ದರ್ಶನ್ ಅನ್ನು ಪ್ರಕರಣದಲ್ಲಿ ಸಿಕ್ಕಿಸುವ ಯತ್ನ: ವಕೀಲ ಸಿವಿ ನಾಗೇಶ್ ವಾದ

Darshan Thoogudeepa: ದರ್ಶನ್ ತೂಗುದೀಪ ಜಾಮೀನು ಅರ್ಜಿ ವಿಚಾರಣೆ ಇಂದು (ನವೆಂಬರ್ 26) ಕರ್ನಾಟಕ ಹೈಕೋರ್ಟ್​ನಲ್ಲಿ ನಡೆಯಿತು. ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಯಿತು.

ದರ್ಶನ್ ಅನ್ನು ಪ್ರಕರಣದಲ್ಲಿ ಸಿಕ್ಕಿಸುವ ಯತ್ನ: ವಕೀಲ ಸಿವಿ ನಾಗೇಶ್ ವಾದ
(File Photo) ದರ್ಶನ್ ತೂಗುದೀಪ ಮತ್ತು ದಿ. ರೇಣುಕಾಸ್ವಾಮಿ
Follow us
ಮಂಜುನಾಥ ಸಿ.
|

Updated on:Nov 26, 2024 | 5:30 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು (ನವೆಂಬರ್ 26) ಹೈಕೋರ್ಟ್​ನಲ್ಲಿ ನಡೆಯಿತು. ಬೆಳಿಗ್ಗೆ ಆರಂಭವಾದ ವಿಚಾರಣೆ ಕೆಲವು ಗಂಟೆಗಳ ಕಾಲ ಸತತವಾಗಿ ನಡೆಯಿತು. ಇಂದು (ನವೆಂಬರ್ 26) ಬಹುತೇಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ವಾದ ಮಂಡನೆ ಮಾಡಿದರು. ವಾದ ಮಂಡನೆಯಲ್ಲಿ ದರ್ಶನ್ ಕೊಲೆ ಮಾಡಿಲ್ಲವೆಂದು, ರೇಣುಕಾ ಸ್ವಾಮಿಯ ಅಪಹರಣವೇ ಆಗಿಲ್ಲ ಎಂದು ವಾದ ಮಂಡಿಸಿದರು. ಅಲ್ಲದೆ ದರ್ಶನ್ ಅನ್ನು ಸಿಕ್ಕಿಹಾಕಿಸುವ ಪ್ರಯತ್ನ ನಡೆದಿರುವ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದರು. ದಿನದ ಅಂತ್ಯಕ್ಕೆ ಸಮಯದ ಅಭಾವದಿಂದಾಗಿ ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿಕೆ ಮಾಡಲಾಯ್ತು.

ಬೆಳಿಗ್ಗೆ ವಿಚಾರಣೆ ಆರಂಭವಾದಾಗ, ರೇಣುಕಾ ಸ್ವಾಮಿಯದ್ದು ಅಪಹರಣವೇ ಅಲ್ಲ ಎಂದು ಸಿವಿ ನಾಗೇಶ್ ವಾದ ಮಂಡಿಸಿದರು. ರೇಣುಕಾ ಸ್ವಾಮಿಯೇ ಬಾರ್​ನಲ್ಲಿ ಬಿಲ್ ಕಟ್ಟಿದ್ದಾನೆ. ಅಪಹರಣಕ್ಕೆ ಒಳಗಾದ ವ್ಯಕ್ತಿ ಅಪಹರಣ ಮಾಡಿದವರಿಗೆ ಮದ್ಯ ಕೊಡಿಸುತ್ತಾನೆಯೇ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ದರ್ಶನ್ ಹಾಗೂ ಇತರರಿಗೆ ರೇಣುಕಾ ಸ್ವಾಮಿಯ ಕೊಲ್ಲುವ ಉದ್ದೇಶ ಇರಲಿಲ್ಲ ಎಂದು ವಾದಿಸಿದರು. ಆ ಬಳಿಕ ಸಂಜೆ ನಾಲ್ಕು ಗಂಟೆಗೆ ವಿಚಾರಣೆಯನ್ನು ಮುಂದೂಡಲಾಗಿತ್ತು.

ಇದನ್ನೂ ಓದಿ:‘ರೇಣುಕಾಸ್ವಾಮಿ ಅಪಹರಣ ಆಗಿರಲಿಲ್ಲ, ಕೊಲೆ ಮಾಡುವ ಉದ್ದೇಶವೂ ಇರಲಿಲ್ಲ’; ದರ್ಶನ್ ಪರ ವಕೀಲರ ವಾದ

ಸಂಜೆ ನಾಲ್ಕು ಗಂಟೆಗೆ ಮತ್ತೆ ವಾದ ಆರಂಭಿಸಿದ ದರ್ಶನ್ ಪರ ವಕೀಲ ಸಿವಿ ನಾಗೇಶ್, ದರ್ಶನ್​ರಿಂದ ವಶಪಡಿಸಿಕೊಂಡ ಶೂ, ಬಟ್ಟೆಗಳ ಮೇಲೆ ರಕ್ತದ ಕಲೆ ಇತ್ತು ಎಂದು ಹೇಳಲಾಗಿದೆ. ಆದರೆ ದರ್ಶನ್ ಬಟ್ಟೆಗಳನ್ನು ಜೂನ್ 10ರಂದೇ ಸೋಪು ಹಾಕಿ ಒಗೆಯಲಾಗಿತ್ತು, ಹೀಗೆ ಒಗೆದ ಮೇಲೆ ರಕ್ತ ಹೇಗೆ ಬರಲು ಸಾಧ್ಯ, ಶೂ ವಶಪಡಿಸಿಕೊಂಡಾಗ ಅದರ ಮೇಲೆ ರಕ್ತದ ಕಲೆ ಇದ್ದ ಬಗ್ಗೆ ಏನೂ ದಾಖಲಾಗಿಲ್ಲ, ಆದರೆ ಎಫ್​ಎಸ್​ಎಲ್ ವರದಿ ಬಂದ ಬಳಿಕ ರಕ್ತ ಕಲೆ ಇದೆ ಎನ್ನಲಾಗಿದೆ. ಆದರೆ ಮೃತ ರೇಣುಕಾ ಸ್ವಾಮಿಯ ದೇಹದಿಂದ ತೆಗೆದುಕೊಂಡ ಒಂದು ಬಾಟಲಿ ರಕ್ತವನ್ನು ಎಫ್​ಎಸ್​ಎಲ್​ಗೆ ಕಳಿಸಲಾಗಿತ್ತು. ಅಲ್ಲಿ, ರಕ್ತವನ್ನು ಶೂ ಹಾಗೂ ಬಟ್ಟೆಯ ಮೇಲೆ ಹಾಕಿರುವ ಸಾಧ್ಯತೆ ಇದೆ’ ಎಂದರು ನಾಗೇಶ್, ಆ ಮೂಲಕ ಪೊಲೀಸರೇ ದರ್ಶನ್ ಅನ್ನು ಪ್ರಕರಣದಲ್ಲಿ ಸಿಕ್ಕಿಸುವ ಪ್ರಯತ್ನ ಮಾಡಿದ್ದಾರೆ ಎಂಬ ಅನುಮಾನ ವ್ಯಕ್ತಪಡಿಸಿದರು.

ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ದರ್ಶನ್​ಗೆ ಜಾಮೀನು ನಿರಾಕರಿಸಲಾಗಿತ್ತು. ಇದೀಗ ಹೈಕೋರ್ಟ್​ನಲ್ಲಿ ಅರ್ಜಿ ಹಾಕಿ ವಿಚಾರಣೆ ನಡೆಸಲಾಗುತ್ತಿದೆ. ದರ್ಶನ್​ಗೆ ಆರು ವಾರಗಳ ಮಧ್ಯಂತರ ಜಾಮೀನನ್ನು ಹೈಕೋರ್ಟ್ ಈಗಾಗಲೇ ನೀಡಿದ್ದು, ಅನಾರೋಗ್ಯದ ಕಾರಣ ನೀಡಿ ಈ ಆರು ವಾರಗಳ ಮಧ್ಯಂತರ ಜಾಮೀನನ್ನು ದರ್ಶನ್ ಪಡೆದುಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:12 pm, Tue, 26 November 24

ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್
ಕೊಪ್ಪಳದಲ್ಲಿ ಶುರುವಾದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿ
ಕೊಪ್ಪಳದಲ್ಲಿ ಶುರುವಾದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿ
ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!