AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​​ನಲ್ಲಿ ಅಕ್ಕ-ಪಕ್ಕ ನಿಂತರೂ ಮಾತನಾಡದ ದರ್ಶನ್-ಪವಿತ್ರಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಅರೆಸ್ಟ್ ಆಗಿದ್ದರು. ಇವರೆಲ್ಲರೂ ಈಗ ಜಾಮೀನಿನ ಮೇಲೆ ಹೊರಕ್ಕೆ ಬಂದಿದ್ದಾರೆ. ಈ ಪ್ರಕರಣದ 17 ಆರೋಪಿಗಳು ಇಂದು (ಫೆಬ್ರವರಿ 25) ಕೋರ್ಟ್ ಮುಂದೆ ಹಾಜರಾಗಿದ್ದಾರೆ. ಆದರೆ, ದರ್ಶನ್-ಪವಿತ್ರಾ ಮಾತನಾಡಿಲ್ಲ.

ಕೋರ್ಟ್​​ನಲ್ಲಿ ಅಕ್ಕ-ಪಕ್ಕ ನಿಂತರೂ ಮಾತನಾಡದ ದರ್ಶನ್-ಪವಿತ್ರಾ
ಪವಿತ್ರಾ-ದರ್ಶನ್
Ramesha M
| Updated By: ರಾಜೇಶ್ ದುಗ್ಗುಮನೆ|

Updated on:Feb 25, 2025 | 2:12 PM

Share

ಬೆಂಗಳೂರು, ಫೆ. 25: ದರ್ಶನ್ ಹಾಗೂ ಪವಿತ್ರಾ ಗೌಡ ಮಧ್ಯೆ ಈ ಮೊದಲು ಸಾಕಷ್ಟು ಆಪ್ತತೆ ಇತ್ತು. ಈ ಆಪ್ತತೆ ಈಗ ಮುರಿದು ಬಿದ್ದಿದೆ. ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್ ಬಂಧನ ಆದ ಬಳಿಕ ಇಬ್ಬರ ಮಧ್ಯೆ ಇದ್ದ ಬಾಂಧವ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ಇಂದು (ಫೆಬ್ರವರಿ 25) ಕೋರ್ಟ್ ಎದುರು ದರ್ಶನ್ ಹಾಗೂ ಪವಿತ್ರಾ ಗೌಡ ಮುಖಾಮುಖಿ ಆದರು. ಆದರೆ, ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲೇ ಇಲ್ಲ.

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ 17ರ ಜನರ ಬಂಧನ ಆಗಿತ್ತು. ಇವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಷರತ್ತುಗಳ ಪ್ರಕಾರ ಪ್ರತಿ ತಿಂಗಳು ಕೋರ್ಟ್​ಗೆ ಹಾಜರಿ ಹಾಕಬೇಕಿತ್ತು. ಅಂತೆಯೇ, ಬೆಂಗಳೂರಿನ 57ನೇ ಸಿಸಿಹೆಚ್​ ಕೋರ್ಟ್​ನಲ್ಲಿ 17 ಆರೋಪಿಗಳ ವಿಚಾರಣೆ ನಡೆದಿದೆ. ಮೊದಲು ಜಡ್ಜ್​​ ಎಲ್ಲಾ ಆರೋಪಿಗಳ ಹೆಸರು ಕರೆದಿದ್ದಾರೆ.

ಆ ಬಳಿಕ ಕೋರ್ಟ್​ನಲ್ಲಿ ಆರೋಪಿ ದರ್ಶನ್​​, ಪವಿತ್ರಾಗೌಡ ಮುಖಾಮುಖಿ ಆಗಿದ್ದಾರೆ. ಕೋರ್ಟ್​ನಲ್ಲಿ ಮುಖಾಮುಖಿ ಆದರೂ ಇಬ್ಬರೂ ಮಾತನಾಡಿಲ್ಲ. ಕಳೆದ ಬಾರಿ ಕೋರ್ಟ್​ಗೆ ಬಂದಾಗ ದರ್ಶನ್ ಹಾಗೂ ಪವಿತ್ರಾ ಪರಸ್ಪರ ಸಂಭಾಷಣೆ ನಡೆಸಿಕೊಂಡಿದ್ದರು. ಈ ಬಾರಿ ಕೋರ್ಟ್​ನಲ್ಲಿ ಮಾತನಾಡಿಲ್ಲ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ದರ್ಶನ್ ಕಾಲಿಗೆ ಬಿದ್ದ ಅಭಿಮಾನಿ; ಡಿ ಬಾಸ್ ಪ್ರತಿಕ್ರಿಯೆ ಏನು?

ದರ್ಶನ್ ಪರ ವಕೀಲರ ಆರೋಪ

ಅಪ್ರೂವರ್ ಆಗುವಂತೆ ಇತರೆ ಆರೋಪಿಗಳಿಗೆ ಪೊಲೀಸರು ಒತ್ತಡ ಹೇರುತ್ತಿದ್ದಾರೆ ಎಂದು ದರ್ಶನ್ ಪರ ವಕೀಲ ಸುನೀಲ್ ಕೋರ್ಟ್​​ನಲ್ಲಿ ಆರೋಪಿಸಿದ್ದಾರೆ. ‘ಮಾಫಿ ಸಾಕ್ಷಿಯಾಗುವಂತೆ ಪೊಲೀಸರಿಂದ ಒತ್ತಡ ಬಂದಿದೆ’ ಎಂದು ಸುನೀಲ್ ಹೇಳಿದರು. ಇದಕ್ಕೆ ಉತ್ತರಿಸಿ ಜಡ್ಜ್ ಜೈಶಂಕರ್, ‘ಅಪ್ರೂವರ್ ಆಗಲು ಕೋರ್ಟ್ ಅನುಮತಿ ಬೇಕು. ಒತ್ತಡದಿಂದ ಮಾಫಿ ಸಾಕ್ಷಿಯಾಗಿ ಮಾಡಲಾಗದು. ನೀವು ಅರ್ಜಿ ಹಾಕಿದರೆ ಈ ಬಗ್ಗೆ ವಿಚಾರಣೆ ನಡೆಸಬಹುದು’ ಎಂದು ಜಡ್ಜ್​ ಉತ್ತರಿಸಿದರು. ಸದ್ಯ ಪ್ರಕರಣದ ವಿಚಾರಣೆ ಏಪ್ರಿಲ್8 ಕ್ಕೆ ಮುಂದೂಡಿಕೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:04 pm, Tue, 25 February 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ