AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆಯಾದ ರೇಣುಕಾಸ್ವಾಮಿ ಕೂಡ ದರ್ಶನ್ ಅಭಿಮಾನಿ? ದರ್ಶನ್-ವಿಜಯಲಕ್ಷ್ಮಿ ಮಧ್ಯೆ ಪವಿತ್ರಾ ಬಂದಿದ್ದಕ್ಕೆ ಇತ್ತು ಕೋಪ?

ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯ ನಿವಾಸಿ. ಅವರು ಅಪೊಲೋ ಮೆಡಿಕಲ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ (ಜೂನ್ 8) ಮನೆಯಿಂದ ಹೊರಟವರು ವಾಪಸ್ ಬಂದಿಲ್ಲ. ಈ ಬಗ್ಗೆ ಕುಟುಂಬದವರಿಗೆ ಆತಂಕ ಎದುರಾಗಿತ್ತು. ಆ ಬಳಿಕ ರೇಣುಕಾಸ್ವಾಮಿ ಶವವಾಗಿ ಪತ್ತೆ ಆಗಿರುವುದಾಗಿ ಕುಟುಂಬದವರಿಗೆ ಪೊಲೀಸರ ಮಾಹಿತಿ ನೀಡಿದರು.

ಕೊಲೆಯಾದ ರೇಣುಕಾಸ್ವಾಮಿ ಕೂಡ ದರ್ಶನ್ ಅಭಿಮಾನಿ? ದರ್ಶನ್-ವಿಜಯಲಕ್ಷ್ಮಿ ಮಧ್ಯೆ ಪವಿತ್ರಾ ಬಂದಿದ್ದಕ್ಕೆ ಇತ್ತು ಕೋಪ?
ಕೊಲೆಯಾದ ರೇಣುಕಾಸ್ವಾಮಿ ಕೂಡ ದರ್ಶನ್ ಅಭಿಮಾನಿ? ದರ್ಶನ್-ವಿಜಯಲಕ್ಷ್ಮಿ ಮಧ್ಯೆ ಪವಿತ್ರಾ ಬಂದಿದ್ದಕ್ಕೆ ಇತ್ತು ಕೋಪ?
ರಾಜೇಶ್ ದುಗ್ಗುಮನೆ
|

Updated on:Jun 11, 2024 | 11:50 AM

Share

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅವರು ಬಂಧನಕ್ಕೆ ಒಳಗಾಗಿದ್ದಾರೆ. ಕೊಲೆ ಕೇಸ್​ನಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ಮೈಸೂರಿನ ರ‍್ಯಾಡಿಸನ್ ಹೋಟೆಲ್​ನಲ್ಲಿ ಈ ಬಂಧನ ನಡೆದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ದರ್ಶನ್​ಗೂ ನಂಟಿದೆ ಎನ್ನಲಾಗಿದೆ. ಅಷ್ಟಕ್ಕೂ ಯಾರು ಈ ರೇಣುಕಾಸ್ವಾಮಿ? ಅವರಿಗೂ ಪವಿತ್ರಾ ಗೌಡಗೂ ಏನು ಸಂಬಂಧ ಎನ್ನುವ ಪ್ರಶ್ನೆಗೆ ಈ ಸ್ಟೋರಿಯಲ್ಲಿದೆ ಉತ್ತರ.

ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯ ನಿವಾಸಿ. ಅವರು ಅಪೊಲೋ ಮೆಡಿಕಲ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ (ಜೂನ್ 8) ಮನೆಯಿಂದ ಹೊರಟವರು ವಾಪಸ್ ಬಂದಿಲ್ಲ. ಈ ಬಗ್ಗೆ ಕುಟುಂಬದವರಿಗೆ ಆತಂಕ ಎದುರಾಗಿತ್ತು. ಆ ಬಳಿಕ ರೇಣುಕಾಸ್ವಾಮಿ ಶವವಾಗಿ ಪತ್ತೆ ಆಗಿರುವುದಾಗಿ ಕುಟುಂಬದವರಿಗೆ ಪೊಲೀಸರು ಮಾಹಿತಿ ನೀಡಿದರು.

ಜೂನ್ 9ರಂದು ಸುಮನಹಳ್ಳಿಯ ಸತ್ವ ಅನುಗ್ರಹ ಅಪಾರ್ಟ್​ಮೆಂಟ್​​ ಸಮೀಪದ ಮೋರಿಯಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿದೆ. ಅನುಗ್ರಹದ ಸೆಕ್ಯೂರಿಟಿ ಆಫೀಸರ್ ಕೇವಲ್​ ರಾಮ್ ದೋರ್​​ ಜೀ ಅವರು ಪೊಲೀಸರಿಗೆ ಕರೆ ಮಾಡಿ, ‘ಮೋರಿಯ ಮುಂದೆ 30-35 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ’ ಎಂದು ಮಾಹಿತಿ ನೀಡಿದ್ದರು. ಅಪರಿಚಿತ ಶವ ಪ್ರಕರಣವನ್ನು ತನಿಖೆ ಮಾಡಿದ ಪೊಲೀಸರಿಗೆ ಬಿಗ್​ ಲೀಡ್ ಸಿಕ್ಕಿತ್ತು.

ಶವ ಪತ್ತೆ ವೇಳೆ ಮುಖ,ತಲೆಗೆ ಹಾಗೂ ಕಿವಿಗೆ ಗಾಯವಾಗಿರುವು ಕಂಡು ಬಂದಿದೆ. ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಕೆಲವರನ್ನು ಬಂಧಿಸಿದ್ದರು. ಅವರು ನಟ ದರ್ಶನ್ ಸೂಚನೆ ಮೇರೆಗೆ ಕೊಲೆ ಮಾಡಿದ್ದೇವೆ ಎಂದು ತಪ್ಪೊಪ್ಪಿಕೊಂಡಿದ್ದರು.

ಇದನ್ನೂ ಓದಿ:  ನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸರ ವಶಕ್ಕೆ

ರೇಣುಕಾಸ್ವಾಮಿ ಮಾಡಿದ ತಪ್ಪೇನು?

ಪವಿತ್ರಾಗೌಡ ಅವರಿಗೆ ರೇಣುಕಾಸ್ವಾಮಿ ಕೆಟ್ಟಾದಾಗಿ ಮೆಸೇಜ್ ಮಾಡಿದ್ದರು ಎನ್ನಲಾಗಿದೆ. ಅಶ್ಲೀಲ ಮೇಸೆಜ್, ಫೋಟೋ ಹಾಕಿ ಕಿರುಕುಳ ನೀಡಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಇನ್ನೂ ಕೆಲವರು ಸೇರಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿ, ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ದರ್ಶನ್ ಅಭಿಮಾನಿ

ಕೊಲೆಯಾದ ರೇಣುಕಾಸ್ವಾಮಿ ದರ್ಶನ್ ಅಭಿಮಾನಿ ಆಗಿದ್ದ ಎನ್ನುವ ಮಾಹಿತಿ ಇದೆ.  ದರ್ಶನ್, ವಿಜಯಲಕ್ಷ್ಮೀ ಸಂಸಾರ ಬಗ್ಗೆ ಯೋಚನೆ ಮಾಡ್ತಿದ್ದ ಸ್ವಾಮಿ. ದಂಪತಿ ಸಂಸಾರದಲ್ಲಿ ಪವಿತ್ರಾಗೌಡ ಬರುತ್ತಿದ್ದಾರೆಂದು ತಿಳಿದು  ಅವರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:39 am, Tue, 11 June 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ