ದರ್ಶನ್ ಜೈಲಲ್ಲಿ ಯಾರ ಮೇಲೂ ಹಲ್ಲೆ ಮಾಡಿಲ್ಲ; ವಿಜಯಲಕ್ಷ್ಮೀ
ನಟ ದರ್ಶನ್ ಜೈಲಿನಲ್ಲಿ ಸಹ ಕೈದಿಗಳ ಮೇಲೆ ಹಲ್ಲೆ ಮಾಡಿಲ್ಲ ಎಂದು ಅವರ ಪತ್ನಿ ವಿಜಯಲಕ್ಷ್ಮೀ ಸ್ಪಷ್ಟಪಡಿಸಿದ್ದಾರೆ. ದರ್ಶನ್ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಮತ್ತು ಉದ್ದೇಶಪೂರ್ವಕ ಎಂದು ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಸತ್ಯ ಮೌನವಾಗಿರಬಹುದು, ಆದರೆ ಸುಳ್ಳುಗಳು ಜೋರಾಗಿ ಪ್ರತಿಧ್ವನಿಸುತ್ತವೆ ಎಂದು ವಿಜಯಲಕ್ಷ್ಮೀ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ.

ದರ್ಶನ್ ಅವರ ‘ಡೆವಿಲ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಸಂದರ್ಭದಲ್ಲಿ ಅವರ ಬಗ್ಗೆ ಒಂದು ಗಂಭೀರ ಆರೋಪ ಕೇಳಿ ಬಂದಿತ್ತು. ಜೈಲಿನಲ್ಲಿ ಸಹ ಕೈದಿಗಳ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಸುದ್ದಿ ಸಂಚಲನ ಸೃಷ್ಟಿ ಮಾಡಿತ್ತು. ಜೈಲಿಗೆ ಹೋದರೂ ದರ್ಶನ್ ಬದಲಾಗಲಿಲ್ಲವಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು. ಈ ವಿಷಯ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಬೇಸರ ಮೂಡಿಸಿದೆ. ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ
ದರ್ಶನ್ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ‘ದರ್ಶನ್ ಜೈಲಲ್ಲಿ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ. ನಾನು ಖುದ್ದಾಗಿ ಜೈಲಿಗೆ ಭೇಟಿ ಮಾಡಿ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರ ಮೇಲಿನ ಆರೋಪಗಳೆಲ್ಲ ಉದ್ದೇಶಪೂರ್ವಕವಾಗಿ ಮಾಡಲಾಗಿದೆ’ ಎಂದು ವಿಜಯಲಕ್ಷ್ಮೀ ಬರೆದುಕೊಂಡಿದ್ದಾರೆ.
‘ದರ್ಶನ್ ಕುರಿತ ವದಂತಿಗಳಿಂದ ನನಗೆ ನೋವುಂಟಾಗಿ. ಸತ್ಯವು ಸ್ವಲ್ಪ ಸಮಯದವರೆಗೆ ಮೌನವಾಗಿರಬಹುದು. ಆದರೆ ಎಂದಿಗೂ ತಲೆಬಾಗುವುದಿಲ್ಲ. ಸುಳ್ಳುಗಳು ಜೋರಾಗಿ ಪ್ರತಿಧ್ವನಿಸುತ್ತದೆ’ ಎಂದು ವಿಜಯಲಕ್ಷ್ಮೀ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಸಹ ಕೈದಿಗಳಿಗೆ ದರ್ಶನ್ ದೈಹಿಕ ಕಿರುಕುಳ; ಸೆಲ್ನಲ್ಲೇ ನಡೆಯಿತು ದೊಡ್ಡ ಜಗಳ
ವರದಿ ಏನು?
ದರ್ಶನ್ ಅವರು ಜೈಲಿನ ಕಠಿಣ ನಿಯಮಗಳಿಂದ ಕಂಗಾಲಾಗಿದ್ದಾರೆ ಎಂದು ಹೇಳಲಾಗಿತ್ತು. ಅವರು ಸಹ ಕೈದಿಗಳ ಮೇಲೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿದ್ದಾರೆ ಎನ್ನಲಾಗಿತ್ತು. ಸೆಲ್ನಲ್ಲೇ ದೊಡ್ಡ ಜಗಳ ನಡೆದಿದೆ ಎಂದು ಹೇಳಲಾಗಿತ್ತು. ಅಲ್ಲದೆ, ಇಬ್ಬರು ಕೈದಿಗಳು ದರ್ಶನ್ ಟಾರ್ಚರ್ ತಡೆಯಲಾರದೆ ಚಿತ್ರದುರ್ಗ ಜೈಲಿಗೆ ವರ್ಗಾಯಿಸುವಂತೆ ಕೇಳಿಕೊಂಡಿದ್ದರು ಎಂದು ಹೇಳಲಾಗಿತ್ತು. ಆದರೆ, ಇದು ಸುಳ್ಳು ಎಂದು ವಿಜಯಲಕ್ಷ್ಮೀ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




