ರೇಣುಕಾ ಸ್ವಾಮಿ ಕೊಲೆಯಿಂದ ಇಲ್ಲಿಯವರೆಗೆ; ಏನೆಲ್ಲ ಆಯ್ತು ಎಂಬುದರ ವಿವರ ಇಲ್ಲಿದೆ

ದರ್ಶನ್ ಆಪ್ತೆ ಪವಿತ್ರಾ ಗೌಡ ಅವರಿಗೆ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪ ರೇಣುಕಾಸ್ವಾಮಿ ಮೇಲೆ ಇದೆ. ಇದು ದರ್ಶನ್ ಗಮನಕ್ಕೂ ಬಂದಿದೆ. ಆ ಬಳಿಕ ಪ್ಲ್ಯಾನ್ ಮಾಡಿ ಅವರನ್ನು ಬೆಂಗಳೂರಿಗೆ ಕರೆಸಿಕೊಳ್ಳಲಾಯಿತು. ಜೂನ್ 8ರಂದು ರೇಣುಕಾ ಸ್ವಾಮಿ ಕೊಲೆ ನಡೆಯಿತು.

ರೇಣುಕಾ ಸ್ವಾಮಿ ಕೊಲೆಯಿಂದ ಇಲ್ಲಿಯವರೆಗೆ; ಏನೆಲ್ಲ ಆಯ್ತು ಎಂಬುದರ ವಿವರ ಇಲ್ಲಿದೆ

Updated on: Oct 30, 2024 | 10:52 AM

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ದರ್ಶನ್​​ಗೆ ಕೋರ್ಟ್ ಆರು ವಾರ ಜಾಮೀನು ಮಂಜೂರು ಮಾಡಿದೆ. ಅವರಿಗೆ ಕೋರ್ಟ್ ಅನೇಕ ಷರತ್ತುಗಳನ್ನು ಕೂಡ ಹಾಕಿದೆ. ಅವರ ಕೊಲೆ ಪ್ರಕರಣದಿಂದ ಇಲ್ಲಿಯವರೆಗೆ ಏನೆಲ್ಲ ಆಯ್ತು ಎಂಬ ವಿವರ ಇಲ್ಲಿದೆ.

ದರ್ಶನ್ ಆಪ್ತೆ ಪವಿತ್ರಾ ಗೌಡ ಅವರಿಗೆ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪ ರೇಣುಕಾಸ್ವಾಮಿ ಮೇಲೆ ಇದೆ. ಇದು ದರ್ಶನ್ ಗಮನಕ್ಕೂ ಬಂದಿದೆ. ಆ ಬಳಿಕ ಪ್ಲ್ಯಾನ್ ಮಾಡಿ ಅವರನ್ನು ಬೆಂಗಳೂರಿಗೆ ಕರೆಸಿಕೊಳ್ಳಲಾಯಿತು. ಜೂನ್ 8ರಂದು ರೇಣುಕಾ ಸ್ವಾಮಿ ಕೊಲೆ ನಡೆಯಿತು. ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್​​ನಲ್ಲಿ ರೇಣುಕಾಸ್ವಾಮಿ ಹತ್ಯೆ ನಡೆಯಿತು. ಈ ಹತ್ಯೆಯ ಬಳಿಕ ದರ್ಶನ್​ ಗ್ಯಾಂಗ್​ನ ಕೆಲವರು ತಾವೇ ಹಣದ ವಿಚಾರಕ್ಕೆ ಕಿರಿಕ್ ಆಗಿದ್ದಾಗಿ ಒಪ್ಪಿಕೊಂಡು ಶರಣಾದರು. ಇದರ ಬೆನ್ನು ಹತ್ತಿದ ಪೊಲೀಸರಿಗೆ ದರ್ಶನ್ ಈ ಪ್ರಕರಣದಲ್ಲಿ ಇರುವ ವಿಚಾರ ಗೊತ್ತಾಗಿತ್ತು.

ಜೂನ್ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಮೈಸೂರಿನ ಹೋಟೆಲ್​ನಲ್ಲಿ ಬಂಧಿಸಿ ಅವರನ್ನು ಬೆಂಗಳೂರಿಗೆ ಕರೆತರಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿ ಒಟ್ಟೂ 17 ಜನರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ದರ್ಶನ್ ಅವರು ಎ2 ಆರೋಪಿ ಆದರೆ, ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡಿದ್ದಾರೆ. ದರ್ಶನ್ ಅವರನ್ನು ಕೆಲವು ದಿನಗಳ ಕಾಲ ವಿಚಾರಣೆ ನಡೆಸಿ ನಂತರ ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು.

ವಿಚಾರಣೆ ವೇಳೆ ದರ್ಶನ್ ಅವರು ರೇಣುಕಾ ಸ್ವಾಮಿಗೆ ಒದ್ದ ವಿಚಾರಗಳನ್ನು ಒಪ್ಪಿಕೊಂಡಿರುವುದು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖ ಆಗಿದೆ. ದರ್ಶನ್ ಅವರನ್ನು ಆರಂಭದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇಡಲಾಗಿತ್ತು. ಆ ಬಳಿಕ ಅವರು ಅಲ್ಲಿ ಐಷಾರಾಮಿ ಸವಲತ್ತು ಪಡೆದ ಆರೋಪದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆದರು.

ಇದನ್ನೂ ಓದಿ: ದರ್ಶನ್​ಗೆ ದೀಪಾವಳಿ ಉಡುಗೊರೆ: ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು

ಚಾರ್ಜ್​ಶೀಟ್ ಸಲ್ಲಿಕೆ ಆದ ಬಳಿಕ ದರ್ಶನ್ ಅವರು ಜಾಮೀನು ಕೋರಿ ಕೆಳ ಹಂತದ ಕೋರ್ಟ್​ನ ಮೊರೆ ಹೋಗಿದ್ದರು. ಆದರೆ, ಅಲ್ಲಿ ಜಾಮೀನು ಸಿಕ್ಕಿರಲಿಲ್ಲ. ಆ ಬಳಿಕ ದರ್ಶನ್ ಹೈಕೋರ್ಟ್ ಮೊರೆ ಹೋದರು. ತಮ್ಮ ಬೆನ್ನು ನೋವಿನ ಕಾರಣ ನೀಡಿ ದರ್ಶನ್ ಅವರು ಹೈಕೋರ್ಟ್​ನಲ್ಲಿ ಜಾಮೀನಿಗೆ ಮನವಿ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:46 am, Wed, 30 October 24

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us