ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

|

Updated on: Oct 05, 2024 | 5:53 PM

ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ ತೂಗುದೀಪ ಜಾಮೀನು ಅರ್ಜಿ ವಿಚಾರಣೆ ಇಂದೂ ಸಹ ಮುಂದುವರೆಯಿತು. ವಕೀಲ ಸಿವಿ ನಾಗೇಶ್ ಇಂದೂ ಸಹ ಸುದೀರ್ಘವಾಗಿ ವಾದ ಮಂಡನೆ ಮಾಡಿದರು.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ
ದರ್ಶನ್​
Follow us on

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಕಳೆದೊಂದು ವಾರಗಳಿಂದಲೂ ನಡೆಯುತ್ತಿದೆ. ನಿನ್ನೆ (ಅಕ್ಟೋಬರ್ 04) ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ನಿನ್ನೆ ಸುದೀರ್ಘವಾಗಿ ವಾದ ಮಂಡನೆ ಮಾಡಿದ್ದರು. ಸಮಯದ ಅಭಾವದಿಂದ ಇಂದಿಗೆ (ಅಕ್ಟೋಬರ್ 05) ಮುಂದೂಡಲಾಗಿತ್ತು. ಇಂದು 12:30ಗೆ ಆರಂಭವಾದ ಸಿವಿ ನಾಗೇಶ್ ಅವರ ವಾದ ಸಂಜೆ ವರೆಗೂ ನಡೆಯಿತು. ವಾದವನ್ನೆಲ್ಲ ಆಲಿಸಿದ ನ್ಯಾಯಾಧೀಶರು, ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 08ಕ್ಕೆ ಮುಂದೂಡಿದರು.

ನಿನ್ನೆಯ ವಾದ ಮಂಡಿಸಿದ್ದ ಸಿವಿ ನಾಗೇಶ್ ಆರೋಪ ಪಟ್ಟಿಯಲ್ಲಿರುವ ವೈರುಧ್ಯಗಳ ಬಗ್ಗೆ ನ್ಯಾಯಾಲಯದ ಗಮನ ಸೆಳೆದರು. ಪೊಲೀಸರು ತನಿಖೆಯನ್ನು ಸರಿಯಾಗಿ ನಡೆಸಿಲ್ಲ ಎಂದು ಹೇಳಿ ಕೆಲವು ಉದಾಹರಣೆಗಳನ್ನು ನೀಡಿದರು. ಇಂದಿನ ವಾದದಲ್ಲಿ ಸಾಕ್ಷ್ಯಗಳು, ಸಾಕ್ಷಿಗಳ ಹೇಳಿಕೆ, ಮರಣೋತ್ತರ ಪರೀಕ್ಷಾ ವರದಿ, ಇತರೆ ಕೆಲವು ವರದಿಗಳನ್ನು ಗುರಿಯಾಗಿಸಿಕೊಂಡು ಸುದೀರ್ಘವಾಗಿ ವಾದ ಮಂಡಿಸಿದರು.

ಇದನ್ನೂ ಓದಿ:ದರ್ಶನ್ ಮನೆಯಲ್ಲಿ ರಿಕವರಿ ಮಾಡಿದ ಹಣದ ಮೂಲ ಬಿಚ್ಚಿಟ್ಟ ವಕೀಲ ನಾಗೇಶ್

ಸಿವಿ ನಾಗೇಶ್ ಅವರ ಸುದೀರ್ಘ ವಾದ ಆಲಿಸಿದ ನ್ಯಾಯಾಧೀಶರು, ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 08 ಅಂದರೆ ಮಂಗಳವಾರಕ್ಕೆ ಮುಂದೂಡಲಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ಸಹ ಅಕ್ಟೋಬರ್ 8 ಕ್ಕೆ ಮುಂದೂಡಲಾಗಿದೆ. ಪವಿತ್ರಾ ಗೌಡ ಪರ ವಕೀಲರು ಈ ವರೆಗೆ ತಮ್ಮ ವಾದವನ್ನೇ ಮಂಡನೆ ಮಾಡಲು ಅವರಿಗೆ ಅವಕಾಶ ಸಿಕ್ಕಿಲ್ಲ, ಆದರೆ ಅಕ್ಟೋಬರ್ 08 ರಂದು ಅವರು ವಾದ ಮಂಡಿಸಬಹುದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ