ಜಾಮೀನು ಸಿಗದೇ ಪರದಾಡುತ್ತಿರುವ ಪವಿತ್ರಾ ಗೌಡ; ಡಿ.3ಕ್ಕೆ ಅರ್ಜಿ ವಿಚಾರಣೆ

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರಿಗೆ ಈವರೆಗೂ ಜಾಮೀನು ಸಿಕ್ಕಿಲ್ಲ. ಜೈಲು ಸೇರಿ 5 ತಿಂಗಳು ಕಳೆದಿದ್ದರೂ ಕೂಡ ಅವರಿಗೆ ಜಾಮೀನು ಪಡೆಯಲು ಸಾಧ್ಯವಾಗಿಲ್ಲ. ದರ್ಶನ್, ಪವಿತ್ರಾ ಗೌಡ, ನಾಗರಾಜ್​ ಸೇರಿದಂತೆ ಈ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ.

ಜಾಮೀನು ಸಿಗದೇ ಪರದಾಡುತ್ತಿರುವ ಪವಿತ್ರಾ ಗೌಡ; ಡಿ.3ಕ್ಕೆ ಅರ್ಜಿ ವಿಚಾರಣೆ
ಪವಿತ್ರಾ ಗೌಡ, ರೇಣುಕಾ ಸ್ವಾಮಿ

Updated on: Nov 29, 2024 | 8:49 PM

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರಿಗೆ ಈತನಕ ಜಾಮೀನು ಸಿಕ್ಕಿಲ್ಲ. ಪರಪ್ಪನ ಅಗ್ರಹಾರ ಜೈಲು ಸೇರಿ ಐದು ತಿಂಗಳುಗಳು ಕಳೆದಿದ್ದರೂ ಕೂಡ ಅವರಿಗೆ ಜಾಮೀನು ಪಡೆಯಲು ಸಾಧ್ಯವಾಗಿಲ್ಲ. ಪವಿತ್ರಾ ಗೌಡ, ದರ್ಶನ್, ನಾಗರಾಜ್​ ಸೇರಿದಂತೆ ಈ ಕೇಸ್​ಗೆ ಸಂಬಂಧಿಸಿದ ಪ್ರಮುಖ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಇಂದು (ನವೆಂಬರ್​ 29) ಕೂಡ ಹೈಕೋರ್ಟ್​ನಲ್ಲಿ ವಾದ ಮಂಡನೆ ಆಗಿದೆ. ಆದರೆ ವಿಚಾರಣೆಯನ್ನು ಡಿಸೆಂಬರ್​ 3ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಎ2 ಆಗಿರುವ ದರ್ಶನ್ ಪರ ವಕೀಲರಾದ ಸಿ.ವಿ. ನಾಗೇಶ್ ಅವರು ಈ ಕೇಸ್​ನ ತನಿಖೆಯಲ್ಲಿ ಇರುವ ಕೆಲವು ಲೋಪಗಳನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ದರ್ಶನ್ ಮ್ಯಾನೇಜರ್​ ನಾಗರಾಜ್​ ಪರ ವಕೀಲ ಸಂದೇಶ್ ಚೌಟ ಅವರು ವಾದ ಮಾಡಿದ್ದಾರೆ. ಎ1 ಪವಿತ್ರಾ ಗೌಡ ಅವರಿಗೆ ಸಂಬಂಧಿಸಿದಂತೆ ಹೈಕೋರ್ಟ್​ನಲ್ಲಿ ವಾದ ಮಂಡನೆ ಆಗುವುದು ಇನ್ನೂ ಬಾಕಿ ಇದೆ.

ದರ್ಶನ್, ನಾಗರಾಜ್​ ಪರ ವಕೀಲರು ಜಾಮೀನಿಗಾಗಿ ವಾದ ಮಾಡಿದ್ದು, ಅದಕ್ಕೆ ಪ್ರತಿಯಾಗಿ ಡಿಸೆಂಬರ್​ 3ರಂದು ಎಸ್​ಪಿಪಿ ವಾದ ಮಂಡನೆ ಮಾಡುವ ಸಾಧ್ಯತೆ ಇದೆ. ಡಿ.3ರಂದು ಹೈಕೋರ್ಟ್​ ತೀರ್ಪು ನೀಡಬಹುದು ಅಥವಾ ಆದೇಶ ಕಾಯ್ದಿರಿಸುವ ಸಾಧ್ಯತೆ ಇದೆ. ಪವಿತ್ರಾ ಗೌಡ ಅವರು ಜಾಮೀನು ಸಿಗುತ್ತೋ ಇಲ್ಲವೋ ಎಂಬ ಚಿಂತೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಅವರು ಜೈಲು ವಾಸ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಕೊನೆಗೂ ಬಂತು ದರ್ಶನ್ ಹಾಡು; ಕುಣಿದಾಡಿದ ರಜತ್

ದರ್ಶನ್​ ಅವರಿಗೆ ಬೆನ್ನು ನೋವಿನ ಸಮಸ್ಯೆ ಇದೆ. ಬಳ್ಳಾರಿ ಜೈಲಿನಲ್ಲಿ ಇದ್ದಾಗ ಅವರಿಗೆ ತೀವ್ರ ನೋವು ಕಾಣಿಸಿಕೊಂಡಿತ್ತು. ಹಾಗಾಗಿ ವಿವಿಧ ಪರೀಕ್ಷೆ ಮಾಡಿ ಕೂಡಲೇ ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆ ಎಂದು ವೈದ್ಯರು ಸಲಹೆ ನೀಡಿದ್ದರು. ಹಾಗಾಗಿ ಅವರಿಗೆ ಹೈಕೋರ್ಟ್​ನಲ್ಲಿ ಮಧ್ಯಂತರ ಜಾಮೀನು ನೀಡಲಾಯಿತು. ಜಾಮೀನು ಪಡೆದು ಒಂದು ತಿಂಗಳು ಆಗಿದ್ದರೂ ಕೂಡ ದರ್ಶನ್ ಸರ್ಜರಿ ಮಾಡಿಸಿಲ್ಲ. ಈಗ ರೆಗ್ಯುಲರ್​ ಬೇಲ್​ ಪಡೆಯಲು ಅವರ ಪರ ವಕೀಲರು ಹೈಕೋರ್ಟ್​ನಲ್ಲಿ ವಾದ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us