ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಅರೆಸ್ಟ್ ಆಗಿದ್ದರು. ಇವರೆಲ್ಲರೂ ಈಗ ಜಾಮೀನಿನ ಮೇಲೆ ಹೊರಕ್ಕೆ ಬಂದಿದ್ದಾರೆ. ಈ ಪ್ರಕರಣದ 17 ಆರೋಪಿಗಳು ಇಂದು (ಫೆಬ್ರವರಿ 25) ಕೋರ್ಟ್ ಮುಂದೆ ಹಾಜರಾಗುವ ಸಾಧ್ಯತೆ ಇದೆ. ಹೀಗಾಗಿ ಕೋರ್ಟ್ ಎದುರು ಭದ್ರತೆ ಆಯೋಜಿಸಲು ಎಲ್ಲಾ ಸಿದ್ಧತೆ ನಡೆದಿದೆ. ಕೋರ್ಟ್ ವಿಚಾರಣೆ ವೇಳೆ ದರ್ಶನ್ ಹಾಗೂ ಪವಿತ್ರಾ ಮತ್ತೆ ಮುಖಾಮುಖಿ ಆಗುವ ಸಾಧ್ಯತೆ ಇದೆ.
ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ 17 ಆರೋಪಿಗಳ ವಿಚಾರಣೆ ನಡೆಯಲಿದೆ. ಜಡ್ಜ್ ಎದುರು ಆರೋಪಿಗಳು ತಮ್ಮ ಹೇಳಿಕೆ ನೀಡಲಿದ್ದಾರೆ. ಜಾಮೀನು ನೀಡುವಾಗ ಆರೋಪಿಗಳಿಗೆ ಹೈಕೋರ್ಟ್ ಷರತ್ತು ವಿಧಿಸಿತ್ತು. ಪ್ರತಿ ತಿಂಗಳು ವಿಚಾರಣೆಗೆ ಹಾಜರಾಗಬೇಕು ಎಂದು ಆರೋಪಿಗಳಿಗೆ ಸೂಚಿಸಿತ್ತು. ಹೀಗಾಗಿ ಬೆಳಿಗ್ಗೆ 11 ಗಂಟೆಗೆ ನಡೆಯುವ ವಿಚಾರಣೆಯಲ್ಲಿ ಆರೋಪಿಗಳು ಹಾಜರಿ ಹಾಕಲಿದ್ದಾರೆ. ಆಗ ದರ್ಶನ್ ಹಾಗೂ ಪವಿತ್ರಾ ಮತ್ತೆ ಮುಖಾಮುಖಿ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.
ಕೆಲವೊಮ್ಮೆ ಆರೋಪಿಗಳು ಕೋರ್ಟ್ಗೆ ಹಾಜರಾಗಲು ಸಾಧ್ಯ ಆಗದೆ ಇರಬಹುದು. ಈ ವೇಳೆ ಎಲ್ಲಾ ಆರೋಪಿಗಳು ಸೂಕ್ತ ಕಾರಣ ನೀಡಿ ವಿನಾಯಿತಿ ಪಡೆಯಬೇಕು. ಇಲ್ಲದಿದ್ದರೆ ಕಾನೂನಾತ್ಮಕವಾಗಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಇದನ್ನೂ ಓದಿ: ಚಾಮುಂಡೇಶ್ವರಿ ಈ ಜಾಗದಲ್ಲಿ ನೆಲೆಸಿದ್ದಾಳೆ: ಗೌಡಗೆರೆ ದೇವಾಲಯದ ಬಗ್ಗೆ ದರ್ಶನ್ ತಾಯಿ ಮಾತು
ದರ್ಶನ್ ಅವರು ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಬೇಕಿದೆ. ಸದ್ಯ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಶೀಘ್ರವೇ ಆರಂಭ ಆಗಬೇಕಿದೆ. ಈ ಚಿತ್ರದ ಬಳಿಕ ಪ್ರೇಮ್ ಜೊತೆಯೂ ದರ್ಶನ್ ಸಿನಿಮಾ ಮಾಡುತ್ತಿದ್ದಾರೆ. ಸೂರಪ್ಪ ಬಾಬು ಜೊತೆ ದರ್ಶನ್ ಸಿನಿಮಾ ಮಾಡಬೇಕಿತ್ತು. ಆದರೆ, ಅದು ಸಾಧ್ಯ ಆಗುತ್ತಿಲ್ಲ ಎಂದು ಅವರು ಹೇಳಿ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.