ದರ್ಶನ್​ ನಟನೆಯ ‘ಡೆವಿಲ್​’ ಬಗ್ಗೆ ಹರಡಿದ ಗಾಳಿಸುದ್ದಿಗೆ ನಿರ್ದೇಶಕ ಪ್ರಕಾಶ್​ ವೀರ್​ ಪ್ರತಿಕ್ರಿಯೆ

ಸ್ಟಾರ್​ ನಟರ ಸಿನಿಮಾ ಬಗ್ಗೆ ಗಾಸಿಪ್​ ಹಬ್ಬುವುದು ಸಹಜ. ದರ್ಶನ್​ ಅಭಿನಯದ ‘ಡೆವಿಲ್​’ ಸಿನಿಮಾ ಬಗ್ಗೆಯೂ ಅನೇಕ ಅಂತೆಕಂತೆಗಳು ಕೇಳಿಬರುತ್ತಿವೆ. ಸಿನಿಮಾದ ಫಸ್ಟ್​ ಲುಕ್​, ನಾಯಕಿಯ ಆಯ್ಕೆ ಸೇರಿದಂತೆ ಒಂದಷ್ಟು ವಿಷಯಗಳ ಬಗ್ಗೆ ಗಾಳಿ ಸುದ್ದಿ ಹರಿದಾಡುತ್ತಿದೆ. ಆ ಕುರಿತು ‘ಡೆವಿಲ್​’ ಚಿತ್ರದ ನಿರ್ದೇಶಕ ಪ್ರಕಾಶ್​ ವೀರ್​ ಅವರು ಪ್ರತಿಕ್ರಿಯಿಸಿದ್ದಾರೆ. ಅಭಿಮಾನಿಗಳಲ್ಲಿ ಅವರು ಒಂದು ಮನವಿ ಮಾಡಿಕೊಂಡಿದ್ದಾರೆ.

ದರ್ಶನ್​ ನಟನೆಯ ‘ಡೆವಿಲ್​’ ಬಗ್ಗೆ ಹರಡಿದ ಗಾಳಿಸುದ್ದಿಗೆ ನಿರ್ದೇಶಕ ಪ್ರಕಾಶ್​ ವೀರ್​ ಪ್ರತಿಕ್ರಿಯೆ
ದರ್ಶನ್​, ‘ಮಿಲನ’ ಪ್ರಕಾಶ್
Follow us
ಮದನ್​ ಕುಮಾರ್​
|

Updated on: Feb 04, 2024 | 11:36 AM

‘ಚಾಲೆಂಜಿಂಗ್ ಸ್ಟಾರ್’ ದರ್ಶನ್​ (Darshan) ಅವರು ‘ಕಾಟೇರ’ ಸಿನಿಮಾದ ಯಶಸ್ಸಿನ ಖುಷಿಯಲ್ಲಿದ್ದಾರೆ. ಅವರ ಮುಂಬರುವ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಸೃಷ್ಟಿ ಆಗಿದೆ. ‘ಮಿಲನ’ ಸಿನಿಮಾ ಖ್ಯಾತಿ ಪ್ರಕಾಶ್​ ವೀರ್​ (Milana Prakash) ಅವರು ದರ್ಶನ್​ ಜೊತೆ ಹೊಸ ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಸಿನಿಮಾಗೆ ‘ಡೆವಿಲ್​’ (Devil) ಎಂದು ಶೀರ್ಷಿಕೆ ಇಡಲಾಗಿದ್ದು, ಸಾಕಷ್ಟು ಹೈಪ್​ ಕ್ರಿಯೇಟ್​ ಆಗಿದೆ. ಆದರೆ ಚಿತ್ರತಂಡಕ್ಕೆ ಬೇಸರ ಮೂಡಿಸುವಂತಹ ಒಂದು ಘಟನೆ ನಡೆಸಿದೆ. ಈ ಚಿತ್ರದಲ್ಲಿ ದರ್ಶನ್​ಗೆ ಜೋಡಿಯಾಗಿ ಯಾರು ನಟಿಸುತ್ತಾರೆ ಎಂಬ ಬಗ್ಗೆ ಗೆಲವು ಗಾಸಿಪ್​ ಹಬ್ಬಿವೆ. ಆ ಬಗ್ಗೆ ಈಗ ನಿರ್ದೇಶಕ ಪ್ರಕಾಶ್​ ವೀರ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಡೆವಿಲ್ ಸಿನಿಮಾದ ಬಗ್ಗೆ ಶೀಘ್ರದಲ್ಲಿ ನಾವೇ ಅಧಿಕೃತವಾಗಿ ಮಾಹಿತಿ ನೀಡುತ್ತೇವೆ. ಅಲ್ಲಿಯ ತನಕ ಬೇರೆ ಯಾವುದನ್ನೂ ನಂಬಬೇಡಿ’ ಎಂದು ನಿರ್ದೇಶಕ ಪ್ರಕಾಶ್ ವೀರ್ ಅವರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಪ್ರಕಾಶ್ ವೀರ್ ಮತ್ತು ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಈ ಸಿನಿಮಾಗೆ 2 ತಿಂಗಳ ಹಿಂದೆ ಸಿಂಪಲ್​ ಆಗಿ ಸ್ಕ್ರಿಪ್ಟ್ ಪೂಜೆ ಮಾಡಲಾಗಿತ್ತು. ಸದ್ಯಕ್ಕೆ ‘ಡೆವಿಲ್’ ಚಿತ್ರತಂಡದವರು ಯಾವುದೇ ಪ್ರಚಾರ ಕಾರ್ಯ ಆರಂಭಿಸಿಲ್ಲ.

ಇದನ್ನೂ ಓದಿ: ದರ್ಶನ್ ಜೊತೆ ಸಮಸ್ಯೆಯೇ ಇಲ್ಲ; ನೇರ ಮಾತುಗಳಲ್ಲಿ ಹೇಳಿದ ಕಿಚ್ಚ ಸುದೀಪ್

‘ಆರಂಭದಲ್ಲಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೋ ಪೋಸ್ಟರ್ ಹಾಕಿ ಅದು ಡೆವಿಲ್ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅಂತ ಹೇಳಿಕೊಂಡಿದ್ದರು. ಈಗ ಈ ಸಿನಿಮಾಗೆ ಹೀರೋಯಿನ್​ ಆಯ್ಕೆ ಆಗಿದ್ದಾರೆ ಎಂಬ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿದ್ದಾರೆ. ಈ ರೀತಿಯ ಯಾವುದೇ ವಿಷಯಗಳು ಚಿತ್ರತಂಡದ ಅಧಿಕೃತ ಮಾಹಿತಿ ಆಗಿರುವುದಿಲ್ಲ. ಶೀಘ್ರದಲ್ಲೇ ನಮ್ಮ ಸಿನಿಮಾದ ಪ್ರಚಾರ ಕಾರ್ಯ ಶುರು ಮಾಡುತ್ತೇವೆ. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ‘ಡೆವಿಲ್’ ಸಿನಿಮಾ ಕುರಿತು ಮಾಹಿತಿ ನೀಡುತ್ತಾ ಹೋಗುತ್ತೇವೆ’ ಎಂದು ಪ್ರಕಾಶ್ ವೀರ್ ಹೇಳಿದ್ದಾರೆ.

ಇದನ್ನೂ ಓದಿ: ‘ನಮ್ಮನೆ ದೇವ್ರು ಆಂಜನೇಯ..’: ಜಮೀರ್​ ಎದುರು ಡೈಲಾಗ್​ ಹೊಡೆದ ಸಾಧು ಕೋಕಿಲ, ದರ್ಶನ್​

ಕನ್ನಡ ಚಿತ್ರರಂಗದಲ್ಲಿ ಪ್ರಕಾಶ್​ ಅವರು ಗಮನಾರ್ಹ ಸಿನಿಮಾಗಳನ್ನು ನೀಡಿದ್ದಾರೆ ‘ಮಿಲನ’, ‘ವಂಶಿ’, ‘ತಾರಕ್​’ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದಾರೆ. ದರ್ಶನ್​ ಮತ್ತು ಪ್ರಕಾಶ್​ ಅವರು ‘ತಾರಕ್​’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆ ಸಿನಿಮಾ 2017ರಲ್ಲಿ ಬಿಡುಗಡೆಯಾಗಿ ಫ್ಯಾಮಿಲಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿತ್ತು. ಈಗ ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ಡೆವಿಲ್​’ ಸಿನಿಮಾ ಸಿದ್ಧವಾಗುತ್ತಿ ಇರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ