‘ಚಾಲೆಂಜಿಂಗ್ ಸ್ಟಾರ್’ ದರ್ಶನ್ (Darshan) ಅವರು ‘ಕಾಟೇರ’ ಸಿನಿಮಾದ ಯಶಸ್ಸಿನ ಖುಷಿಯಲ್ಲಿದ್ದಾರೆ. ಅವರ ಮುಂಬರುವ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಸೃಷ್ಟಿ ಆಗಿದೆ. ‘ಮಿಲನ’ ಸಿನಿಮಾ ಖ್ಯಾತಿ ಪ್ರಕಾಶ್ ವೀರ್ (Milana Prakash) ಅವರು ದರ್ಶನ್ ಜೊತೆ ಹೊಸ ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಸಿನಿಮಾಗೆ ‘ಡೆವಿಲ್’ (Devil) ಎಂದು ಶೀರ್ಷಿಕೆ ಇಡಲಾಗಿದ್ದು, ಸಾಕಷ್ಟು ಹೈಪ್ ಕ್ರಿಯೇಟ್ ಆಗಿದೆ. ಆದರೆ ಚಿತ್ರತಂಡಕ್ಕೆ ಬೇಸರ ಮೂಡಿಸುವಂತಹ ಒಂದು ಘಟನೆ ನಡೆಸಿದೆ. ಈ ಚಿತ್ರದಲ್ಲಿ ದರ್ಶನ್ಗೆ ಜೋಡಿಯಾಗಿ ಯಾರು ನಟಿಸುತ್ತಾರೆ ಎಂಬ ಬಗ್ಗೆ ಗೆಲವು ಗಾಸಿಪ್ ಹಬ್ಬಿವೆ. ಆ ಬಗ್ಗೆ ಈಗ ನಿರ್ದೇಶಕ ಪ್ರಕಾಶ್ ವೀರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
‘ಡೆವಿಲ್ ಸಿನಿಮಾದ ಬಗ್ಗೆ ಶೀಘ್ರದಲ್ಲಿ ನಾವೇ ಅಧಿಕೃತವಾಗಿ ಮಾಹಿತಿ ನೀಡುತ್ತೇವೆ. ಅಲ್ಲಿಯ ತನಕ ಬೇರೆ ಯಾವುದನ್ನೂ ನಂಬಬೇಡಿ’ ಎಂದು ನಿರ್ದೇಶಕ ಪ್ರಕಾಶ್ ವೀರ್ ಅವರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಪ್ರಕಾಶ್ ವೀರ್ ಮತ್ತು ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರ ಕಾಂಬಿನೇಷನ್ನಲ್ಲಿ ಮೂಡಿಬರಲಿರುವ ಈ ಸಿನಿಮಾಗೆ 2 ತಿಂಗಳ ಹಿಂದೆ ಸಿಂಪಲ್ ಆಗಿ ಸ್ಕ್ರಿಪ್ಟ್ ಪೂಜೆ ಮಾಡಲಾಗಿತ್ತು. ಸದ್ಯಕ್ಕೆ ‘ಡೆವಿಲ್’ ಚಿತ್ರತಂಡದವರು ಯಾವುದೇ ಪ್ರಚಾರ ಕಾರ್ಯ ಆರಂಭಿಸಿಲ್ಲ.
ಇದನ್ನೂ ಓದಿ: ದರ್ಶನ್ ಜೊತೆ ಸಮಸ್ಯೆಯೇ ಇಲ್ಲ; ನೇರ ಮಾತುಗಳಲ್ಲಿ ಹೇಳಿದ ಕಿಚ್ಚ ಸುದೀಪ್
‘ಆರಂಭದಲ್ಲಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೋ ಪೋಸ್ಟರ್ ಹಾಕಿ ಅದು ಡೆವಿಲ್ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅಂತ ಹೇಳಿಕೊಂಡಿದ್ದರು. ಈಗ ಈ ಸಿನಿಮಾಗೆ ಹೀರೋಯಿನ್ ಆಯ್ಕೆ ಆಗಿದ್ದಾರೆ ಎಂಬ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿದ್ದಾರೆ. ಈ ರೀತಿಯ ಯಾವುದೇ ವಿಷಯಗಳು ಚಿತ್ರತಂಡದ ಅಧಿಕೃತ ಮಾಹಿತಿ ಆಗಿರುವುದಿಲ್ಲ. ಶೀಘ್ರದಲ್ಲೇ ನಮ್ಮ ಸಿನಿಮಾದ ಪ್ರಚಾರ ಕಾರ್ಯ ಶುರು ಮಾಡುತ್ತೇವೆ. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ‘ಡೆವಿಲ್’ ಸಿನಿಮಾ ಕುರಿತು ಮಾಹಿತಿ ನೀಡುತ್ತಾ ಹೋಗುತ್ತೇವೆ’ ಎಂದು ಪ್ರಕಾಶ್ ವೀರ್ ಹೇಳಿದ್ದಾರೆ.
ಇದನ್ನೂ ಓದಿ: ‘ನಮ್ಮನೆ ದೇವ್ರು ಆಂಜನೇಯ..’: ಜಮೀರ್ ಎದುರು ಡೈಲಾಗ್ ಹೊಡೆದ ಸಾಧು ಕೋಕಿಲ, ದರ್ಶನ್
ಕನ್ನಡ ಚಿತ್ರರಂಗದಲ್ಲಿ ಪ್ರಕಾಶ್ ಅವರು ಗಮನಾರ್ಹ ಸಿನಿಮಾಗಳನ್ನು ನೀಡಿದ್ದಾರೆ ‘ಮಿಲನ’, ‘ವಂಶಿ’, ‘ತಾರಕ್’ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದಾರೆ. ದರ್ಶನ್ ಮತ್ತು ಪ್ರಕಾಶ್ ಅವರು ‘ತಾರಕ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆ ಸಿನಿಮಾ 2017ರಲ್ಲಿ ಬಿಡುಗಡೆಯಾಗಿ ಫ್ಯಾಮಿಲಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿತ್ತು. ಈಗ ಅವರಿಬ್ಬರ ಕಾಂಬಿನೇಷನ್ನಲ್ಲಿ ‘ಡೆವಿಲ್’ ಸಿನಿಮಾ ಸಿದ್ಧವಾಗುತ್ತಿ ಇರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ