AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ಹಾಗೂ ಗ್ಯಾಂಗ್​ನ ನ್ಯಾಯಾಲಯದ ಎದುರು ಹಾಜರುಪಡಿಸಲಿರೋ ಪೊಲೀಸರು

ಪ್ರಕರಣ ಸಂಬಂಧ ದರ್ಶನ್ ಹಾಗೂ ತಂಡವನ್ನು ಎರಡು ಬಾರಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಮಾಡಲಾಗಿದೆ. ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯ ಕಲೆ ಹಾಕಲಾಗಿದೆ.  ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ವಹಿಸುವಂತೆ ಪೊಲೀಸರ ಮನವಿ ಮಾಡೋ ಸಾಧ್ಯತೆ ಇದೆ.  

ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ಹಾಗೂ ಗ್ಯಾಂಗ್​ನ ನ್ಯಾಯಾಲಯದ ಎದುರು ಹಾಜರುಪಡಿಸಲಿರೋ ಪೊಲೀಸರು
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jun 20, 2024 | 7:55 AM

Share

ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿಗಳಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan), ಪವಿತ್ರಾ ಗೌಡ, ವಿನಯ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ಜೂನ್ 11ರಂದು ಈ ಬಂಧನ ನಡೆದಿದ್ದು, ಅಲ್ಲಿಂದ ಇಲ್ಲಿಯವರೆಗೆ ಪೊಲೀಸರು ವಿವಿಧ ರೀತಿಯಲ್ಲಿ ವಿಚಾರಣೆ ನಡೆಸಿದ್ದಾರೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ, ಇಂದು (ಜೂನ್ 10) ಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆಗಿದೆ. ಇದಕ್ಕೆ ದರ್ಶನ್ ಹಾಗೂ ಅವರ ಗ್ಯಾಂಗ್ ಕಾರಣ ಎನ್ನುವ ಆರೋಪ ಬಂದಿದೆ. ಹೀಗಾಗಿ ಜೂನ್ 11ರ ಮುಂಜಾನೆಯೇ ದರ್ಶನ್ ಅವರನ್ನು ಬಂಧಿಸಲಾಯಿತು. ಆ ಬಳಿಕ ಪವಿತ್ರಾ ಗೌಡ ಸೇರಿ ಹಲವರ ಬಂಧನ ಆಯಿತು. ಅನುಮಾನ ಇರುವ ಎಲ್ಲರನ್ನೂ ಪೊಲೀಸರು ಬಂಧಿಸಿದರು. ಎರಡನೇ ಬಾರಿಗೆ ಪೊಲೀಸ್ ಕಸ್ಟಡಿ ಅಂತ್ಯ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯದ ಎದುರು ಆರೋಪಿಗಳನ್ನು ಪೊಲೀಸರು ಹಾಜರಿಪಡಿಸಲಿದ್ದಾರೆ.

ಈಗಾಗಲೇ ಪ್ರಕರಣ ಸಂಬಂಧ ದರ್ಶನ್ ಹಾಗೂ ತಂಡವನ್ನು ಎರಡು ಬಾರಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಮಾಡಲಾಗಿದೆ. ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯ ಕಲೆ ಹಾಕಲಾಗಿದೆ.  ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ವಹಿಸುವಂತೆ ಪೊಲೀಸರ ಮನವಿ ಮಾಡೋ ಸಾಧ್ಯತೆ ಇದೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಕುಟುಂಬಕ್ಕೆ ಸಂತಾಪ ಸೂಚಿಸಿದ ದರ್ಶನ್​ ಪತ್ನಿ ವಿಜಯಲಕ್ಷ್ಮಿ

2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ದರ್ಶನ್ ಅವರು ಜೈಲು ಪಾಲಾಗಿದ್ದರು. 14 ದಿನ ಸೆಂಟ್ರಲ್ ಜೈಲಿನಲ್ಲಿ ದರ್ಶನ್ ಇದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Thu, 20 June 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ