ದರ್ಶನ್-ರೇಣುಕಾಸ್ವಾಮಿ ಕೇಸ್: ಡಿ.17ರಿಂದ ಸಾಕ್ಷ್ಯ ವಿಚಾರಣೆಗೆ ನ್ಯಾಯಾಲಯ ನಿರ್ಧಾರ

ಸಾಕ್ಷಿಗಳಿಗೆ ಸಮನ್ಸ್ ನೀಡಲು ಸಹಾಯಕ ಎಸ್​ಪಿಪಿ ಸಚಿನ್ ಮನವಿ ಮಾಡಿದ್ದಾರೆ. ಡಿ.17ರಂದು ವಿಚಾರಣೆ ಶುರು ಆಗಲಿದೆ. ಎಫ್ಎಸ್ಎಲ್ ಸಾಕ್ಷಿಗಳು, ಪ್ರತ್ಯಕ್ಷ ಸಾಕ್ಷಿಗಳು, ತಾಂತ್ರಿಕ ಸಾಕ್ಷಿಗಳ ಪ್ರತ್ಯೇಕ ಪಟ್ಟಿಯು ನ್ಯಾಯಾಲಯಕ್ಕೆ ಸಲ್ಲಿಕೆ ಆಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 260ಕ್ಕೂ ಅಧಿಕ ಸಾಕ್ಷಿಗಳು ಇವೆ. ದರ್ಶನ್ ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.

ದರ್ಶನ್-ರೇಣುಕಾಸ್ವಾಮಿ ಕೇಸ್: ಡಿ.17ರಿಂದ ಸಾಕ್ಷ್ಯ ವಿಚಾರಣೆಗೆ ನ್ಯಾಯಾಲಯ ನಿರ್ಧಾರ
Darshan, Renukaswamy, Pavithra Gowda
Edited By:

Updated on: Dec 03, 2025 | 5:26 PM

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ವಿಚಾರಣೆ ಈಗ ಪ್ರಮುಖ ಘಟ್ಟಕ್ಕೆ ಬಂದಿದೆ. ನಟ ದರ್ಶನ್ (Darshan), ನಟಿ ಪವಿತ್ರಾ ಗೌಡ ಸೇರಿದಂತೆ ಹಲವರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಈಗಾಗಲೇ ದೋಷಾರೋಪಣೆ ನಿಗದಿ ಪ್ರಕ್ರಿಯೆ ಮುಗಿದಿದೆ. ಎಲ್ಲ ಆರೋಪಿಗಳು ತಮ್ಮ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಸಾಕ್ಷಿಗಳ ವಿಚಾರಣೆ ನಡೆಸಬೇಕಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭಿಸಲು ಈಗ ದಿನಾಂಕ ನಿಗದಿ ಆಗಿದೆ. ಡಿಸೆಂಬರ್ 17ರಿಂದ ಸಾಕ್ಷ್ಯ ವಿಚಾರಣೆ ಶುರು ಮಾಡಲು ನ್ಯಾಯಾಲಯ ನಿರ್ಧರಿಸಿದೆ.

ಪವಿತ್ರಾ ಗೌಡ ಪರ ವಕೀಲ ಬಾಲನ್​ ಅವರಿಗೆ ಕೋರ್ಟ್​ನಿಂದ ಮಾಹಿತಿ ನೀಡಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಸೇರಿ 7 ಆರೋಪಿಗಳು ಹಾಜರಾಗಿದ್ದಾರೆ. ಸಹಾಯಕ ಎಸ್​ಪಿಪಿ ಸಚಿನ್ ಅವರು ಸಾಕ್ಷಿಗಳ ಪಟ್ಟಿಯನ್ನು ಕೋರ್ಟ್​​ಗೆ ಸಲ್ಲಿಸಿದ್ದಾರೆ. ಪ್ರತ್ಯಕ್ಷ ಸಾಕ್ಷಿಗಳು, ಎಫ್ಎಸ್ಎಲ್ ಸಾಕ್ಷಿಗಳು, ತಾಂತ್ರಿಕ ಸಾಕ್ಷಿಗಳ ಪ್ರತ್ಯೇಕ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಸಾಕ್ಷಿಗಳಿಗೆ ಸಮನ್ಸ್ ನೀಡಲು ಸಹಾಯಕ ಎಸ್​ಪಿಪಿ ಸಚಿನ್ ಮನವಿ ಮಾಡಿದ್ದಾರೆ. ಅದರಂತೆ, ಸಾಕ್ಷಿ ನಂಬರ್ ಏಳು ಮತ್ತು ಎಂಟಕ್ಕೆ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ. ರೇಣುಕಾಸ್ವಾಮಿ ತಂದೆ, ತಾಯಿಗೂ ಸಮನ್ಸ್ ನೀಡಲಾಗಿದೆ. ಡಿಸೆಂಬರ್ 17ರಂದು ವಿಚಾರಣೆ ಶುರು ಆಗಲಿದೆ. ಈ ಪ್ರಕರಣದಲ್ಲಿ 260ಕ್ಕೂ ಅಧಿಕ ಸಾಕ್ಷಿಗಳು ಇವೆ. ಎಲ್ಲ ಸಾಕ್ಷಿಗಳ ವಿಚಾರಣೆ ಬಳಿಕ ಕೋರ್ಟ್ ಅಂತಿಮ ತೀರ್ಪು ನೀಡಲಿದೆ.

ಸದ್ಯ ದರ್ಶನ್, ಪವಿತ್ರಾ ಗೌಡ ಮುಂತಾದ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಜಾಮೀನು ರದ್ದಾದ ಬಳಿಕ ಅವರು ಪರಪ್ಪನ ಅಗ್ರಹಾರ ಜೈಲು ಸೇರಿ 110ಕ್ಕೂ ಅಧಿಕ ದಿನಗಳು ಕಳೆದಿವೆ. ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಗಟ್ಟಲು ಕಠಿಣ ನಿಯಮ ಜಾರಿ ಮಾಡಲಾಗಿದೆ. ಇದರಿಂದ ದರ್ಶನ್ ಅವರಿಗೂ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ: ದರ್ಶನ್ ಜೈಲಿಗೆ ಹೋಗಿದ್ದಕ್ಕೆ ‘ದಿ ಡೆವಿಲ್’ ಬಜೆಟ್ ಜಾಸ್ತಿ ಆಯ್ತಾ? ಉತ್ತರಿಸಿದ ನಿರ್ದೇಶಕ

ರೇಣುಕಾಸ್ವಾಮಿ ಕೇಸ್ ಹಿನ್ನಲೆ:

ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ಅಶ್ಲೀಲ ಸಂದೇಶ ಕಳಿಸಿದ್ದ. ಆ ಕಾರಣದಿಂದ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಚಿತ್ರಹಿಂಸೆ ನೀಡಲಾಯಿತು ಎಂಬ ಆರೋಪ ಇದೆ. ಆ ಘಟನೆಯಿಂದ ಆತ ಪ್ರಾಣ ಕಳೆದುಕೊಂಡ. ರೇಣುಕಾಸ್ವಾಮಿ ಶವ ಪತ್ತೆ ಆದ ಬಳಿಕ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಜನರ ವಿರುದ್ಧ ಕೇಸ್ ದಾಖಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
Loading...
Unable to load recommendations.
Follow Us