Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗನನ್ನೇ ‘ಡೆವಿಲ್’ ಚಿತ್ರದಿಂದ ಹೊರಗಿಟ್ಟ ದರ್ಶನ್; ಕಾರಣ ನೀಡಿದ ಡಿ ಬಾಸ್

‘ಡೆವಿಲ್’ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಬಗ್ಗೆ ಅಪ್​ಡೇಟ್​ ತಿಳಿಯಲು ಅಭಿಮಾನಿಗಳು ಕಾದಿದ್ದಾರೆ. ಆದರೆ ಎಲ್ಲರಿಗೂ ದರ್ಶನ್ ಒಂದು ಶಾಕ್ ನೀಡಿದ್ದಾರೆ. ಈ ಸಿನಿಮಾದಿಂದ ಸ್ವತಃ ದರ್ಶನ್ ಅವರ ಅಕ್ಕನ ಮಗನನ್ನೇ ಹೊರಗೆ ಇಡಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಕೂಡ ದರ್ಶನ್ ಅವರು ತಿಳಿಸಿದ್ದಾರೆ.

ಅಕ್ಕನ ಮಗನನ್ನೇ ‘ಡೆವಿಲ್’ ಚಿತ್ರದಿಂದ ಹೊರಗಿಟ್ಟ ದರ್ಶನ್; ಕಾರಣ ನೀಡಿದ ಡಿ ಬಾಸ್
Darshan
Follow us
ಮದನ್​ ಕುಮಾರ್​
|

Updated on: Mar 11, 2025 | 11:14 PM

ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ದರ್ಶನ್ (Darshan) ಅವರು ಒಂದು ಮುಖ್ಯವಾದ ಸಂದೇಶ ನೀಡಿದ್ದಾರೆ. ‘ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ’ ಎಂದು ದರ್ಶನ್ ಪೋಸ್ಟ್ ಮಾಡಿದ್ದಾರೆ.

‘ಅದರಿಂದ ಡೆವಿಲ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಬೇಕಿದ್ದ ಚಂದುನನ್ನು ಈ ಚಿತ್ರದಿಂದ ಹೊರಗಿಡಲಾಗಿದೆ. ಚಂದು ಅಥವಾ ನನ್ನ ಮಗ ವಿನೀಶ್​ಗೆ ನೀವು ಅಭಿಮಾನದಿಂದಲೋ ಅಥವಾ ಅವರೊಂದಿಗೆ ಚೆನ್ನಾಗಿ ಗುರುತಿಸಿಕೊಂಡರೆ ನನಗೆ ಹತ್ತಿರವಾಗಬಹುದು ಎಂದು ನೀವು ಭಾವಿಸಿದರೆ ಅದನ್ನು ನಿಮ್ಮ ಮನಸಿನಿಂದ ತೆಗೆದು ಹಾಕಿ. ನೀವು ಹೀಗೆ ಮಾಡುವುದು ನನಗೆ ಸ್ವಲ್ಪವೂ ಇಷ್ಟ ಆಗುವುದಿಲ್ಲ’ ಎಂದು ದರ್ಶನ್ ಅವರು ಖಡಕ್ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಜಾಮೀನು ಪಡೆದಿದ್ದಾರೆ. ಈಗ ‘ಡೆವಿಲ್’ ಸಿನಿಮಾ ಶೂಟಿಂಗ್ ಶುರು ಮಾಡಲು ಮುಂದಾಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗುವ ಮುನ್ನ ‘ಡೆವಿಲ್’ ಚಿತ್ರದ ಚಿತ್ರೀಕರಣದಲ್ಲಿ ದರ್ಶನ್ ತೊಡಗಿಕೊಂಡಿದ್ದರು. ಸುಮಾರು 9 ತಿಂಗಳ ಬಳಿಕ ಪುನಃ ಶೂಟಿಂಗ್ ಪ್ರಾರಂಭಿಸಲಿದ್ದಾರೆ.

ಇದನ್ನೂ ಓದಿ: ದರ್ಶನ್​ಗೆ ಅಭಿಮಾನಿಗಳಿಂದಲೇ ಹೆಚ್ಚುತ್ತಿದೆ ಸಮಸ್ಯೆ; ಫ್ಯಾನ್ಸ್​ಗೆ ಅರ್ಥ ಆಗೋದು ಯಾವಾಗ?

2ನೇ ಹಂತದ ಶೂಟಿಂಗ್ ಇದಾಗಿದ್ದು, ಚಿತ್ರೀಕರಣಕ್ಕಾಗಿ ಸೆಟ್ ನಿರ್ಮಾಣ ಕಾರ್ಯಗಳು ಭರದಿಂದ ಸಾಗಿವೆ. ಚಿತ್ರೀಕರಣದಲ್ಲಿ ನಟ ದರ್ಶನ್ ಭಾಗಿ ಆಗಲಿದ್ದಾರೆ. ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ಅವರು, ಜಿಮ್​ಗೂ ಕೂಡ ಹೋಗಲು ಆರಂಭಿಸಿದ್ದಾರೆ. ಸಿನಿಮಾದ ಚಿತ್ರೀಕರಣದಲ್ಲಿ ಭಾಗವಹಿಸಲೆಂದೇ ಅವರು ಜಿಮ್​ಗೆ ಹೋಗಿ ದೇಹ ಹುರಿಗೊಳಿಸುತ್ತಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.