AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ಸುತ್ತಾಟದ ಬಳಿಕ ವಿದೇಶಕ್ಕೆ ಹಾರಲು ದರ್ಶನ್ ರೆಡಿ; ಕೋರ್ಟ್​ನಲ್ಲಿ ಸಲ್ಲಿಕೆ ಆಯ್ತು ಅರ್ಜಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ತಮ್ಮ ಹೊಸ ಸಿನಿಮಾ ‘ಡೆವಿಲ್’ ಶೂಟ್​ನಲ್ಲಿ ಬ್ಯುಸಿ ಇದ್ದಾರೆ. ಇದರ ಶೂಟಿಂಗ್​ಗಾಗಿ ಜೂನ್ 1ರಿಂದ 25ರವರೆಗೆ ದುಬೈ ಮತ್ತು ಯುರೋಪ್​ಗೆ  ಪ್ರಯಾಣಿಸಲು 57ನೇ ಸಿಸಿಹೆಚ್ ಕೋರ್ಟ್​ನಲ್ಲಿ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಮೊದಲು ದೇಶದೊಳಗೆ ಪ್ರಯಾಣಿಸಲು ಅನುಮತಿ ಪಡೆದಿದ್ದ ಅವರು, ಈಗ ವಿದೇಶ ಪ್ರವಾಸಕ್ಕೆ ಅನುಮತಿ ಕೋರಿದ್ದಾರೆ.

ದೇಶ ಸುತ್ತಾಟದ ಬಳಿಕ ವಿದೇಶಕ್ಕೆ ಹಾರಲು ದರ್ಶನ್ ರೆಡಿ; ಕೋರ್ಟ್​ನಲ್ಲಿ ಸಲ್ಲಿಕೆ ಆಯ್ತು ಅರ್ಜಿ
ದರ್ಶನ್
ರಾಜೇಶ್ ದುಗ್ಗುಮನೆ
|

Updated on: May 28, 2025 | 11:37 AM

Share

ರೇಣುಕಾಸ್ವಾಮಿ (Renukaswamy) ಕೊಲೆ ಕೇಸ್​ನ ಎರಡನೇ ಆರೋಪಿ ದರ್ಶನ್ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಜಾಮೀನು ನೀಡುವಾಗ ವಿದೇಶಕ್ಕೆ ತೆರಳುವಂತಿಲ್ಲ ಎನ್ನವು ಷರತ್ತನ್ನು ಕೋರ್ಟ್ ವಿಧಿಸಿತ್ತು. ಹೀಗೆ ತೆರಳಬೇಕು ಎಂದರೆ ಕೋರ್ಟ್ ಅನುಮತಿ ಕಡ್ಡಾಯ ಎಂಬ ಷರತ್ತನ್ನು ನ್ಯಾಯಾಲಯ ವಿಧಿಸಿತ್ತು. ಈಗ ದರ್ಶನ್ ಅವರು ವಿದೇಶಕ್ಕೆ ತೆರಳಲು ಅನುಮತಿ ಕೋರಿ 57ನೇ ಸಿಸಿಹೆಚ್ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕೋರ್ಟ್ ಇದರಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ದರ್ಶನ್ ಬೆಂಗಳೂರು ಬಿಟ್ಟು ತೆರಳುವಂತಿಲ್ಲ ಎನ್ನುವ ಸೂಚನೆಯನ್ನು ನ್ಯಾಯಾಲಯವು ನೀಡಿತ್ತು. ಆದರೆ, ಹೈಕೋರ್ಟ್​ನಿಂದ ದೇಶ ಸುತ್ತಾಟ ಮಾಡಲು ದರ್ಶನ್ ಅನುಮತಿ ಪಡೆದರು. ರಾಜಸ್ಥಾನ ಮೊದಲಾದ ಕಡೆಗಳಲ್ಲಿ ‘ಡೆವಿಲ್’ ಸಿನಿಮಾ ಶೂಟ್ ಮುಗಿಸಿ ದರ್ಶನ್ ಮರಳಿದ್ದರು. ಈಗ ವಿದೇಶಕ್ಕೆ ಹಾರಲು ಆರೋಪಿ ದರ್ಶನ್ ಸಿದ್ಧತೆ ಮಾಡಿಕೊಂಡಿದ್ದಾರೆ.

ದರ್ಶನ್ ಅವರು ಮಿಲನ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಹಾಡಿನ ಶೂಟ್​ಗಾಗಿ ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಸಿನಿಮಾ ಶೂಟಿಂಗ್​ಗಾಗಿ ದುಬೈ ಮತ್ತು ಯೂರೋಪ್​ಗೆ ತೆರಳಲು ಅವಕಾಶ ಕೋರಿ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಆಗಿದೆ. 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅವಕಾಶ ಕೋರಲಾಗಿದೆ.

ಇದನ್ನೂ ಓದಿ
Image
ನಟಿ ದೀಪಿಕಾಗೆ ಕ್ಯಾನ್ಸರ್; ಹೊಟ್ಟೆಯಲ್ಲಿದೆ ಟೆನಿಸ್ ಬಾಲ್ ಆಕಾರದ ಗಡ್ಡೆ
Image
RCB ಗೆಲುವಿನ ಖುಷಿಯಲ್ಲಿ ವಿರಾಟ್​ಗೆ ಮುತ್ತಿನ ಸುರಿಮಳೆ ಸುರಿಸಿದ ಅನುಷ್ಕಾ
Image
ಕಮಲ್ ಹಾಸನ್ ವಿವಾದ: ಕನ್ನಡಿಗರ ಕೆರಳಿಸಿದ ನಟನ​ ಚಿತ್ರಕ್ಕೆ ಸಂಕಷ್ಟ
Image
‘ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇನೆ’; ಅನುಶ್ರೀಗೆ ನೇರವಾಗಿ ಹೇಳಿದ ಮನೋಜ್

ದರ್ಶನ್ ಪರವಾಗಿ ಅವರ ವಕೀಲ ಸುನಿಲ್ ಕುಮಾರ್ 57ನೇ ಸಿಸಿಹೆಚ್ ಕೋರ್ಟ್​ನಲ್ಲಿ ಮನವಿ ಮಾಡಿದ್ದಾರೆ. ವಿದೇಶಗಳಲ್ಲಿ ಶೂಟಿಂಗ್ ಮಾಡುವ ಅಗತ್ಯವಿದೆ ಎಂದು ನಿರ್ಮಾಪಕರ ಕಡೆಯಿಂದ ಮನವಿ ಕೂಡ ಬಂದಿದೆ. ಜೂನ್1ರಿಂದ 25ರವರೆಗೆ ವಿದೇಶಕ್ಕೆ ತೆರಳಲು ಅವಕಾಶ ನೀಡಬೇಕು ಎಂದು ದರ್ಶನ್ ಮನವಿ ಸಲ್ಲಿಸಿದ್ದಾರೆ. ಸಿಆರ್​ಪಿಸಿ ಸೆಕ್ಷನ್ 439(1) (b) ಅಡಿಯಲ್ಲಿ ದರ್ಶನ್ ಈ ಬಗ್ಗೆ ಮನವಿ ಮಾಡಿದ್ದಾರೆ. ಕೋರ್ಟ್​ನಲ್ಲಿ ದರ್ಶನ್ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು (ಮೇ 28) ನಡೆಯಲಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್, ಪವಿತ್ರಾ​ಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಡೆವಿಲ್’ ಸಿನಿಮಾ ರಿಲೀಸ್ ಆಗಿರುತ್ತಿತ್ತು. ಆದರೆ, ದರ್ಶನ್ ಜೈಲು ಸೇರಿದ್ದರಿಂದ ಸಿನಿಮಾ ರಿಲೀಸ್ ವಿಳಂಬ ಆಗಿದೆ. ಈ ವರ್ಷವೇ ಚಿತ್ರ ತೆರೆಗೆ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

(ವರದಿ: ವಿಕಾಸ್)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!