ದರ್ಶನ್ಗೆ ಮತ್ತಷ್ಟು ಸಂಕಷ್ಟ; ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್?
ಸಾಮಾನ್ಯ ಕೋರ್ಟ್ನಲ್ಲಿ ವಿಚಾರಣೆ ನಡೆಸಿ ತೀರ್ಪು ನೀಡೋದಾದರೆ ಸಾಕಷ್ಟು ಸಮಯದ ಅಗತ್ಯತೆ ಇರುತ್ತದೆ. ಈ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರೋದು ಸೆಲೆಬ್ರಿಟಿ. ಹೀಗಾಗಿ, ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪ್ರತ್ಯೇಕ ಕೋರ್ಟ್ಗೆ ಪೊಲೀಸರು ಸರ್ಕಾರದ ಬಳಿ ಮನವಿ ಮಾಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ನಡೆದು ಎರಡು ತಿಂಗಳು ಕಳೆಯುತ್ತಾ ಬಂದಿದೆ. ಈ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಎಲ್ಲರನ್ನೂ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ. ಶೀಘ್ರವೇ ಪೊಲೀಸರು ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಿದ್ದಾರೆ. ಈ ಮಧ್ಯೆ ಪ್ರಕರಣದಲ್ಲಿ ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪೊಲೀಸರು ಹೊಸ ಯೋಜನೆ ರೂಪಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಸಾಮಾನ್ಯ ಕೋರ್ಟ್ನಲ್ಲಿ ವಿಚಾರಣೆ ನಡೆಸುವುದಾದರೆ ಸಾಕಷ್ಟು ಸಮಯ ಹಿಡಿಯಲಿದೆ. ಹೀಗಾಗಿ, ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪ್ರತ್ಯೇಕ ಕೋರ್ಟ್ಗೆ ಪೊಲೀಸರು ಸರ್ಕಾರದ ಬಳಿ ಮನವಿ ಮಾಡಿದ್ದಾರೆ ಎಂದು ವರದಿ ಆಗಿದೆ. ಇದರಿಂದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟು ಎದುರಾಗುವ ಸಾಧ್ಯತೆ ಇದೆ.
ಫಾಸ್ಟ್ಟ್ರ್ಯಾಕ್ ನ್ಯಾಯಾಲಯಕ್ಕೆ ಅಥವಾ ಸ್ಪೆಷಲ್ ಕೋರ್ಟ್ ಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಪ್ರತ್ಯೇಕ ಕೋರ್ಟ್ ವಿಚಾರವಾಗಿ ಸರ್ಕಾರ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವ ಕುತೂಹಲ ಮೂಡಿದೆ.
ಇದನ್ನೂ ಓದಿ: ‘ದರ್ಶನ್ ಬಳಿ ಹಣ ಇದೆ, ಆದರೆ ಬೌದ್ಧಿಕ ಪ್ರಜ್ಞೆ ಇಲ್ಲ’; ಮುಖ್ಯಮಂತ್ರಿ ಚಂದ್ರು ಬೇಸರ
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಇನ್ನೂ ಮುಗಿದಿಲ್ಲ. ಪೊಲೀಸರು ಕೆಲವು ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕುತ್ತಿದ್ದಾರೆ. ತನಿಖೆ ಮುಗಿಸಿದ ಬಳಿಕ ಚಾರ್ಜ್ಶೀಟ್ ಸಲ್ಲಿಕೆ ಆಗಲಿದೆ. ಚಾರ್ಜ್ಶೀಟ್ ಸಲ್ಲಿಸಿದ ನಂತರ ಸ್ಪೆಷಲ್ ಕೋರ್ಟ್ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಚಾರ್ಜ್ಶೀಟ್ ಸಲ್ಲಿಕೆ ಮಾಡಿದ ನಂತರ ಮತ್ತೆ ಸರ್ಕಾರದ ಎದುರು ಮನವಿ ಮಾಡಲು ಪೊಲೀಸರು ಮುಂಂದಾಗಿದ್ದಾರೆ. ಈ ತಿಂಗಳ ಅಂತ್ಯದೊಳಗೆ ಚಾರ್ಜ್ಶೀಟ್ ಸಲ್ಲಿಸಲು ಪೊಲೀಸರ ಸಿದ್ಧತೆ ಮಾಡಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.