‘ಕಾಟೇರ’ ಬಿಡುಗಡೆ ದಿನಾಂಕ ಘೋಷಣೆ, ಪ್ಯಾನ್ ಇಂಡಿಯಾ ಸ್ಟಾರ್​ಗಳಿಗೆ ಸೆಡ್ಡು ಹೊಡೆದ ದರ್ಶನ್

Darshan Thoogudeepa: ದರ್ಶನ್ ತೂಗುದೀಪ ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಕಾಟೇರ’ ಬಿಡುಗಡೆ ದಿನಾಂಕ ಘೋಷಿಸಲಾಗಿದೆ. ಸ್ಟಾರ್ ನಟರ ಪ್ಯಾನ್ ಇಂಡಿಯಾ ಸಿನಿಮಾಗಳೆದರು ತೊಡೆತಟ್ಟಲಿದೆ ‘ಕಾಟೇರ’.

‘ಕಾಟೇರ’ ಬಿಡುಗಡೆ ದಿನಾಂಕ ಘೋಷಣೆ, ಪ್ಯಾನ್ ಇಂಡಿಯಾ ಸ್ಟಾರ್​ಗಳಿಗೆ ಸೆಡ್ಡು ಹೊಡೆದ ದರ್ಶನ್
Follow us
ಮಂಜುನಾಥ ಸಿ.
|

Updated on:Nov 29, 2023 | 5:29 PM

ದರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾ ತನ್ನ ಹೆಸರು, ಪೋಸ್ಟರ್​ನಿಂದ ಈಗಾಗಲೇ ಗಮನ ಸೆಳೆದಿದೆ. ಇದೀಗ ಸಿನಿಮಾದ ಬಿಡುಗಡೆಯನ್ನೂ ಘೋಷಣೆ ಮಾಡಲಾಗಿದ್ದು, ದರ್ಶನ್, ದೊಡ್ಡ-ದೊಡ್ಡ ಸ್ಟಾರ್ ನಟರ ಎದುರು ಅಖಾಡಕ್ಕೆ ಇಳಿದಿದ್ದಾರೆ. ಕಾಟೇರ ಸಿನಿಮಾದ ಸಣ್ಣ ಟೀಸರ್ ಜೊತೆಗೆ ಬಿಡುಗಡೆ ದಿನಾಂಕವನ್ನು ಸಹ ಘೋಷಿಸಲಾಗಿದೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ತೆರೆಗೆ ಬರಲಿದೆ. ಡಿಸೆಂಬರ್ ತಿಂಗಳಲ್ಲಿ ಬಾಲಿವುಡ್​ನ ಹಾಗೂ ದಕ್ಷಿಣ ಭಾರತದ ಕೆಲವು ದೊಡ್ಡ ಸ್ಟಾರ್​ ನಟರ ಸಿನಿಮಾಗಳು ತೆರೆಗೆ ಬರುತ್ತಿವೆ. ಅದರ ನಡುವೆ ದರ್ಶನ್ ಸಿನಿಮಾ ಬಿಡುಗಡೆ ಆಗುತ್ತಿದೆ. ಭಾರಿ ನಿರೀಕ್ಷೆಯ ಸಿನಿಮಾಗಳ ನಡುವೆಯೇ ‘ಕಾಟೇರ’ ಸಿನಿಮಾದ ಬಿಡುಗಡೆಗೆ ಸಜ್ಜಾಗಿರುವುದು ಚಿತ್ರತಂಡದ ಆತ್ಮವಿಶ್ವಾಸವನ್ನು ಎತ್ತಿ ತೋರಿಸುತ್ತಿದೆ.

ಡಿಸೆಂಬರ್ ತಿಂಗಳ 22 ರಂದು ಹೊಂಬಾಳೆ ಫಿಲಮ್ಸ್ ನಿರ್ಮಿಸಿ, ಪ್ರಭಾಸ್ ನಟಿಸಿರುವ ‘ಸಲಾರ್’ ಸಿನಿಮಾ ಬಿಡುಗಡೆ ಆಗಲಿದೆ. ಅದರ ಹಿಂದೆಯೇ ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾ ತೆರೆಗೆ ಬರಲಿದೆ. ಈ ಎರಡೂ ಸಿನಿಮಾಗಳ ಮೇಲೆ ಭಾರಿ ದೊಡ್ಡ ನಿರೀಕ್ಷೆ ಇದೆ. ಹೀಗಿರುವಾಗ ದರ್ಶನ್ ಸಿನಿಮಾ ಸಹ ಅದೇ ಸಮಯದಲ್ಲಿ ಬರುತ್ತಿದ್ದು, ಕರ್ನಾಟಕ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆ ಫೈಟ್ ನೋಡಲು ಸಿಗಲಿದೆ.

ಇದನ್ನೂ ಓದಿ:ಮರಿ ಟೈಗರ್​ಗೆ ಬೆಂಬಲಿಸಿದ ದರ್ಶನ್: ‘ಫೈಟರ್​’ ಅನ್ನು ಬೆಂಬಲಿಸಿ ಎಂದ ಕಾಟೇರ

ಇಂದು (ನವೆಂಬರ್ 29) ಸಣ್ಣ ಟೀಸರ್ ಮೂಲಕ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ದರ್ಶನ್​ರ ಅಭಿಮಾನಿಗಳಿಗೆ ಬೇಕಾದ ಮಾಸ್ ಸರಕು ಸಿನಿಮಾದಲ್ಲಿ ಇರಲಿದೆ ಎಂಬುದನ್ನು ಟೀಸರ್ ಸಾರಿ ಹೇಳುತ್ತಿದೆ. ದರ್ಶನ್, ಕುಲುಮೆಯಲ್ಲಿ ಮಚ್ಚುಗಳನ್ನು ಮಾಡುತ್ತಿರುವ ದೃಶ್ಯ, ಮಚ್ಚುಗಳ ರಾಶಿ, ಈ ಸಿನಿಮಾ ಪಕ್ಕಾ ಮಾಸ್ ಆಕ್ಷನ್ ಸಿನಿಮಾ ಎಂಬುದನ್ನು ಜೋರಾಗಿಯೇ ಸಾರುತ್ತಿವೆ. ಟೀಸರ್​ನ ಕೊನೆಯಲ್ಲಿ ದರ್ಶನ್ ನಾಟಿ ಬೀಡಿ ಹೊತ್ತಿಸುವ ಸ್ಟೈಲ್ ಸಹ ಭಿನ್ನವಾಗಿದೆ.

‘ಕಾಟೇರ’ ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶನ ಮಾಡಿದ್ದು, ರಾಕ್​ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ. ಸಿನಿಮಾಕ್ಕೆ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿ. ಇದು ಇವರ ಮೊದಲ ಸಿನಿಮಾ. ಸಿನಿಮಾಕ್ಕೆ ವಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಜಗಪತಿ ಬಾಬು ವಿಲನ್ ಆಗಿ ನಟಿಸಿದ್ದಾರೆ. ‘ರಾಬರ್ಟ್’ ಬಳಿಕ ಮತ್ತೊಮ್ಮೆ ದರ್ಶನ್​ ಸಿನಿಮಾಕ್ಕೆ ವಿಲನ್ ಆಗಿದ್ದಾರೆ ಜಗಪತಿ ಬಾಬು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Wed, 29 November 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್