ಕುದುರೆ ಓಡಿಸೋದ್ರಲ್ಲಿ ತಂದೆಯನ್ನೂ ಮೀರಿಸ್ತಾರೆ ವಿನೀಶ್ ದರ್ಶನ್; ಇಲ್ಲಿದೆ ವಿಡಿಯೋ

ವಿನೀಶ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ಕುದುರೆ ಮೇಲಿರೋ ಫೋಟೋ ಹಂಚಿಕೊಂಡಿದ್ದಾರೆ. ‘ಕುದುರೆ ಇರೋವಾಗ ಫ್ಯಾನ್ಸಿ ಕಾರುಗಳ ಅವಶ್ಯಕತೆ ಏನಿದೆ’ ಎಂದು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಕುದುರೆ ಓಡಿಸೋದ್ರಲ್ಲಿ ತಂದೆಯನ್ನೂ ಮೀರಿಸ್ತಾರೆ ವಿನೀಶ್ ದರ್ಶನ್; ಇಲ್ಲಿದೆ ವಿಡಿಯೋ
ವಿನೀಶ್
Follow us
ರಾಜೇಶ್ ದುಗ್ಗುಮನೆ
|

Updated on: Apr 01, 2024 | 8:46 AM

ನಟ ದರ್ಶನ್ ಅವರಿಗೆ ಪ್ರಾಣಿಗಳನ್ನು ಕಂಡರೆ ಸಖತ್ ಪ್ರೀತಿ. ಅವರು ಮೈಸೂರಿನಲ್ಲಿ ಫಾರ್ಮ್​ಹೌಸ್ ಹೊಂದಿದ್ದಾರೆ. ಅಲ್ಲಿ ಸಾಕಷ್ಟು ಪ್ರಾಣಿಗಳನ್ನು ಸಾಕಿದ್ದಾರೆ. ಕುದುರೆ ಓಡಿಸೋದು ಅಂದರೆ ದರ್ಶನ್ (Darshan) ಅವರಿಗೆ ಸಖತ್ ಇಷ್ಟ. ಅವರ ಮಗ ವಿನೀಶ್ ಕೂಡ ಇದಕ್ಕೆ ಹೊರತಾಗಿಲ್ಲ. ಅವರಿಗೆ ಕುದುರೆ ಮೇಲೆ ಸಖತ್ ಪ್ರೀತಿ ಇದೆ. ವಿನೀಶ್ ಕೂಡ ಸಖತ್ ಆಗಿ ಕುದುರೆ ಓಡಿಸುತ್ತಾರೆ. ಈ ವಿಚಾರದಲ್ಲಿ ವಿನೀಶ್ ತಂದೆಯನ್ನು ಮೀರಿಸುತ್ತಾರೆ. ಈಗ ವೈರಲ್ ಆಗಿರೋ ವಿಡಿಯೋನೆ ಇದಕ್ಕೆ ಸಾಕ್ಷಿ.

ವಿನೀಶ್​ಗೆ ಈಗಿನ್ನೂ 15 ತುಂಬಿಲ್ಲ. ಅವರು ತಂದೆ ದರ್ಶನ್ ರೀತಿಯೇ ಕುದುರೆ ಓಡಿಸೋದ್ರಲ್ಲಿ ಎಕ್ಸ್​ಪರ್ಟ್. ಇತ್ತೀಚೆಗೆ ವಿನೀಶ್ ದುಬೈ ತೆರಳಿದ್ದರು. ಅಲ್ಲಿ ಕುದುರೆ ಓಡಿಸಿದ್ದಾರೆ. ನುರಿತ ಸವಾರನಂತೆ ವಿನೀಶ್ ವೇಗವಾಗಿ ಕುದುರೆ ಓಡಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ಇದನ್ನೂ ಓದಿ: ‘ಏಪ್ರಿಲ್ 3ಕ್ಕೆ ನಿರ್ಧಾರ ತಿಳಿಸುವೆ, ಅಂದು ದರ್ಶನ್ ನನ್ನ ಜೊತೆ ಇರ್ತಾರೆ’; ಸುಮಲತಾ

ವಿನೀಶ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ಕುದುರೆ ಮೇಲಿರೋ ಫೋಟೋ ಹಂಚಿಕೊಂಡಿದ್ದಾರೆ. ‘ಕುದುರೆ ಇರೋವಾಗ ಫ್ಯಾನ್ಸಿ ಕಾರುಗಳ ಅವಶ್ಯಕತೆ ಏನಿದೆ’ ಎಂದು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

View this post on Instagram

A post shared by Vinish (@vinish_darshan4)

ಈ ಮೊದಲು ದರ್ಶನ್ ಜೊತೆ ಕುದುರೆ ಓಡಿಸುತ್ತಿರುವ ಫೋಟೋನ ವಿನೀಶ್ ಅವರು ಹಂಚಿಕೊಂಡಿದ್ದರು. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿತ್ತು. ಈಗ ಅವರು ಗೆಳೆಯರ ಜೊತೆ ಕುದುರೆ ಓಡಿಸಿದ್ದಾರೆ. ವಿನೀಶ್ ಫೋಟೋನ ಜನರು ಸಖತ್ ಇಷ್ಟಪಟ್ಟಿದ್ದಾರೆ. ದರ್ಶನ್​ಗೆ ವಿನೀಶ್ ಮೇಲೆ ಎಲ್ಲಿಲ್ಲದ ಪ್ರೀತಿ. ದರ್ಶನ್ ಅವರು ‘ಕಾಟೇರ’ ಸಿನಿಮಾದಿಂದ ದೊಡ್ಡ ಗೆಲುವು ಪಡೆದಿದ್ದಾರೆ. ಈಗ ಅವರು ‘ಡೆವಿಲ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು