ದರ್ಶನ್ ಜೊತೆ ಅರೆಸ್ಟ್ ಆದವರಿಗೆ ಶಾಕ್ ಮೇಲೆ ಶಾಕ್; ಮೃತಪಡುತ್ತಿದ್ದಾರೆ ಕುಟುಂಬಸ್ಥರು

ರಘು ಅವರು ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಇವರು ದರ್ಶನ್ ಅಭಿಮಾನಿ ಸಂಘದ ಚಿತ್ರದುರ್ಗ ಜಿಲ್ಲೆಯ ಅಧ್ಯಕ್ಷರಾಗಿದ್ದಾರೆ. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿ ಬೆಂಗಳೂರಿಗೆ ಕರೆತಂದಿದ್ದು ಇದೇ ರಘು. ಈ ಕಾರಣದಿಂದಲೇ ರಘು ಅವರನ್ನು ಎ4 ಆರೋಪಿಯನ್ನಾಗಿ ಮಾಡಲಾಗಿದೆ.

ದರ್ಶನ್ ಜೊತೆ ಅರೆಸ್ಟ್ ಆದವರಿಗೆ ಶಾಕ್ ಮೇಲೆ ಶಾಕ್; ಮೃತಪಡುತ್ತಿದ್ದಾರೆ ಕುಟುಂಬಸ್ಥರು
ದರ್ಶನ್
Edited By:

Updated on: Jul 20, 2024 | 10:46 AM

ದರ್ಶನ್ ಜೊತೆ ಸೇರಿದ್ದಕ್ಕೆ ಅನೇಕರು ಕೊರಗುವಂತೆ ಆಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅರೆಸ್ಟ್ ಆಗುವುದರ ಜೊತೆಗೆ ಇನ್ನೂ ಅನೇಕರು ಬಂಧನಕ್ಕೆ ಒಳಗಾಗಿದ್ದಾರೆ. ಇದರಿಂದ ಅವರ ಕುಟುಂಬದವರು ಶಾಕ್​ಗೆ ಒಳಗಾಗುವಂತೆ ಆಗಿದೆ. ಈ ಮೊದಲು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾದ ಅನಿಲ್ ಕುಮಾರ್ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಈಗ ಎ4 ರಘು ತಾಯಿ ಮಂಜುಳಮ್ಮ (70) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ರಘು ಅವರು ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಇವರು ದರ್ಶನ್ ಅಭಿಮಾನಿ ಸಂಘದ ಚಿತ್ರದುರ್ಗ ಜಿಲ್ಲೆಯ ಅಧ್ಯಕ್ಷರಾಗಿದ್ದಾರೆ. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿ ಬೆಂಗಳೂರಿಗೆ ಕರೆತಂದಿದ್ದು ಇದೇ ರಘು. ಈ ಕಾರಣದಿಂದಲೇ ರಘು ಅವರನ್ನು ಎ4 ಆರೋಪಿಯನ್ನಾಗಿ ಮಾಡಲಾಗಿದೆ. ಈಗ ಅವರು ನ್ಯಾಯಾಂಗ ಬಂಧನದಲ್ಲಿ ಇರುವಾಗಲೇ ಅವರ ತಾಯಿ ಮೃತಪಟ್ಟಿದ್ದಾರೆ.

ರಘು ತಾಯಿ ಮಂಜುಳಮ್ಮ ಕಳೆದ 1 ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿತ್ರದುರ್ಗದ ಕೋಳಿಬುರುಜನಹಟ್ಟಿ ಮನೆಯಲ್ಲಿ ಮಂಜುಳಮ್ಮ ಮೃತಪಟ್ಟಿದ್ದಾರೆ. ಅಂತ್ಯಸಂಸ್ಕಾರಕ್ಕೆ ಪುತ್ರ ರಘುನನ್ನು ಕರೆತರಲು ಕುಟುಂಬಸ್ಥರ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮನೆ ಊಟ, ಹಾಸಿಗೆಗಾಗಿ ದರ್ಶನ್ ರಿಟ್ ಅರ್ಜಿ; ಜುಲೈ 29ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಅನಿಲ್ ಕುಮಾರ್ ಅವರ ತಂದೆ ಈ ಮೊದಲು ಮೃತಪಟ್ಟಿದ್ದರು. ಪ್ರಕರಣದಲ್ಲಿ ಪುತ್ರ ಅನಿಲ್‌ ಕುಮಾರ್ ಬಂಧನಕ್ಕೆ ಒಳಗಾಗಿದ್ದಾರೆ ಎನ್ನುವ ವಿಚಾರ ತಿಳಿದು ಅವರ ತಂದೆ ಚಂದ್ರಪ್ಪ ಶಾಕ್ ಆಗಿದ್ದರು. ಅವರು ಕೊರಗಿ ಕೊರಗಿ ನಂತರ ಹೃದಯಾಘಾತ ಆಗಿತ್ತು. ಚಂದ್ರಪ್ಪ ಅವರ ಅಂತ್ಯ ಸಂಸ್ಕಾರಕ್ಕೆ ಅನಿಲ್ ಕುಮಾರ್ ಅವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us