ದರ್ಶನ್​ಗೆ ಮಿತಿಮೀರಿದ ಬೆನ್ನು ನೋವು; ನಿಲ್ಲೋಕೂ ಆಗ್ತಿಲ್ಲ, ಕೂರೋಕು ಆಗ್ತಿಲ್ಲ

ಕೋರ್ಟ್​ನಲ್ಲಿ ದರ್ಶನ್ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ಎಲ್ಲಾ ಸಾಕ್ಷಿಗಳನ್ನು ಸೃಷ್ಟಿ ಮಾಡಲಾಗಿದೆ ಎನ್ನುವ ಆರೋಪವನ್ನು ಮಾಡುತ್ತಿದ್ದಾರೆ. ಕಲೆ ಹಾಕಿರುವ ಸಾಕ್ಷಿಗಳನ್ನು ಸೃಷ್ಟಿ ಮಾಡಲಾಗಿದೆ ಈ ಮೂಲಕ ದರ್ಶನ್​ನ ಸಿಕ್ಕಿಸುವ ಪ್ರಯತ್ನ ನಡೆದಿದೆ ಎಂದು ಅವರು ಆರೋಪ ಮಾಡಿದ್ದಾರೆ.

ದರ್ಶನ್​ಗೆ ಮಿತಿಮೀರಿದ ಬೆನ್ನು ನೋವು; ನಿಲ್ಲೋಕೂ ಆಗ್ತಿಲ್ಲ, ಕೂರೋಕು ಆಗ್ತಿಲ್ಲ
Darshan
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ರಾಜೇಶ್ ದುಗ್ಗುಮನೆ

Updated on: Oct 05, 2024 | 11:19 AM

ಕೊಲೆ ಕೇಸ್​ನಲ್ಲಿ ಬಳ್ಳಾರಿ ಸೆಂಟ್ರಲ್​ ಜೈಲು ಪಾಲಾಗಿರುವ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಿದೆ. ಒಂದು ಕಡೆ ಅವರು ಜಾಮೀನಿಗಾಗಿ ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಬೆನ್ನುನೋವಿನ ಸಮಸ್ಯೆಯಿಂದ ರಾತ್ರಿ ನಿದ್ದೆ ಮಾಡದೆ ಒದ್ದಾಡಿದ್ದಾರೆ. ಅವರಿಗೆ ಕುಳಿತುಕೊಳ್ಳಲು ಹಾಗೂ ನಿಲ್ಲಲು ಆಗದ ಸ್ಥಿತಿ ಬಂದಿದೆ. ಪೇನ್‌ಕ್ಯೂಲರ್ ಟ್ಯಾಬ್ಲೆಟ್ ನುಂಗಿದರೂ ನೋವು ಕಡಿಮೆಯಾಗುತ್ತಿಲ್ಲ. ಮುಂದೇನು ಎನ್ನುವ ಪ್ರಶ್ನೆ ಅವರನ್ನು ಕಾಡಿದೆ.

ಬೆನ್ನು ನೋವಿಗೆ ದರ್ಶನ್ ಸರ್ಜರಿಗೆ ಒಳಗಾಗಲೇ ಬೇಕಿದೆ. ಸರ್ಜರಿ ಮಾಡಿಸದಿದ್ದರೆ ಕಷ್ಟ ಎಂದು ವೈದ್ಯರು ಹೇಳುತ್ತಿದ್ದಾರೆ. ಆದರೆ, ದರ್ಶನ್ ಬಳ್ಳಾರಿಯಲ್ಲಿ ಸರ್ಜರಿಗೆ ರೆಡಿ ಇಲ್ಲ. ಬೆಂಗಳೂರಿನಲ್ಲಿಯೇ ಚಿಕಿತ್ಸೆ ಪಡೆಯುತ್ತೇನೆ ಎಂದು ಹಠ ಹಿಡಿದ್ದಾರೆ. ಇಂದು ವೈದ್ಯರು ಮತ್ತೆ ದರ್ಶನ್​ ಆರೋಗ್ಯ ತಪಾಸಣೆ ಮಾಡಲಿದ್ದಾರೆ.

ಸದ್ಯ ಬೆನ್ನು ನೋವಿಗೆ ಸ್ಕ್ಯಾನಿಂಗ್ ಹಾಗೂ ಸರ್ಜರಿ ಮಾಡಿಸಲು ಎ2 ದರ್ಶನ್ ನಿರಾಕರಿಸಿದ್ದಾರೆ. ದರ್ಶನ್ ಹೇಳಿಕೆಯನ್ನು ಜೈಲಧಿಕಾರಿಗಳು ರೆಕಾರ್ಡ್ ಮಾಡಿದ್ದಾರೆ. ಏನಾದರೂ ಹೆಚ್ಚು ಕಡಿಮೆ ಆದರೆ ತಮ್ಮ ಮೇಲೆ ಬರಬಾರದು ಎನ್ನುವ ಕಾರಣಕ್ಕೆ ಜೈಲು ಅಧಿಕಾರಿಗಳ ಈ ರೀತಿ ಮಾಡಿದ್ದಾರೆ. ದರ್ಶನ್ ಒಪ್ಪಿದರೆ ವಿಮ್ಸ್​ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಲು ಸಿದ್ಧತೆ ನಡೆದಿದೆ.

ಕೋರ್ಟ್​ನಲ್ಲಿ ದರ್ಶನ್ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ಎಲ್ಲಾ ಸಾಕ್ಷಿಗಳನ್ನು ಸೃಷ್ಟಿ ಮಾಡಲಾಗಿದೆ ಎನ್ನುವ ಆರೋಪವನ್ನು ಮಾಡುತ್ತಿದ್ದಾರೆ. ಕಲೆ ಹಾಕಿರುವ ಸಾಕ್ಷಿಗಳನ್ನು ಸೃಷ್ಟಿ ಮಾಡಲಾಗಿದೆ ಈ ಮೂಲಕ ದರ್ಶನ್​ನ ಸಿಕ್ಕಿಸುವ ಪ್ರಯತ್ನ ನಡೆದಿದೆ ಎಂದು ಅವರು ಆರೋಪ ಮಾಡಿದ್ದಾರೆ.

ದರ್ಶನ್ ಅವರ ಆರೋಗ್ಯ ಸಮಸ್ಯೆ ದಿನಕಳೆದಂತೆ ಹೆಚ್ಚುತ್ತಿದೆ. ಇದನ್ನು ಅವರ ಪರ ವಕೀಲರು ಕೋರ್ಟ್​ ಮುಂದೆ ಇಡೋ ಸಾಧ್ಯತೆ ಇದೆ. ಇದನ್ನು ಆಧರಿಸಿ ಜಾಮೀನು ನೀಡುವಂತೆ ಅವರು ಬೇಡಿಕೆ ಇಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ದರ್ಶನ್​ಗೆ ವಿಪರೀತ ಬೆನ್ನು ನೋವು; ತಪಾಸಣೆ ಮಾಡಲು ಬಳ್ಳಾರಿ ಜೈಲಿಗೆ ವೈದ್ಯರ ಎಂಟ್ರಿ

ದರ್ಶನ್ ಅವರು ಬೆಂಗಳೂರು ಜೈಲಿನಲ್ಲಿ ಹಾಯಾಗಿ ಇದ್ದರು. ಬೇಕಾದ ವ್ಯವಸ್ಥೆಗಳು ಸಿಗುತ್ತಿದ್ದವು. ಆದರೆ, ಬಳ್ಳಾರಿ ಜೈಲಿನಲ್ಲಿ ಅವರ ಪರಿಸ್ಥಿತಿ ಹದಗೆಟ್ಟಿದೆ. ಅವರು ಪ್ರತಿ ವಿಚಾರಕ್ಕೂ ಕೋರ್ಟ್ ಮೊರೆ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಅವರು ಟಿವಿಗಾಗಿ ಬೇಡಿಕೆ ಇಟ್ಟಿದ್ದರು. ಹಲವು ದಿನಗಳ ಬಳಿಕ ಟಿವಿ ಸಿಕ್ಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್