ಕಾಯುತ್ತಿರುವ ನಿರ್ಮಾಪಕರು, ಮತ್ತೆ ದರ್ಶನ್ ಬಿಡುಗಡೆ ಆಗುವವರೆಗೆ ಕಾಯಲಾರರು ಹೀಗಾಗಿ ನಿಗದಿತ ದಿನಾಂಕದಂತೆ ಸಿನಿಮಾ ಬಿಡುಗಡೆಗೆ ಮುಂದಾಗಿದ್ದಾರೆ.

ಈ ಹಿಂದೆ ದರ್ಶನ್ ನಟನೆಯ ‘ಸಾರಥಿ’ ಸಿನಿಮಾ ಸಹ ದರ್ಶನ್ ಜೈಲಿನಲ್ಲಿರುವಾಗಲೇ ಬಿಡುಗಡೆ ಆಗಿತ್ತು. ಪತ್ನಿ ವಿಜಯಲಕ್ಷ್ಮಿ ಮೇಲೆ ಧಾರುಣವಾಗಿ ದರ್ಶನ್ ಹಲ್ಲೆ ಮಾಡಿದ್ದರು. ಆ ಕಾರಣ ಅವರನ್ನು ಬಂಧಿಸಲಾಗಿತ್ತು. ಅವರ ಬಂಧನವಾದ ಮರುದಿನ ಸಿನಿಮಾ ಬಿಡುಗಡೆ ಆಯ್ತು, ಸಿನಿಮಾ ಬ್ಲಾಕ್ ಬಸ್ಟರ್ ಸಹ ಆಯ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ