ದರ್ಶನ್ ಜೊತೆ ಅರೆಸ್ಟ್ ಆದವರಿಗೆ ಶಾಕ್ ಮೇಲೆ ಶಾಕ್; ಮೃತಪಡುತ್ತಿದ್ದಾರೆ ಕುಟುಂಬಸ್ಥರು
ರಘು ಅವರು ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಇವರು ದರ್ಶನ್ ಅಭಿಮಾನಿ ಸಂಘದ ಚಿತ್ರದುರ್ಗ ಜಿಲ್ಲೆಯ ಅಧ್ಯಕ್ಷರಾಗಿದ್ದಾರೆ. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿ ಬೆಂಗಳೂರಿಗೆ ಕರೆತಂದಿದ್ದು ಇದೇ ರಘು. ಈ ಕಾರಣದಿಂದಲೇ ರಘು ಅವರನ್ನು ಎ4 ಆರೋಪಿಯನ್ನಾಗಿ ಮಾಡಲಾಗಿದೆ.
ದರ್ಶನ್ ಜೊತೆ ಸೇರಿದ್ದಕ್ಕೆ ಅನೇಕರು ಕೊರಗುವಂತೆ ಆಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅರೆಸ್ಟ್ ಆಗುವುದರ ಜೊತೆಗೆ ಇನ್ನೂ ಅನೇಕರು ಬಂಧನಕ್ಕೆ ಒಳಗಾಗಿದ್ದಾರೆ. ಇದರಿಂದ ಅವರ ಕುಟುಂಬದವರು ಶಾಕ್ಗೆ ಒಳಗಾಗುವಂತೆ ಆಗಿದೆ. ಈ ಮೊದಲು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾದ ಅನಿಲ್ ಕುಮಾರ್ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಈಗ ಎ4 ರಘು ತಾಯಿ ಮಂಜುಳಮ್ಮ (70) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ರಘು ಅವರು ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಇವರು ದರ್ಶನ್ ಅಭಿಮಾನಿ ಸಂಘದ ಚಿತ್ರದುರ್ಗ ಜಿಲ್ಲೆಯ ಅಧ್ಯಕ್ಷರಾಗಿದ್ದಾರೆ. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿ ಬೆಂಗಳೂರಿಗೆ ಕರೆತಂದಿದ್ದು ಇದೇ ರಘು. ಈ ಕಾರಣದಿಂದಲೇ ರಘು ಅವರನ್ನು ಎ4 ಆರೋಪಿಯನ್ನಾಗಿ ಮಾಡಲಾಗಿದೆ. ಈಗ ಅವರು ನ್ಯಾಯಾಂಗ ಬಂಧನದಲ್ಲಿ ಇರುವಾಗಲೇ ಅವರ ತಾಯಿ ಮೃತಪಟ್ಟಿದ್ದಾರೆ.
ರಘು ತಾಯಿ ಮಂಜುಳಮ್ಮ ಕಳೆದ 1 ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಮೃತಪಟ್ಟಿದ್ದಾರೆ. ಅಂತ್ಯಸಂಸ್ಕಾರಕ್ಕೆ ಪುತ್ರ ರಘುನನ್ನು ಕರೆತರಲು ಕುಟುಂಬಸ್ಥರ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಮನೆ ಊಟ, ಹಾಸಿಗೆಗಾಗಿ ದರ್ಶನ್ ರಿಟ್ ಅರ್ಜಿ; ಜುಲೈ 29ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಅನಿಲ್ ಕುಮಾರ್ ಅವರ ತಂದೆ ಈ ಮೊದಲು ಮೃತಪಟ್ಟಿದ್ದರು. ಪ್ರಕರಣದಲ್ಲಿ ಪುತ್ರ ಅನಿಲ್ ಕುಮಾರ್ ಬಂಧನಕ್ಕೆ ಒಳಗಾಗಿದ್ದಾರೆ ಎನ್ನುವ ವಿಚಾರ ತಿಳಿದು ಅವರ ತಂದೆ ಚಂದ್ರಪ್ಪ ಶಾಕ್ ಆಗಿದ್ದರು. ಅವರು ಕೊರಗಿ ಕೊರಗಿ ನಂತರ ಹೃದಯಾಘಾತ ಆಗಿತ್ತು. ಚಂದ್ರಪ್ಪ ಅವರ ಅಂತ್ಯ ಸಂಸ್ಕಾರಕ್ಕೆ ಅನಿಲ್ ಕುಮಾರ್ ಅವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.