AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಕಾರಾಗೃಹ ಪೊಲೀಸರಿಗೆ ತಲೆನೋವಾದ ದರ್ಶನ್ ಬೆನ್ನುನೋವು

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್​ಗೆ ಜೈಲಿನಲ್ಲಿ ಆರೋಗ್ಯ ಸಮಸ್ಯೆ ಎದುರಾಗಿದೆ. ದರ್ಶನ್​ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಆದರೆ ದರ್ಶನ್​ರ ಬೆನ್ನು ನೋವು ಬಳ್ಳಾರಿ ಕಾರಾಗೃಹ ಸಿಬ್ಬಂದಿಯ ತಲೆ ನೋವಿಗೆ ಕಾರಣವಾಗಿದೆ.

ಬಳ್ಳಾರಿ ಕಾರಾಗೃಹ ಪೊಲೀಸರಿಗೆ ತಲೆನೋವಾದ ದರ್ಶನ್ ಬೆನ್ನುನೋವು
ಮಂಜುನಾಥ ಸಿ.
|

Updated on: Oct 13, 2024 | 1:11 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜೈಲು ಸೇರಿ ನಾಲ್ಕು ತಿಂಗಳಾಗಿವೆ. ಆರಂಭದ 14 ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ದರ್ಶನ್ ಆ ನಂತರ ಕಳೆದಿದ್ದೆಲ್ಲ ಜೈಲಿನಲ್ಲೆ. ಮೊದಲಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಅಲ್ಲಿ ರಾಜಾತಿಥ್ಯ ಸ್ವೀಕರಿಸಿದ ಆರೋಪ ಹೊತ್ತು ಅಲ್ಲಿಂದ ಈಗ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗಲೇ ತಮಗೆ ಬೆನ್ನು ಮತ್ತು ಕೈ ನೋವು ಇರುವ ಕಾರಣ ವಿಶೇಷ ಬೆಡ್​ ಬೇಕೆಂದು, ಮನೆ ಊಟ ಬೇಕೆಂದು ಬೇಡಿಕೆ ಇಟ್ಟಿದ್ದರು. ಆದರೆ ಅದನ್ನು ನೀಡಲಾಗಿರಲಿಲ್ಲ. ನ್ಯಾಯಾಲಯದ ಹೋರಾಟವೂ ವ್ಯರ್ಥವೇ ಆಯ್ತು. ಆ ಬಳಿಕ ಬಳ್ಳಾರಿ ಜೈಲು ಸೇರಿರುವ ದರ್ಶನ್​ಗೆ ಬೆನ್ನು ನೋವು ಹೆಚ್ಚಾಗಿದೆ. ಆದರೆ ದರ್ಶನ್​ರ ಬೆನ್ನು ನೋವು ಕಾರಾಗೃಹ ಸಿಬ್ಬಂದಿಗೆ ತಲೆನೋವಾಗಿ ಪರಿಣಿಮಿಸಿದೆ.

ದರ್ಶನ್​ಗೆ ಬೆನ್ನು ನೋವು ಹೆಚ್ಚಾಗಿದ್ದು, ಕಾರಾಗೃಹದ ವೈದ್ಯರು ವೀಕ್ಷಿಸಿ ಪೇಯಿನ್ ಕಿಲ್ಲರ್ ನೀಡಿದ್ದಾರೆ. ಅದಾದ ಬಳಿಕ ಹೊರಗಿನಿಂದ ವೈದ್ಯರನ್ನು ಕರೆಸಿ ತೋರಿಸಲಾಗಿದೆ. ವೈದ್ಯರು ಎಂಆರ್​ಐ ಮತ್ತು ಇತರೆ ಕೆಲ ಸ್ಕ್ಯಾನ್​ಗೆ ಸಲಹೆ ನೀಡಿದ್ದಾರೆ. ಆದರೆ ದರ್ಶನ್ ತಾವು ಯಾವುದೇ ಸ್ಕ್ಯಾನ್​ಗೆ ಒಳಗಾಗುವುದಿಲ್ಲ ಎಂದು ಹಠ ಹಿಡಿದಿದ್ದಾರೆ. ಮಾತ್ರವೇ ಅಲ್ಲದೆ, ನಾನು ಚಿಕಿತ್ಸೆ ಪಡೆದುಕೊಂಡರೆ ಅದು ಬೆಂಗಳೂರಿನಲ್ಲೇ ಎಂದು ಪಟ್ಟು ಹಿಡಿದಿದ್ದಾರೆ. ಇದು ಪೊಲೀಸರಿಗೆ ತಲೆ ನೋವಾಗಿದೆ.

ಇದನ್ನೂ ಓದಿ:

ದರ್ಶನ್ ಅನ್ನು ಬಳ್ಳಾರಿಯ ಬೀಮ್ಸ್ ಆಸ್ಪತ್ರೆ ವೈದ್ಯರು ಪರೀಕ್ಷಿಸಿ ಸಿಟಿ ಸ್ಕ್ಯಾನ್ ಮತ್ತು ಎಂಆರ್​ಐ ಸ್ಕ್ಯಾನ್​ಗೆ ಸೂಚನೆ ನೀಡಿದ್ದಾರೆ. ಅಲ್ಲದೆ ದರ್ಶನ್​ಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇದೆ ಎಂದು ಸಹ ಹೇಳಿದ್ದಾರೆ. ವೈದ್ಯರ ಸಲಹೆಯಂತೆ ಬಳ್ಳಾರಿಯಲ್ಲಿಯೇ ಸಿಟಿ ಸ್ಕ್ಯಾನ್ ಮತ್ತು ಎಂಆರ್​ಐ ಸ್ಕ್ಯಾನ್​ ಮಾಡಲು ಪೊಲೀಸರು ಮುಂದಾಗಿದ್ದಾರೆ. ಆದರೆ ದರ್ಶನ್ ಇದನ್ನು ನಿರಾಕರಿಸಿದ್ದಾರೆ. ಯಾವುದೇ ಕಾರಣಕ್ಕೂ ನಾನು ಬಳ್ಳಾರಿಯಲ್ಲಿ ಚಿಕಿತ್ಸೆಯಾಗಲಿ ಅಥವಾ ಇನ್ಯಾವುದೇ ಸ್ಕ್ಯಾನ್ ಆಗಲಿ ಮಾಡಿಸಿಕೊಳ್ಳುವುದಿಲ್ಲ ಎಂದು ಪಟ್ಟು ಹಿಡಿಸಿದ್ದಾರೆ. ದರ್ಶನ್​ರ ಮೊಂಡುತನದ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆಗೆ ಬಳ್ಳಾರಿ ಪೊಲೀಸ್ ಸಿಬ್ಬಂದಿ ಮಾತನಾಡಿದ್ದಾರೆ. ದರ್ಶನ್​ರ ಕುಟುಂಬಸ್ಥರು ಬಳ್ಳಾರಿ ಜೈಲಿಗೆ ಬಂದಾಗ ಅವರಿಗೆ ಪರಿಸ್ಥಿತಿಯ ಗಂಭೀರತೆಯನ್ನು ತಿಳಿಸಿ, ದರ್ಶನ್​ರ ಮನವೊಲಿಸುವಂತೆ ಮಾಡುವ ಪ್ರಯತ್ನವನ್ನು ಬಳ್ಳಾರಿ ಜೈಲು ಸಿಬ್ಬಂದಿ ಮಾಡಲು ನಿರ್ಣಯಿಸಿದ್ದಾರೆ.

ಇನ್ನು ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಇತ್ತೀಚೆಗಷ್ಟೆ ಮುಗಿದಿದ್ದು, ಸೋಮವಾರದಂದು ಜಾಮೀನು ಅರ್ಜಿಯ ತೀರ್ಪು ಹೊರಬೀಳಲಿದೆ. ಅದೇ ದಿನ ಪವಿತ್ರಾ ಸೇರಿದಂತೆ ಇತರೆ ಕೆಲವು ಆರೋಪಿಗಳ ಜಾಮೀನು ಅರ್ಜಿ ತೀರ್ಪು ಸಹ ಹೊರಗೆ ಬೀಳಲಿದೆ. ಸೋಮವಾರ ದರ್ಶನ್​ಗೆ ಜಾಮೀನು ದೊರಕುವ ವಿಶ್ವಾಸದಲ್ಲಿ ಕುಟುಂಬಸ್ಥರು ಇದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'