AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಆರೋಪದಲ್ಲಿ ದರ್ಶನ್​ಗೆ ಜೈಲು, ನಿರ್ಮಾಪಕರು ಆತಂಕದಲ್ಲಿ

ನಟ ದರ್ಶನ್ ತೂಗುದೀಪ, ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ದರ್ಶನ್ ಎಷ್ಟು ದಿನ ಜೈಲಿನಲ್ಲಿರಬೇಕಾಗುತ್ತದೆ ಎಂಬ ಅಂದಾಜಿಲ್ಲ. ಇದು ಕೆಲವು ನಿರ್ಮಾಪಕರಿಗೆ ಆತಂಕ ತಂದಿದೆ.

ಕೊಲೆ ಆರೋಪದಲ್ಲಿ ದರ್ಶನ್​ಗೆ ಜೈಲು, ನಿರ್ಮಾಪಕರು ಆತಂಕದಲ್ಲಿ
ಮಂಜುನಾಥ ಸಿ.
|

Updated on: Jun 12, 2024 | 10:18 AM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಆರೋಪದಲ್ಲಿ ದರ್ಶನ್ (Darshan)​ ಬಂಧನವಾಗಿದೆ. ದರ್ಶನ್ ವಿರುದ್ಧ ಪೊಲೀಸರು ಕಲೆಹಾಕಿರುವ ಸಾಕ್ಷ್ಯಗಳನ್ನು ಪರಿಶೀಲಿಸಿದರೆ ದರ್ಶನ್​ಗೆ ಸುಲಭಕ್ಕೆ ಜಾಮೀನು ಸಿಗುವುದು ಅನುಮಾನ. ಅಲ್ಲದೆ ಪ್ರಕರಣದಲ್ಲಿ ದರ್ಶನ್​ಗೆ ಶಿಕ್ಷೆ ಆಗುವ ಸಾಧ್ಯತೆಯೂ ಹೆಚ್ಚಿಗಿದೆ. ದರ್ಶನ್ ಅಭಿಮಾನಿಗಳು ಸಹಜವಾಗಿಯೇ ಆತಂಕದಲ್ಲಿದ್ದಾರೆ. ಆದರೆ ಕೆಲವು ಸಿನಿಮಾ ನಿರ್ಮಾಪಕರು ಸಹ ಈ ಪ್ರಕರಣದಿಂದಾಗಿ ತೀವ್ರ ಆತಂಕದಲ್ಲಿದ್ದಾರೆ.

ದರ್ಶನ್ ಕನ್ನಡ ಚಿತ್ರರಂಗದ ಸ್ಟಾರ್ ನಟರಲ್ಲಿ ಒಬ್ಬರು. ಅವರನ್ನು ನಂಬಿ ಕೋಟ್ಯಂತರ ರೂಪಾಯಿ ಬಂಡವಾಳವನ್ನು ಸಿನಿಮಾ ನಿರ್ಮಾಪಕರು ಹಾಕಿದ್ದಾರೆ. ಈಗ ದರ್ಶನ್ ಜೈಲು ಪಾಲಾಗಿದ್ದರಿಂದ ನಿರ್ಮಾಪಕರು ಆತಂಕಕ್ಕೆ ಒಳಗಾಗಿದ್ದಾರೆ. ದರ್ಶನ್ ಪ್ರಸ್ತುತ ‘ಡೆವಿಲ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಈ ಸಿನಿಮಾದ ಚಿತ್ರೀಕರಣ ಅರ್ಧ ಮುಗಿದಿದೆ. ಈ ಮಧ್ಯೆ ದರ್ಶನ್ ಬಂಧನವಾಗಿದ್ದು, ಪಾಪ ‘ಡೆವಿಲ್’ ನಿರ್ಮಾಪಕರಿಗೆ ದಿಕ್ಕು ತೋಚದಂತಾಗಿದೆ.

‘ಡೆವಿಲ್’ ಸಿನಿಮಾದ ಬಳಿಕ ಪ್ರೇಮ್ ನಿರ್ದೇಶನದ ಸಿನಿಮಾದಲ್ಲಿ ದರ್ಶನ್ ನಟಿಸಬೇಕಿತ್ತು. ಆ ಸಿನಿಮಾಕ್ಕೆ ಕೆವಿಎನ್ ಬಂಡವಾಳ ಹೂಡುವ ನಿರೀಕ್ಷೆ ಇತ್ತು. ಆ ಸಿನಿಮಾಕ್ಕಾಗಿ ಪ್ರೇಮ್ ಈಗಾಗಲೇ ಸಿದ್ಧತೆ ಆರಂಭಿಸಿದ್ದರು. ಆದರೆ ಈಗ ಅದೂ ಸಹ ತಟಸ್ಥವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:ದರ್ಶನ್ ಫೋಟೋ ಹಿಡಿದು ಪೊಲೀಸ್​ ಠಾಣೆ ಎದುರು ಕಾದು ಕುಳಿತ ಅಭಿಮಾನಿ; ಫ್ಯಾನ್ಸ್​ಗೆ ಬುದ್ಧಿ ಹೇಳೋದ್ಯಾರು?

ಇನ್ನು ನಿರ್ಮಾಪಕ ಸೂರಪ್ಪ ಬಾಬು ಜೊತೆಗೂ ಒಂದು ಸಿನಿಮಾಕ್ಕಾಗಿ ದರ್ಶನ್ ಎಸ್ ಹೇಳಿದ್ದರು. ಸೂರಪ್ಪ ಬಾಬು ಸಹ ದರ್ಶನ್ ಜೊತೆ ಸಿನಿಮಾ ಮಾಡಲು ಹಣಕಾಸಿನ ಹೊಂದಾಣಿಕೆಯಲ್ಲಿ ತೊಡಗಿದ್ದರು ಎನ್ನಲಾಗುತ್ತಿದೆ. ಈಗ ಈ ಸಿನಿಮಾ ಸಹ ಬಂದ್ ಆಗಲಿದೆ.

ಅದಾದ ಬಳಿಕ ‘ಕಾಟೇರ’ ಸಿನಿಮಾದ ತಂಡದೊಂದಿಗೆ ಮತ್ತೊಂದು ಸಿನಿಮಾ ಮಾಡಲಿದ್ದರು ದರ್ಶನ್. ರಾಕ್​ಲೈನ್ ನಿರ್ಮಾಣ, ತರುಣ್ ಸುಧೀರ್ ನಿರ್ದೇಶನದಲ್ಲಿ ಹೊಸ ಸಿನಿಮಾವನ್ನು ದರ್ಶನ್ ಕೈಗೆತ್ತಿಕೊಳ್ಳಲಿದ್ದರು. ಆದರೆ ಈ ಸಿನಿಮಾದ ಯಾವುದೇ ಕೆಲಸಗಳು ಪ್ರಾರಂಭವಾಗಿರಲಿಲ್ಲ. ಆದರೆ ಈ ಸಿನಿಮಾ ಇನ್ನಷ್ಟು ತಡವಾಗುವುದು ಖಾಯಂ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ