AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಟ್ರೀವ್ ಆಗಿಲ್ಲ ದರ್ಶನ್​-ಪವಿತ್ರಾ ಐಫೋನ್; ಮುಂದೇನು?

ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್ ಆಗಿದೆ. ಈ ಫೋಟೋ ನೋಡಿದವರ ಕರುಳು ಚುರಕ್ ಎಂದಿದೆ. ಈ ಫೋಟೋಗಳು ಪ್ರದೋಷ್ ಮೊಬೈಲ್​ನಿಂದ ರಿಟ್ರೀವ್ ಮಾಡಲಾಗಿದೆ. ಆದರೆ, ದರ್ಶನ್ ಮೊಬೈಲ್​ನ ರಿಟ್ರೀವ್ ಮಾಡೋಕೆ ಆಗಿಲ್ಲ.

ರಿಟ್ರೀವ್ ಆಗಿಲ್ಲ ದರ್ಶನ್​-ಪವಿತ್ರಾ ಐಫೋನ್; ಮುಂದೇನು?
ದರ್ಶನ್​-ಪವಿತ್ರಾ ಐಫೋನ್​ ರಿಟ್ರೀವ್ ಮಾಡಲಾಗದೇ ಕೈಚೆಲ್ಲಿದ ತಜ್ಞರು
Sunil MH
| Edited By: |

Updated on:Sep 05, 2024 | 12:44 PM

Share

ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರು ರೇಣುಕಾ ಸ್ವಾಮಿ ಗೌಡ ಕೊಲೆ ಕೇಸ್​ನಲ್ಲಿ ಎ2 ಹಾಗೂ ಎ1 ಆರೋಪಿ ಆಗಿದ್ದಾರೆ. ಇವರ ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಈ ಮೊಬೈಲ್​ನಲ್ಲಿರುವ ಡಾಟಾ ರಿಟ್ರೀವ್ ಮಾಡಲು ಹೈದರಾಬಾದ್​ನ ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯದ (CFSL) ತಜ್ಞರ ಬಳಿ ಸಾಧ್ಯವಾಗಿಲ್ಲ. ಐಫೋನ್ ಆಗಿರುವ ಹಿನ್ನೆಲೆಯಲ್ಲಿ ಯಾವುದೇ ಡಾಟಾ ತೆಗೆಯಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ದರ್ಶನ್ ಹಾಗೂ ಪವಿತ್ರಾ ಅವರನ್ನು ಅರೆಸ್ಟ್ ಮಾಡಿದ ಬಳಿಕ ಅವರ ಮೊಬೈಲ್​​ಗಳನ್ನು ವಶಕ್ಕೆ ಪಡೆಯಲಾಗಿತ್ತು. ಮೊಬೈಲ್​ನಲ್ಲಿರುವ ಡಾಟಾ ಪಡೆಯಲು ಮೊಬೈಲ್​ನ ಹೈದರಾಬಾದ್​ನ CFS ಲ್ಯಾಬ್​ಗೆ ಕಳುಹಿಸಲಾಗಿತ್ತು. ಆದರೆ, ಈಗ ಅವರು ಎರಡೂ ಮೊಬೈಲ್​​ಗಳನ್ನು ವಾಪಸ್​ ಕಳುಹಿಸಿದ್ದಾರೆ.

ಕಳೆದ ಒಂದೂವರೆ ತಿಂಗಳಿನಿಂದ ಈ ಮೊಬೈಲ್​ಗಳು ಲ್ಯಾಬ್​ನಲ್ಲಿ ಇತ್ತು. ಎಫ್ಎಸ್ಎಲ್ ತಜ್ಞರು ರಿಟ್ರೀವ್​​ಗೆ ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ, ಅವರಿಂದ ಸಾಧ್ಯವಾಗಿಲ್ಲ. ಹೀಗಾಗಿ, 2 ಐಫೋನ್​​ಗಳನ್ನು ಗುಜರಾತ್​​ನ ಎಫ್​ಎಸ್​ಎಲ್​​ ಯೂನಿವರ್ಸಿಟಿಗೆ ಕಳಿಸಲು ಚಿಂತನೆ ನಡೆಸಿದ್ದಾರೆ. ಇಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಇರುತ್ತದೆ.

ಇದನ್ನೂ ಓದಿ: ‘ನನ್ನ ಮಗನಿಗಾದ ನೋವು ದರ್ಶನ್​ಗೂ ಆಗಬೇಕು’; ಹಿಡಿಶಾಪ ಹಾಕಿದ ರೇಣುಕಾಸ್ವಾಮಿ ತಂದೆ

ಈ ಮೊದಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಸ್​ನಲ್ಲೂ ಹೀಗೆಯೇ ಆಗಿತ್ತು. ಅವರ ಮೊಬೈಲ್​ನ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿತ್ತು. ಈ ಮೊಬೈಲ್​ನ ಅನ್​ಲಾಕ್ ಮಾಡಲು ಸಹಾಯ ಮಾಡುವುದಿಲ್ಲ ಎಂದು ಆ್ಯಪಲ್ ಸಂಸ್ಥೆ ಹೇಳಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:36 pm, Thu, 5 September 24

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ