AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಆ್ಯಕ್ಷನ್ ಕಟ್ ಹೇಳೋಕೆ ರೆಡಿ ಆದ ದಿನಕರ್; ಮತ್ತೆ ಒಂದಾದ ಹಿಟ್ ಕಾಂಬಿನೇಷನ್

ದಿನಕರ್ ತೂಗುದೀಪ ಮತ್ತು ದರ್ಶನ್ ಅವರ ಮುಂದಿನ ಸಿನಿಮಾ ಬಗ್ಗೆ ತೀವ್ರ ನಿರೀಕ್ಷೆ ಇದೆ. ದರ್ಶನ್ ಅವರ ಬೆನ್ನು ನೋವಿನಿಂದ ಚಿತ್ರದ ಚಿತ್ರೀಕರಣಕ್ಕೆ ತಡೆ ಉಂಟಾಗಿದೆ. ಈ ಮಧ್ಯೆ ದಿನಕರ್ ಅವರು ದರ್ಶನ್ ಜೊತೆ ಸಿನಿಮಾ ಮಾಡುವುದು ಖಚಿತ ಎಂದು ತಿಳಿಸಿದ್ದಾರೆ. ಅವರ ನಡುವಿನ ಜಗಳದ ವದಂತಿಗಳಿಗೆ ಸ್ಪಷ್ಟನೆ ನೀಡಿದ ದಿನಕರ್, ಅವರು ಒಳ್ಳೆಯ ಸಂಬಂಧ ಹೊಂದಿದ್ದಾರೆ ಎಂದಿದ್ದಾರೆ.

ದರ್ಶನ್​ಗೆ ಆ್ಯಕ್ಷನ್ ಕಟ್ ಹೇಳೋಕೆ ರೆಡಿ ಆದ ದಿನಕರ್; ಮತ್ತೆ ಒಂದಾದ ಹಿಟ್ ಕಾಂಬಿನೇಷನ್
ದರ್ಶನ್
Malatesh Jaggin
| Edited By: |

Updated on:Dec 28, 2024 | 11:42 AM

Share

ನಿರ್ದೇಶಕ ದಿನಕರ್ ತೂಗುದೀಪ ಅವರು ನಿರ್ದೇಶಕನಾಗಿ, ನಟನಾಗಿ, ನಿರ್ಮಾಪಕನಾಗಿ, ಬರಹಗಾರನಾಗಿ ಗುರುತಿಸಿಕೊಂಡಿದ್ದಾರೆ. ಇವರು ‘ನವಗ್ರಹ’ ಸಿನಿಮಾ ನಿರ್ದೇಶನ ಮಾಡಿ ಭರ್ಜರಿ ಯಶಸ್ಸು ಕಂಡರು. ಈ ಚಿತ್ರದಲ್ಲಿ ದರ್ಶನ್ ಅವರು ನೆಗೆಟಿವ್ ಪಾತ್ರ ಮಾಡಿದ್ದರು. ಆ ಬಳಿಕ ದರ್ಶನ್​ ನಟನೆಯ ‘ಸಾರಥಿ’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈಗ ಈ ಹಿಟ್ ಕಾಂಬಿನೇಷನ್ ಮತ್ತೊಮ್ಮೆ ಒಂದಾಗೋಕೆ ರೆಡಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

‘ರಾಯಲ್’ ಸಿನಿಮಾ ಹೆಸರಿನ ಚಿತ್ರವನ್ನು ದಿನಕರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಅವರಿಗೆ ದರ್ಶನ್ ಕುರಿತು ಪ್ರಶ್ನೆ ಎದುರಾಗಿದೆ. ದಿನಕರ್ ಹಾಗೂ ದರ್ಶನ್ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ಮಾತಿದೆ. ಈ ಬಗ್ಗೆ ಮಾತನಾಡಿದ ಅವರು, ‘ಅಣ್ಣ ತಮ್ಮ ಬೇರೆ ಆಗಿದ್ದೀವಿ ಎಂದು ಯಾರು ಹೇಳಿದ್ದಾರೆ? ಗಂಡ ಹೆಂಡತಿ ಮಧ್ಯೆ ಹೇಗೆ ಜಗಳವೋ ಹಾಗೆ ಅಣ್ಣ ತಮ್ಮ ಎಂದಮೇಲೆ ಜಗಳ ಇದ್ದೇ ಇರುತ್ತದೆ’ ಎಂದಿದ್ದಾರೆ ಅವರು.

ಹಾಗಂತ ಇವರು ಯಾವಾಗಲೂ ಜಗಳ ಆಡುತ್ತಾನೇ ಇರೋದಿಲ್ಲ. ‘ನಾವು ಮಾತನಾಡುತ್ತಲೇ ಇರುತ್ತೇವೆ. ತಿಂಗಳಿಗೊಮ್ಮೆ ಆಗೊಮ್ಮೆ ಈಗೊಮ್ಮೆ ನಮ್ಮ ಮಧ್ಯೆ ಮಾತುಕತೆ ನಡೆಯುತ್ತಾ ಇರುತ್ತದೆ. ಅತ್ತಿಗೆ ವಿಜಯಲಕ್ಷ್ಮೀ ಜೊತೆ ಯಾವಾಗಲೂ ಕಾಂಟ್ಯಾಕ್ಟ್​ನಲ್ಲಿದ್ದೇನೆ. ಈ ಸಿನಿಮಾಗೆ ದರ್ಶನ್ ಸಾಥ್ ಕೊಡಬಹುದು. ಸದ್ಯ ಅವರಿಗೆ ಬೆನ್ನು ನೋವಿದೆ. ಇದರ ಟ್ರೀಟ್​ಮೆಂಟ್​ಗಾಗಿ ಮೈಸೂರಿಗೆ ಹೋಗಿದ್ದೇವೆ. ಅಜಯ್ ಹೆಗಡೆ ಎರಡು ಬಾರಿ ಟ್ರೀಟ್​ಮೆಂಟ್ ಮಾಡಿದ್ದಾರೆ. ಈ ಕಾರಣಕ್ಕೆ ಅಲ್ಲಿಯೇ ಟ್ರೀಟ್​ಮೆಂಟ್ ನಡೆಯುತ್ತಿದೆ’ ಎಂದು ದಿನಕರ್ ಮಾಹಿತಿ ನೀಡಿದ್ದಾರೆ

ಸಿನಿಮಾ ಮಾಡೋ ವಿಚಾರ

‘ದರ್ಶನ್​ಗೆ ನಾನು ಸಿನಿಮಾ ಮಾಡೋದು ಖಚಿತ. ನಿರ್ಮಾಪಕರ ಲಿಸ್ಟ್ ದರ್ಶನ್ ಕಡೆಗಿದೆ. ಅವರಿಗೆ ಸಿನಿಮಾ ಮಾಡಬೇಕು ಅಂದಾಗ ಕಥೆ ಕೇಳೋಲ್ಲ. ದರ್ಶನ್ ನನಗಿಂತ ಇಂಡಸ್ಟ್ರಿಯಲ್ಲಿ ಸೀನಿಯರ್’ ಎಂದು ಖುಷಿ ಹೊರಹಾಕಿದ್ದಾರೆ ದಿನಕರ್.

ಇದನ್ನೂ ಓದಿ: ನೋವಿನಲ್ಲೂ ಅಭಿಮಾನಿಗಳನ್ನು ನೋಡಿ ನಗುತ್ತಾ ಕೈ ಬೀಸಿದ ದರ್ಶನ್

‘ಡೆವಿಲ್’ ಶೂಟಿಂಗ್

ಸಂಕ್ರಾಂತಿ ಬಳಿಕ ದರ್ಶನ್ ನಟನೆಯ ‘ಡೆವಿಲ್’ ಶೂಟಿಂಗ್ ಆರಂಭ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ದರ್ಶನ್ ಇನ್ನೂ ಬೆನ್ನು ನೋವಿನಿಂದ ಬಳಲುತ್ತಿದ್ದು, ಶೂಟಿಂಗ್ ಮತ್ತೆ ವಿಳಂಬ ಆಗುತ್ತದೆಉಏ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:41 am, Sat, 28 December 24

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ