AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 1ರ ತನಕ ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ; ಮತ್ತೆ 14 ದಿನ ಜೈಲು ವಾಸ

ನಟ ದರ್ಶನ್​ಗೆ ಜಾಮೀನು ಎಂಬುದು ಮರೀಚಿಕೆ ಆಗಿದೆ. ಈಗಾಗಲೇ 25ಕ್ಕೂ ಅಧಿಕ ದಿನಗಳ ಕಾಲ ಜೈಲಿನಲ್ಲಿ ಕಾಲ ಕಳೆದಿರುವ ದರ್ಶನ್​ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿಲಾಗಿದೆ. ದರ್ಶನ್​ ಮಾತ್ರವಲ್ಲದೇ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಆರೋಪಿಗಳಾಗಿರುವ ಪವಿತ್ರಾ ಗೌಡ ಹಾಗೂ ಸಹಚರರ ನ್ಯಾಯಾಂಗ ಬಂಧನದ ಅವಧಿಯನ್ನು ಆ.1ರವರೆಗೆ ವಿಸ್ತರಣೆ ಮಾಡಿ ಕೋರ್ಟ್​ ಆದೇಶಿಸಿದೆ.

ಆಗಸ್ಟ್ 1ರ ತನಕ ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ; ಮತ್ತೆ 14 ದಿನ ಜೈಲು ವಾಸ
ದರ್ಶನ್​
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jul 18, 2024 | 3:30 PM

Share

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್​ಗೆ ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಇಂದು (ಜುಲೈ 18) ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್​ ಮೂಲಕ ದರ್ಶನ್​, ಪವಿತ್ರಾ ಗೌಡ ಹಾಗೂ ಇನ್ನುಳಿದ ಆರೋಪಿಗಳು ಹಾಜರಾಗಿದ್ದರು. ಎಲ್ಲರಿಗೂ ಆಗಸ್ಟ್​ 1ರ ತನಕ ನ್ಯಾಯಾಂಗ ಬಂಧನ ಮುಂದುವರಿಯಲಿದೆ.

ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆದುಕೊಂಡು ಬಂದು, ಕೊಲೆ ಮಾಡಿದ ಆರೋಪದಲ್ಲಿ ದರ್ಶನ್​, ಪವಿತ್ರಾ ಗೌಡ ಸೇರಿ 17 ಜನರು ಜೈಲು ಪಾಲಾಗಿದ್ದಾರೆ. ಆದಷ್ಟು ಬೇಗ ಜಾಮೀನು ಪಡೆಯಬೇಕು ಎಂದು ದರ್ಶನ್​ ಪ್ರಯತ್ನಿಸುತ್ತಿದ್ದಾರೆ. ಆದರೆ ಇದು ಕೊಲೆ ಪ್ರಕರಣ ಆದ್ದರಿಂದ ಅವರಿಗೆ ಜಾಮೀನು ಪಡೆಯುವುದು ಕಷ್ಟವಾಗಿದೆ. ಇನ್ನೂ 14 ದಿನಗಳ ಕಾಲ ಅವರು ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯ ಆಗಿದೆ.

ಇದನ್ನೂ ಓದಿ: ಜೈಲು ಊಟದಿಂದ ದರ್ಶನ್​ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ; ಇಲ್ಲಿದೆ ವಿವರ

ಪರಪ್ಪನ ಅಗ್ರಹಾರದಿಂದ 13 ಆರೋಪಿಗಳು ಹಾಗೂ ತುಮಕೂರಿನಿಂದ 4 ಆರೋಪಿಗಳು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾದರು. ನ್ಯಾಯಾಧೀಶ ವಿಶ್ವನಾಥ‌ ಸಿ. ಗೌಡರ್ ಅವರು ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಅದೇಶಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು