‘ಆರೋಪಿಗಳ ವಿರುದ್ಧ ಪೂರ್ವಾಗ್ರಹಪೀಡಿತ ಕ್ರಮಗಳನ್ನು ಕೈಗೊಳ್ಳಲಾಗಿದೆ’; ಕೋರ್ಟ್​ನಲ್ಲಿ ವಕೀಲರ ವಾದ

ತನಿಖೆಯ ಲೋಪಗಳ ಬಗ್ಗೆ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಪ್ರಶ್ನೆಗಳನ್ನೆತ್ತಿದ್ದರು. ‘ಎಲ್ಲದಕ್ಕೂ ಉತ್ತರವಿದೆ’ ಎಂದು ಕೋರ್ಟ್​​ನಲ್ಲಿ ಪ್ರಸನ್ನ ಕುಮಾರ್ ಪ್ರತಿಕ್ರಿಯಿಸಿದ್ದರು. ಈಗ ಅವರು ವಾದ ಮಂಡನೆ ಆರಂಭಿಸಲಿದ್ದಾರೆ. ಅದಕ್ಕೂ ಮೊದಲು ದರ್ಶನ್ ಮ್ಯಾನೇಜರ್ ನಾಗರಾಜು ಹಾಗೂ ದರ್ಶನ್ ಕಾರು ಚಾಲಕ ಲಕ್ಷ್ಮಣ್ ಅವರ ಅರ್ಜಿ ವಿಚಾರಣೆ ನಡೆದಿದೆ.

‘ಆರೋಪಿಗಳ ವಿರುದ್ಧ ಪೂರ್ವಾಗ್ರಹಪೀಡಿತ ಕ್ರಮಗಳನ್ನು ಕೈಗೊಳ್ಳಲಾಗಿದೆ’; ಕೋರ್ಟ್​ನಲ್ಲಿ ವಕೀಲರ ವಾದ
ದರ್ಶನ್-ರೇಣುಕಾಸ್ವಾಮಿ
Follow us
Ramesha M
| Updated By: ರಾಜೇಶ್ ದುಗ್ಗುಮನೆ

Updated on: Oct 08, 2024 | 1:15 PM

ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್​ನಲ್ಲಿ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು (ಅಕ್ಟೋಬರ್ 8) ನಡೆಯಲಿದೆ. ದರ್ಶನ್ ವಿರುದ್ಧ ಪೊಲೀಸರು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ದರ್ಶನ್ ಪರ ವಕೀಲರಾದ ಸಿ.ವಿ.ನಾಗೇಶ್ ಅವರು ವಾದ ಮಂಡನೆ ಮಾಡಿದ್ದರು. ಇದಕ್ಕೆ ಪೊಲೀಸರ ಪರ ಎಸ್​​ಪಿಪಿ ಪ್ರಸನ್ನ ಕುಮಾರ್ ಪ್ರತಿವಾದ ಮಾಡುತ್ತಿದ್ದಾರೆ. ಅದಕ್ಕೂ ಮೊದಲು ದರ್ಶನ್ ಮ್ಯಾನೇಜರ್ ನಾಗರಾಜು ಹಾಗೂ ದರ್ಶನ್ ಕಾರು ಚಾಲಕ ಲಕ್ಷ್ಮಣ್ ಅವರ ಅರ್ಜಿ ವಿಚಾರಣೆ ನಡೆದಿದೆ.

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ನಾಗರಾಜು ಎ11 ಆದರೆ, ಕಾರು ಚಾಲಕ ಲಕ್ಷ್ಮಣ್ ಎ12 ಆಗಿದ್ದಾರೆ.  ಆರೋಪಿಗಳ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡನೆ ಮಾಡಿದ್ದಾರೆ. ‘ಹಿಂದೆಂದೂ ನಡೆಯದ ಘಟನೆಯಂತೆ ಬಿಂಬಿಸಲಾಗಿದೆ. ಘಟನೆ ಆಧರಿಸಿ ಸೆನ್ಸೇಷನ್ ಮಾಡುವ ಬದಲು ವ್ಯಕ್ತಿ ಆಧರಿಸಿ ಸೆನ್ಸೇಷನ್ ಮಾಡಲಾಗುತ್ತಿದೆ. ರಾಜಕಾರಣಿಗಳು, ನಟರ ಪ್ರಕರಣಗಳನ್ನು ಸೆನ್ಸೇಷನ್ ಮಾಡಲಾಗುತ್ತಿದೆ’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಮನೆ ಊಟದ ವಿಚಾರಕ್ಕೂ ಅನಗತ್ಯವಾಗಿ ಪ್ರಚಾರ ನೀಡಲಾಗಿದೆ. ಜೈಲಿನಲ್ಲಿನ ಫೋಟೋ ವೈರಲ್ ಆಗಿದ್ದಕ್ಕೆ ಖೈದಿಗಳನ್ನೇ ವರ್ಗಾಯಿಸಲಾಗಿದೆ. ಒಂದೇ ದಿನ‌ ಮೂರು ಎಫ್ಐಆರ್​​ಗಳನ್ನು ದಾಖಲಿಸಲಾಗಿದೆ. ಪೂರ್ವಾಗ್ರಹಪೀಡಿತ ಕ್ರಮಗಳನ್ನು ಆರೋಪಿಗಳ ವಿರುದ್ಧ ಕೈಗೊಳ್ಳಲಾಗಿದೆ’ ಎಂದು ಸಂದೇಶ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಕೂಡ ಇಂದೇ ನಡೆಯಲಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನ ತನಿಖೆಯ ಲೋಪಗಳ ಬಗ್ಗೆ ವಕೀಲ ಸಿ.ವಿ.ನಾಗೇಶ್ ಪ್ರಶ್ನೆಗಳನ್ನೆತ್ತಿದ್ದರು. ‘ಎಲ್ಲದಕ್ಕೂ ಉತ್ತರವಿದೆ’ ಎಂದು ಕೋರ್ಟ್​​ನಲ್ಲಿ ಪ್ರಸನ್ನ ಕುಮಾರ್ ಪ್ರತಿಕ್ರಿಯಿಸಿದ್ದರು. ಅವರು ಕೂಡ ಮಂಡನೆ ಮಾಡಲಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ? ಸಿಕ್ಕಿತು ಉತ್ತರ

ರೇಣುಕಾ ಸ್ವಾಮಿ ಕೊಲೆ ಜೂನ್​ನಲ್ಲಿ ನಡೆದಿತ್ತು. ಈ ಘಟನೆ ನಡೆದು ಇಂದಿಗೆ ಸರಿಯಾಗಿ ನಾಲ್ಕು ತಿಂಗಳು ಪೂರ್ಣಗೊಂಡಿದೆ. ಈವರೆಗೆ ದರ್ಶನ್​ಗೆ ಜಾಮೀನು ಪಡೆಯೋಕೆ ಸಾಧ್ಯವಾಗುತ್ತಿಲ್ಲ. ಅವರು ಪ್ರಕರಣದಿಂದ ಹೊರ ಬರಲು ನಿರಂತರವಾಗಿ ಪ್ರಯತ್ನ ಮಾಡುತ್ತಲೇ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಾನೆಂಥವನು ಅಂತ ಚಿಕ್ಕಮಗಳೂರು ಜನಕ್ಕೆ ಗೊತ್ತು: ಸಿಟಿ ರವಿ
ನಾನೆಂಥವನು ಅಂತ ಚಿಕ್ಕಮಗಳೂರು ಜನಕ್ಕೆ ಗೊತ್ತು: ಸಿಟಿ ರವಿ
Video: ಜರ್ಮನಿಯ ಕ್ರಿಸ್​ಮಸ್ ಮಾರ್ಕೆಟ್​ನಲ್ಲಿ ಜನರ ಮೇಲೆ ಹರಿದ ಕಾರು
Video: ಜರ್ಮನಿಯ ಕ್ರಿಸ್​ಮಸ್ ಮಾರ್ಕೆಟ್​ನಲ್ಲಿ ಜನರ ಮೇಲೆ ಹರಿದ ಕಾರು
ತಿರುಪತಿ 7 ದ್ವಾರಗಳ ರಹಸ್ಯ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ
ತಿರುಪತಿ 7 ದ್ವಾರಗಳ ರಹಸ್ಯ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ
Daily horoscope: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
Daily horoscope: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
ಇನ್ಮುಂದೆ ಬೆಂಗಳೂರು ಟ್ರಾಫಿಕ್​ ಬಗ್ಗೆ ಮೊಬೈಲ್​ನಲ್ಲೇ ತಿಳಿಯಿರಿ: ವಿಡಿಯೋ
ಇನ್ಮುಂದೆ ಬೆಂಗಳೂರು ಟ್ರಾಫಿಕ್​ ಬಗ್ಗೆ ಮೊಬೈಲ್​ನಲ್ಲೇ ತಿಳಿಯಿರಿ: ವಿಡಿಯೋ
ನಾವೇನು ಕೈಗೆ ಬಳೆ ತೊಟ್ಟು ಕುಳಿತಿಲ್ಲ: ವಿಜಯೇಂದ್ರ ಕಿಡಿ
ನಾವೇನು ಕೈಗೆ ಬಳೆ ತೊಟ್ಟು ಕುಳಿತಿಲ್ಲ: ವಿಜಯೇಂದ್ರ ಕಿಡಿ