‘ಸುಂಟರಗಾಳಿ’ ಸಿನಿಮಾದ ಲೇಡಿ ವಿಲನ್ ಲಲಿತಮ್ಮ ನಿಧನ: ವೃದ್ಧಾಶ್ರಮದಲ್ಲಿ ನಟಿ ಕೊನೆಯುಸಿರು

ಕನ್ನಡ ಚಿತ್ರರಂಗದ ಹಿರಿಯ ನಟಿ ಲಲಿತಮ್ಮ ಅವರು 65ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ‘ಸುಂಟರಗಾಳಿ’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿ ಅವರು ಫೇಮಸ್ ಆಗಿದ್ದರು. ‘ಜಂಗ್ಲಿ’, ‘ಲೈಫು ಇಷ್ಟೇನೆ’ ಮುಂತಾದ ಚಿತ್ರಗಳಲ್ಲಿ ಕೂಡ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು.

‘ಸುಂಟರಗಾಳಿ’ ಸಿನಿಮಾದ ಲೇಡಿ ವಿಲನ್ ಲಲಿತಮ್ಮ ನಿಧನ: ವೃದ್ಧಾಶ್ರಮದಲ್ಲಿ ನಟಿ ಕೊನೆಯುಸಿರು
Lalithamma

Updated on: Oct 04, 2026 | 11:23 AM

ಹಲವು ಸಿನಿಮಾ, ಧಾರಾವಾಹಿ ಹಾಗೂ ನಾಟಕಗಳಲ್ಲಿ ಅಭಿನಯಿಸಿದ್ದ ಹಿರಿಯ ಕಲಾವಿದೆ ಲಲಿತಮ್ಮ ಅವರು ಇಂದು (ಅಕ್ಟೋಬರ್ 4) ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಕಳೆದ ಎರಡೂವರೆ ತಿಂಗಳಿಂದ ಅವರಿಗೆ ಸ್ಟ್ರೋಕ್ ಆಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನೋಡಿಕೊಳ್ಳಲು ಯಾರೂ ಇರಲಿಲ್ಲ. ಕಷ್ಟದ ಪರಿಸ್ಥಿತಿಯಲ್ಲಿದ್ದ ಲಲಿತಮ್ಮ ಅವರಿಗೆ ‘ಅಮ್ಮನ ಮಡಿಲು ಟ್ರಸ್ಟ್’ ಆಸರೆ ನೀಡಿತ್ತು.

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ಸುಂಟರಗಾಳಿ’ ಸಿನಿಮಾದಲ್ಲಿ ಲಲಿತಮ್ಮ ಅವರು ವಿಲನ್ ಪಾತ್ರ ಮಾಡಿದ್ದರು. ಆ ಸಿನಿಮಾದಿಂದ ಅವರಿಗೆ ಅಪಾರ ಖ್ಯಾತಿ ಸಿಕ್ಕಿತ್ತು. ‘ಜಂಗ್ಲಿ’, ‘ಲೈಫ್ ಇಷ್ಟೇನೆ’ ಸಿನಿಮಾದಲ್ಲಿ ಕೂಡ ಅವರು ಅಭಿನಯಿಸಿದ್ದರು. ಅನಾರೋಗ್ಯ ಹೆಚ್ಚಿದ ಅವರಿಗೆ ಕಳೆದ ಹತ್ತು ದಿನಗಳಿಂದ ಹಾರೈಕೆ ಮಾಡಲಾಗುತ್ತಿತ್ತು. ಈಗ ಅವರ ನಿಧನದ ಸುದ್ದಿಯನ್ನು ಆಶ್ರಮದವರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಸಿಂಗೀತಂ ಶ್ರೀನಿವಾಸ ರಾವ್ ನಿಧನ: ಅಣ್ಣಾವ್ರ ಜತೆ ಐಕಾನಿಕ್ ಸಿನಿಮಾಗಳನ್ನು ಮಾಡಿದ್ದ ನಿರ್ದೇಶಕ

‘ಲಲಿತಮ್ಮ ಅವರು 180ಕ್ಕೂ ಅಧಿಕ ನಾಟಕಗಳಲ್ಲಿ ಅಭಿನಯಿಸಿದ್ದರು. ‘ರಂಗೋಲಿ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದರು. ಇಂದು ಅವರು ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ‘ಅಮ್ಮನ ಮಡಿಲು ಟ್ರಸ್ಟ್’ನ ಶಶಿಕಲಾ ಅವರು ವಿಡಿಯೋ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us