‘ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಆಗಲಿ’; ಉಪೇಂದ್ರ ಮನವಿ

‘ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ, ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್​ನ ವಿಚಾರಣೆಯಲ್ಲಿ ನಿಷ್ಪಕ್ಷವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ’ ಎಂದಿದ್ದಾರೆ ಉಪೇಂದ್ರ.

‘ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಆಗಲಿ’; ಉಪೇಂದ್ರ ಮನವಿ
ದರ್ಶನ್-ಉಪೇಂದ್ರ
Follow us
|

Updated on: Jun 17, 2024 | 11:43 AM

ರೇಣುಕಾ ಸ್ವಾಮಿ (Renuka Swami) ಕೊಲೆ ಕೇಸ್​ನಲ್ಲಿ ಅನೇಕ ಸೆಲೆಬ್ರಿಟಿಗಳು ಮೌನ ಮುರಿದಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈ ವಿಚಾರದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಕೆಲವರು ದರ್ಶನ್ ಪರ ನಿಂತರೆ ಇನ್ನೂ ಕೆಲವರು ದರ್ಶನ್ ಅವರನ್ನು ವಿರೋಧಿಸಿದ್ದಾರೆ. ಇನ್ನೂ ಕೆಲವರು ಸಮತೋಲನವಾಗಿ ಮಾತನಾಡಿದ್ದಾರೆ. ದರ್ಶನ್ ಬಂಧನ ನಡೆದ ವಾರದ ಬಳಿಕ ಈ ಘಟನೆ ಬಗ್ಗೆ ಉಪೇಂದ್ರ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ, ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್​ನ ವಿಚಾರಣೆಯಲ್ಲಿ ನಿಷ್ಪಕ್ಷವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ’ ಎಂದು ಪೋಸ್ಟ್ ಆರಂಭಿಸಿದ್ದಾರೆ ದರ್ಶನ್.

‘ಯಾವುದೇ ಕೇಸ್ ಆದರೂ ಆ ಕೇಸ್​ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. (ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು )( ಕಾನೂನು ಸುಧಾರಣೆಗಳು #CriminalJusticeReforms )’ ಎಂದು ಸಲಹೆ ನೀಡಿದ್ದಾರೆ.

‘ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್​ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು  ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು. ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ’ ಎಂದಿದ್ದಾರೆ ಉಪೇಂದ್ರ.

ಇದನ್ನೂ ಓದಿ: ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್; ಬಂಧಿತರ ಸಂಖ್ಯೆ 19ಕ್ಕೆ ಏರಿಕೆ

‘ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆೇ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ’ ಅನ್ನೋದು ಉಪೇಂದ್ರ ಮಾತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ