ಪತ್ನಿ ಜತೆ 5 ನಿಮಿಷಕ್ಕಿಂತ ಹೆಚ್ಚು ಮಾತನಾಡಲು ಸಾಧ್ಯವಾಗದೇ ದರ್ಶನ್​ ಪರದಾಟ

ಬಳ್ಳಾರಿ ಜೈಲಿನ ಕಠಿಣ ನಿಮಯಗಳಿಂದಾಗಿ ದರ್ಶನ್​ಗೆ ಕಾರಾಗೃಹ ವಾಸ ಕಷ್ಟವಾಗಿದೆ. ಜಾರ್ಜ್​ಶೀಟ್​ ಸಲ್ಲಿಕೆಯ ಬಗ್ಗೆ ಪತ್ನಿ ಹಾಗೂ ಲಾಯರ್​ ಜೊತೆ ಮಾತನಾಡಲು ಕೂಡ ದರ್ಶನ್​ಗೆ ಕೇವಲ 5 ನಿಮಿಷ ಅವಕಾಶ ನೀಡಲಾಗಿದೆ. ಅಷ್ಟು ಕಡಿಮೆ ಸಮಯದಲ್ಲಿ ಎಲ್ಲವನ್ನೂ ಮಾತನಾಡಲು ಸಾಧ್ಯವಾಗದೇ ದರ್ಶನ್​ ಪರದಾಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಪತ್ನಿ ಜತೆ 5 ನಿಮಿಷಕ್ಕಿಂತ ಹೆಚ್ಚು ಮಾತನಾಡಲು ಸಾಧ್ಯವಾಗದೇ ದರ್ಶನ್​ ಪರದಾಟ
ವಿಜಯಲಕ್ಷ್ಮಿ, ದರ್ಶನ್​
Follow us
| Updated By: ಮದನ್​ ಕುಮಾರ್​

Updated on: Sep 04, 2024 | 4:40 PM

ನಟ ದರ್ಶನ್​ ಪ್ರಮುಖ ಆರೋಪಿ ಆಗಿರುವ ರೇಣುಕಾಸ್ವಾಮಿ ಕೊಲೆ ಕೇಸ್​ನ ಜಾರ್ಜ್​ಶೀಟ್​ ಇಂದು (ಸೆ.4) ಸಲ್ಲಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್​ಗೆ ಸಂಕಷ್ಟ ಹೆಚ್ಚಾಗಿದೆ. ಚಾರ್ಜ್​ಶೀಟ್​ನಲ್ಲಿ ಇರುವ ವಿಚಾರಗಳನ್ನು ತಿಳಿದುಕೊಳ್ಳಲು ದರ್ಶನ್​ ಹಾತೊರೆಯುತ್ತಿದ್ದಾರೆ. ಆದರೆ ಕುಟುಂಬದವರ ಜೊತೆ ಮಾತನಾಡುವುದು ಅಷ್ಟು ಸುಲಭವಲ್ಲ. ಬಳ್ಳಾರಿ ಜೈಲಿನಲ್ಲಿ ಇರುವ ಅವರು ಕೇವಲ 5 ನಿಮಿಷಗಳ ಕಾಲ ಪತ್ನಿ ವಿಜಯಲಕ್ಷ್ಮಿ ಜೊತೆ ಮಾತನಾಡಿದ್ದಾರೆ. ಆದರೆ ಪೂರ್ತಿ ವಿಷಯ ತಿಳಿದುಕೊಳ್ಳುವುದಕ್ಕೂ ಮುನ್ನವೇ ಅವಧಿ ಮುಕ್ತಾಯ ಆಗಿದ್ದರಿಂದ ದರ್ಶನ್​ ಪರದಾಡಿದ್ದಾರೆ.

ಬಳ್ಳಾರಿ ಸೆಂಟ್ರಲ್ ಜೈಲ್‌ನ ಲ್ಯಾಂಡ್ ಲೈನ್​ನಿಂದ ಪತ್ನಿ ವಿಜಯಲಕ್ಷ್ಮಿ ನಂಬರ್‌ಗೆ ದರ್ಶನ್​ ಕರೆ ಮಾಡಿದ್ದಾರೆ. ಅತ್ತ ಕಡೆಯಿಂದ ವಿಜಯಲಕ್ಷ್ಮಿ ಫೋನ್ ರಿಸೀವ್ ಮಾಡುತ್ತಿದ್ದಂತೆಯೇ ದರ್ಶನ್ ಭಾವುಕರಾಗಿದ್ದಾರೆ. 5 ನಿಮಿಷಗಳ ಕಾಲ ಅವರು ಎಮೋಷನಲ್​ ಆಗಿಯೇ ಮಾತನಾಡಿದ್ದಾರೆ. ಕುಟುಂಬಸ್ಥರ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಚಾರ್ಜ್​ಶೀಟ್​ನಲ್ಲಿ ಇರುವ ವಿಚಾರಗಳನ್ನು ತಿಳಿಯಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?

ಈ ಕೇಸ್​ನಲ್ಲಿ ತಮಗೆ ಜಾಮೀನು ಸಿಗುತ್ತಾ ಅಥವಾ ಎಲ್ಲವಾ ಎಂಬ ಆತಂಕದಲ್ಲೇ ದರ್ಶನ್ ಅವರು ಪತ್ನಿಯೊಂದಿಗೆ ಚರ್ಚೆ ಮಾಡಿದ್ದಾರೆ. ಮಾತನಾಡಲು ಸಿಕ್ಕ 5 ನಿಮಿಷ ಅವಧಿಯಲ್ಲಿ ಎಲ್ಲವೂ ಕೇಳಲಾಗಲಿಲ್ಲ ಎಂಬ ಟೆನ್ಷನ್​ನಲ್ಲಿ ದರ್ಶನ್​ ಪರಿತಪಿಸಿದ್ದಾರೆ. ಚಾರ್ಜ್​ಶೀಟ್​ ಹಾಗೂ ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಸರಿಯಾಗಿ ಮಾಹಿತಿ ಪಡೆಯಲು 5 ನಿಮಿಷದಲ್ಲಿ ಸಾಧ್ಯವಾಗಲಿಲ್ಲ. ಆದ್ದರಿಂದ ದರ್ಶನ್​ಗೆ ಟೆನ್ಷನ್​ ಹೆಚ್ಚಾಗಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ

ಇಂಥ ತುರ್ತು ಪರಿಸ್ಥಿತಿಯಲ್ಲಿ ಕೂಡ ಪತ್ನಿ ಮತ್ತು ವಕೀಲರ ಜೊತೆ ಸೂಕ್ತವಾಗಿ ಮಾತನಾಡಲು ದರ್ಶನ್​ಗೆ ಸಾಧ್ಯವಾಗಿಲ್ಲ. ಅವರ ಸಂಪೂರ್ಣ ಮಾತುಕತೆಯನ್ನು ರೆಕಾರ್ಡ್​ ಮಾಡಲಾಗಿದೆ. ಪತ್ನಿಯ ದೂರವಾಣಿ ಕರೆ ಕಟ್​ ಆಗುತ್ತಿದ್ದಂತೆಯೇ ದರ್ಶನ್​ ಅವರು ಸೆಲ್​ನತ್ತ ತೆರಳಿದ್ದಾರೆ. ಜೈಲಿನಲ್ಲಿರುವ ದರ್ಶನ್​ಗೆ ಈಗ ನೆನಪಿರುವುದು ಪತ್ನಿಯ ಫೋನ್​ ನಂಬರ್​ ಮಾತ್ರ. ಹಾಗಾಗಿ ಆ ನಂಬರ್​ ಮೂಲಕವೇ ಲಾಯರ್ ಜತೆ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್