
ರೇಣುಕಾಸ್ವಾಮಿ (Renukaswami) ಕೊಲೆ ಪ್ರಕರಣದಲ್ಲಿ ಆರೋಪಿ ಆದ ಬಳಿಕ ನಟ ದರ್ಶನ್ (Darshan) ಅವರಿಗೆ ವಿದೇಶಕ್ಕೆ ಹೋಗಲು ಅನುಮತಿ ಇರಲಿಲ್ಲ. ಈಗ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ನ್ಯಾಯಾಲಯದಲ್ಲಿ ಅವರಿಗೆ ಅನುಮತಿ ಸಿಕ್ಕಿದೆ. ಸಿನಿಮಾ ಶೂಟಿಂಗ್‌ಗೆ ವಿದೇಶಕ್ಕೆ ಹೋಗಲು ಕೋರ್ಟ್ ಅನುಮತಿ ನೀಡಿದೆ. ಜುಲೈ 1ರಿಂದ ಜುಲೈ 27ರವರೆಗೆ ವಿದೇಶದಲ್ಲಿ ಸಿನಿಮಾ ಶೂಟಿಂಗ್ ಮಾಡಲು ಅವಕಾಶ ನೀಡಲಾಗಿದೆ. ಕೆಲವು ಷರತ್ತುಗಳನ್ನು ವಿಧಿಸುವ ಮೂಲಕ ದರ್ಶನ್ ಅವರಿಗೆ ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ಅನುಮತಿ ಕೊಟ್ಟಿದೆ. ಇದರಿಂದ ದರ್ಶನ್ ಅವರು ಚಿಂತೆ ಇಲ್ಲದೇ ವಿದೇಶದಲ್ಲಿ ‘ಡೆವಿಲ್’ ಸಿನಿಮಾದ ಶೂಟಿಂಗ್ ಮಾಡಬಹುದಾಗಿದೆ.
ರೇಣುಕಾಸ್ವಾಮಿ ಕೇಸ್ನಲ್ಲಿ ದರ್ಶನ್ ಅವರು 2ನೇ ಪ್ರಮುಖ ಆರೋಪಿ ಆಗಿದ್ದಾರೆ. ಹಲವು ತಿಂಗಳ ಕಾಲ ಜೈಲು ವಾಸ ಅನುಭವಿಸಿ ಬಂದಿದ್ದಾರೆ. ಕರ್ನಾಟಕ ಹೈಕೋರ್ಟ್ ದರ್ಶನ್ಗೆ ಜಾಮೀನು ನೀಡಿದೆ. ಇದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. ಸದ್ಯಕ್ಕೆ ಅರ್ಜಿ ವಿಚಾರಣೆ ದಿನಾಂಕ ಮುಂದೂಡಿಕೆ ಆಗಿದೆ. ಇದರ ಜೊತೆ ವಿದೇಶಕ್ಕೆ ಹೋಗಲು ಅನುಮತಿ ಸಿಕ್ಕಿದ್ದರಿಂದ ದರ್ಶನ್ ನಿರಾಳರಾಗಿದ್ದಾರೆ.
ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಮುಂದಿನ ವಿಚಾರಣೆಯ ದಿನಾಂಕದಲ್ಲಿ ದರ್ಶನ್ ಅವರು ತಪ್ಪದೇ ಹಾಜರಾಗಬೇಕು. ಈ ಷರತ್ತಿನ ಮೇರೆಗೆ ಅವರಿಗೆ ವಿದೇಶಕ್ಕೆ ಹೋಗಲು ನ್ಯಾಯಾಲಯ ಅನುಮತಿ ನೀಡಿದೆ. ದರ್ಶನ್ ಅವರು ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಅರೆಸ್ಟ್ ಆದ ಬಳಿಕ ‘ಡೆವಿಲ್: ದಿ ಹೀರೋ’ ಸಿನಿಮಾದ ಶೂಟಿಂಗ್ ನಿಂತಿತ್ತು. ಜಾಮೀನು ಸಿಕ್ಕ ಬಳಿಕ ಮತ್ತೆ ಶೂಟಿಂಗ್ ಆರಂಭಿಸಲಾಯಿತು.
ಇದನ್ನೂ ಓದಿ: ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ವಿದೇಶದಲ್ಲಿ ಕೂಡ ‘ಡೆವಿಲ್: ದಿ ಹೀರೋ’ ಸಿನಿಮಾದ ಚಿತ್ರೀಕರಣ ನಡೆಯಬೇಕಿದೆ. ಆ ಸಲುವಾಗಿ ಅನುಮತಿ ನೀಡಬೇಕು ಎಂದು ನ್ಯಾಯಾಲಯಕ್ಕೆ ದರ್ಶನ್ ಅರ್ಜಿ ಸಲ್ಲಿಸಿದ್ದರು. ದರ್ಶನ್ ಅವರ ಮನವಿಯನ್ನು ಕೋರ್ಟ್ ಪುರಸ್ಕರಿಸಿದೆ. ಇದರಿಂದ ದರ್ಶನ್ ಹಾಗೂ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ‘ಡೆವಿಲ್: ದಿ ಹೀರೋ’ ಸಿನಿಮಾಗೆ ಪ್ರಕಾಶ್ ವೀರ್ ನಿರ್ದೇಶನ ಮಾಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.