Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುಖಾಮುಖಿ ಆಗಲಿದ್ದಾರೆ ದರ್ಶನ್ ಹಾಗೂ ಪವಿತ್ರಾ?

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಜನ ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಹಾಜರಾಗಬೇಕಿದೆ. ಜಾಮೀನಿನ ಮೇಲೆ ಹೊರಗಿರುವ ಆರೋಪಿಗಳು ನ್ಯಾಯಾಧೀಶರ ಮುಂದೆ ತಮ್ಮ ಹೇಳಿಕೆ ನೀಡಲಿದ್ದಾರೆ. ಕೋರ್ಟ್‌ನಲ್ಲಿ ದರ್ಶನ್ ಮತ್ತು ಪವಿತ್ರಾ ಮತ್ತೆ ಮುಖಾಮುಖಿಯಾಗುವ ಸಾಧ್ಯತೆ ಇದೆ.

ಮತ್ತೆ ಮುಖಾಮುಖಿ ಆಗಲಿದ್ದಾರೆ ದರ್ಶನ್ ಹಾಗೂ ಪವಿತ್ರಾ?
ದರ್ಶನ್
Follow us
Malatesh Jaggin
| Updated By: ರಾಜೇಶ್ ದುಗ್ಗುಮನೆ

Updated on: Feb 25, 2025 | 8:56 AM

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಅರೆಸ್ಟ್ ಆಗಿದ್ದರು. ಇವರೆಲ್ಲರೂ ಈಗ ಜಾಮೀನಿನ ಮೇಲೆ ಹೊರಕ್ಕೆ ಬಂದಿದ್ದಾರೆ.  ಈ ಪ್ರಕರಣದ 17 ಆರೋಪಿಗಳು ಇಂದು (ಫೆಬ್ರವರಿ 25) ಕೋರ್ಟ್​ ಮುಂದೆ ಹಾಜರಾಗುವ ಸಾಧ್ಯತೆ ಇದೆ. ಹೀಗಾಗಿ ಕೋರ್ಟ್ ಎದುರು ಭದ್ರತೆ ಆಯೋಜಿಸಲು ಎಲ್ಲಾ ಸಿದ್ಧತೆ ನಡೆದಿದೆ. ಕೋರ್ಟ್ ವಿಚಾರಣೆ ವೇಳೆ ದರ್ಶನ್ ಹಾಗೂ ಪವಿತ್ರಾ ಮತ್ತೆ ಮುಖಾಮುಖಿ ಆಗುವ ಸಾಧ್ಯತೆ ಇದೆ.

ಬೆಂಗಳೂರಿನ 57ನೇ ಸಿಸಿಹೆಚ್​ ಕೋರ್ಟ್​ನಲ್ಲಿ 17 ಆರೋಪಿಗಳ ವಿಚಾರಣೆ ನಡೆಯಲಿದೆ. ಜಡ್ಜ್ ಎದುರು ಆರೋಪಿಗಳು ತಮ್ಮ ಹೇಳಿಕೆ ನೀಡಲಿದ್ದಾರೆ. ಜಾಮೀನು ನೀಡುವಾಗ ಆರೋಪಿಗಳಿಗೆ ಹೈಕೋರ್ಟ್ ಷರತ್ತು ವಿಧಿಸಿತ್ತು. ಪ್ರತಿ ತಿಂಗಳು ವಿಚಾರಣೆಗೆ ಹಾಜರಾಗಬೇಕು ಎಂದು ಆರೋಪಿಗಳಿಗೆ ಸೂಚಿಸಿತ್ತು. ಹೀಗಾಗಿ ಬೆಳಿಗ್ಗೆ 11 ಗಂಟೆಗೆ ನಡೆಯುವ ವಿಚಾರಣೆಯಲ್ಲಿ ಆರೋಪಿಗಳು ಹಾಜರಿ ಹಾಕಲಿದ್ದಾರೆ. ಆಗ ದರ್ಶನ್ ಹಾಗೂ ಪವಿತ್ರಾ ಮತ್ತೆ ಮುಖಾಮುಖಿ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಗೈರಾದರೆ?

ಕೆಲವೊಮ್ಮೆ ಆರೋಪಿಗಳು ಕೋರ್ಟ್​​ಗೆ ಹಾಜರಾಗಲು ಸಾಧ್ಯ ಆಗದೆ ಇರಬಹುದು. ಈ ವೇಳೆ ಎಲ್ಲಾ ಆರೋಪಿಗಳು ಸೂಕ್ತ ಕಾರಣ ನೀಡಿ ವಿನಾಯಿತಿ ಪಡೆಯಬೇಕು. ಇಲ್ಲದಿದ್ದರೆ ಕಾನೂನಾತ್ಮಕವಾಗಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: ಚಾಮುಂಡೇಶ್ವರಿ ಈ ಜಾಗದಲ್ಲಿ ನೆಲೆಸಿದ್ದಾಳೆ: ಗೌಡಗೆರೆ ದೇವಾಲಯದ ಬಗ್ಗೆ ದರ್ಶನ್ ತಾಯಿ ಮಾತು

‘ಡೆವಿಲ್’ ಸಿನಿಮಾ

ದರ್ಶನ್ ಅವರು ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಬೇಕಿದೆ. ಸದ್ಯ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ ಶೀಘ್ರವೇ ಆರಂಭ ಆಗಬೇಕಿದೆ. ಈ ಚಿತ್ರದ ಬಳಿಕ ಪ್ರೇಮ್ ಜೊತೆಯೂ ದರ್ಶನ್ ಸಿನಿಮಾ ಮಾಡುತ್ತಿದ್ದಾರೆ. ಸೂರಪ್ಪ ಬಾಬು ಜೊತೆ ದರ್ಶನ್ ಸಿನಿಮಾ ಮಾಡಬೇಕಿತ್ತು. ಆದರೆ, ಅದು ಸಾಧ್ಯ ಆಗುತ್ತಿಲ್ಲ ಎಂದು ಅವರು ಹೇಳಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​