ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅವರು ಬಂಧನಕ್ಕೆ ಒಳಗಾಗಿದ್ದಾರೆ. ಕೊಲೆ ಕೇಸ್ನಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ಮೈಸೂರಿನ ರ‍್ಯಾಡಿಸನ್ ಹೋಟೆಲ್ನಲ್ಲಿ ಈ ಬಂಧನ ನಡೆದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ದರ್ಶನ್ಗೂ ನಂಟಿದೆ ಎನ್ನಲಾಗಿದೆ. ಅಷ್ಟಕ್ಕೂ ಯಾರು ಈ ರೇಣುಕಾಸ್ವಾಮಿ? ಅವರಿಗೂ ಪವಿತ್ರಾ ಗೌಡಗೂ ಏನು ಸಂಬಂಧ ಎನ್ನುವ ಪ್ರಶ್ನೆಗೆ ಈ ಸ್ಟೋರಿಯಲ್ಲಿದೆ ಉತ್ತರ.
ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯ ನಿವಾಸಿ. ಅವರು ಅಪೊಲೋ ಮೆಡಿಕಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ (ಜೂನ್ 8) ಮನೆಯಿಂದ ಹೊರಟವರು ವಾಪಸ್ ಬಂದಿಲ್ಲ. ಈ ಬಗ್ಗೆ ಕುಟುಂಬದವರಿಗೆ ಆತಂಕ ಎದುರಾಗಿತ್ತು. ಆ ಬಳಿಕ ರೇಣುಕಾಸ್ವಾಮಿ ಶವವಾಗಿ ಪತ್ತೆ ಆಗಿರುವುದಾಗಿ ಕುಟುಂಬದವರಿಗೆ ಪೊಲೀಸರು ಮಾಹಿತಿ ನೀಡಿದರು.
ಜೂನ್ 9ರಂದು ಸುಮನಹಳ್ಳಿಯ ಸತ್ವ ಅನುಗ್ರಹ ಅಪಾರ್ಟ್ಮೆಂಟ್ ಸಮೀಪದ ಮೋರಿಯಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿದೆ. ಅನುಗ್ರಹದ ಸೆಕ್ಯೂರಿಟಿ ಆಫೀಸರ್ ಕೇವಲ್ ರಾಮ್ ದೋರ್ ಜೀ ಅವರು ಪೊಲೀಸರಿಗೆ ಕರೆ ಮಾಡಿ, ‘ಮೋರಿಯ ಮುಂದೆ 30-35 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ’ ಎಂದು ಮಾಹಿತಿ ನೀಡಿದ್ದರು. ಅಪರಿಚಿತ ಶವ ಪ್ರಕರಣವನ್ನು ತನಿಖೆ ಮಾಡಿದ ಪೊಲೀಸರಿಗೆ ಬಿಗ್ ಲೀಡ್ ಸಿಕ್ಕಿತ್ತು.
ಶವ ಪತ್ತೆ ವೇಳೆ ಮುಖ,ತಲೆಗೆ ಹಾಗೂ ಕಿವಿಗೆ ಗಾಯವಾಗಿರುವು ಕಂಡು ಬಂದಿದೆ. ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಕೆಲವರನ್ನು ಬಂಧಿಸಿದ್ದರು. ಅವರು ನಟ ದರ್ಶನ್ ಸೂಚನೆ ಮೇರೆಗೆ ಕೊಲೆ ಮಾಡಿದ್ದೇವೆ ಎಂದು ತಪ್ಪೊಪ್ಪಿಕೊಂಡಿದ್ದರು.
ಇದನ್ನೂ ಓದಿ: ನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸರ ವಶಕ್ಕೆ
ಪವಿತ್ರಾಗೌಡ ಅವರಿಗೆ ರೇಣುಕಾಸ್ವಾಮಿ ಕೆಟ್ಟಾದಾಗಿ ಮೆಸೇಜ್ ಮಾಡಿದ್ದರು ಎನ್ನಲಾಗಿದೆ. ಅಶ್ಲೀಲ ಮೇಸೆಜ್, ಫೋಟೋ ಹಾಕಿ ಕಿರುಕುಳ ನೀಡಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಇನ್ನೂ ಕೆಲವರು ಸೇರಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿ, ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಕೊಲೆಯಾದ ರೇಣುಕಾಸ್ವಾಮಿ ದರ್ಶನ್ ಅಭಿಮಾನಿ ಆಗಿದ್ದ ಎನ್ನುವ ಮಾಹಿತಿ ಇದೆ. ದರ್ಶನ್, ವಿಜಯಲಕ್ಷ್ಮೀ ಸಂಸಾರ ಬಗ್ಗೆ ಯೋಚನೆ ಮಾಡ್ತಿದ್ದ ಸ್ವಾಮಿ. ದಂಪತಿ ಸಂಸಾರದಲ್ಲಿ ಪವಿತ್ರಾಗೌಡ ಬರುತ್ತಿದ್ದಾರೆಂದು ತಿಳಿದು ಅವರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ಎನ್ನಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 11:39 am, Tue, 11 June 24