‘ರೇಣುಕಾಸ್ವಾಮಿ ಅಪಹರಣ ಆಗಿರಲಿಲ್ಲ, ಕೊಲೆ ಮಾಡುವ ಉದ್ದೇಶವೂ ಇರಲಿಲ್ಲ’; ದರ್ಶನ್ ಪರ ವಕೀಲರ ವಾದ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದ ನಟ ದರ್ಶನ್ ಅವರು ಹೈಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದು ಹೊರಕ್ಕೆ ಬಂದಿದ್ದಾರೆ. ಅವರು ಆಸ್ಪತ್ರೆಯಲ್ಲೇ ಇದ್ದು, ಚಿಕಿತ್ಸೆ ಮುಂದುವರಿದಿದೆ. ಇಂದು (ನವೆಂಬರ್ 26) ಹೈಕೋರ್ಟ್​ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದೆ.

‘ರೇಣುಕಾಸ್ವಾಮಿ ಅಪಹರಣ ಆಗಿರಲಿಲ್ಲ, ಕೊಲೆ ಮಾಡುವ ಉದ್ದೇಶವೂ ಇರಲಿಲ್ಲ’; ದರ್ಶನ್ ಪರ ವಕೀಲರ ವಾದ
ದರ್ಶನ್
Follow us
Ramesha M
| Updated By: ರಾಜೇಶ್ ದುಗ್ಗುಮನೆ

Updated on: Nov 26, 2024 | 1:07 PM

ರೇಣುಕಾ ಸ್ವಾಮಿ ಕೊಲೆ ಕೇಸ್​ ಆರೋಪ ಹೊತ್ತಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ಇಂದು (ನವೆಂಬರ್ 26) ನಡೆದಿದೆ. ಕೆಳ ಹಂತದ ಕೋರ್ಟ್​ನಲ್ಲಿ ದರ್ಶನ್ ಜಾಮೀನು ಅರ್ಜಿ ತಿರಸ್ಕಾರ ಗೊಂಡಿತ್ತು. ಈ ಕಾರಣಕ್ಕೆ ದರ್ಶನ್ ಹೈಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿ ವಿಚಾರಣೆ ನಡೆಯುವಾಗ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ತಮ್ಮ ವಾದ ಮುಂದಿಟ್ಟಿದ್ದಾರೆ.

‘ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ ಆರೋಪ ದರ್ಶನ್ ಮೇಲೆ ಇದೆ. ಅಪಾರ್ಟ್​ಮೆಂಟ್ ಕಾವಲುಗಾರ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲು ಮಾಡಿಕೊಳ್ಳಲಾಯಿತು. ಇಲ್ಲಿ ಮೃತದೇಹದ ಮಹಜರು, ಪೋಸ್ಟ್ ಮಾರ್ಟಂ ವಿಳಂಬ ಮಾಡಲಾಗಿದೆ. 1.5X2.5 ಸೆಂ.ಮೀ. ಗಾಯ ಬಿಟ್ಟರೆ ಉಳಿದವು ರಕ್ತಗಾಯಗಳಲ್ಲ’ ಎಂದಿದ್ದಾರೆ ನಾಗೇಶ್.

‘ಶವ ಶೈತ್ಯಾಗಾರದಲ್ಲಿ ಇಟ್ಟಿದ್ದರಿಂದ ಸಾವಿನ ನಿಖರ ಸಮಯ ಸಿಕ್ಕಿಲ್ಲ. ಶವದ ಫೋಟೋ ಆಧಾರದಲ್ಲಿ ಸಾವಿನ ಸಮಯ ಅಂದಾಜಿಸಲಾಗಿದೆ. ಶವಪರೀಕ್ಷೆ ವರದಿ ಒಂದು ತಿಂಗಳು ವಿಳಂಬವಾಗಿ ಬಂದಿದೆ’ ಎಂದು ಸಿವಿ ನಾಗೇಶ್ ವಾದ ಮಾಡಿದ್ದಾರೆ. ಈ ಮೂಲಕ ದರ್ಶನ್ ವಿರುದ್ಧ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದರು.

ಅಪಹರಣ ಅಲ್ಲ

ಯಾವುದೇ ಮೋಸದಿಂದ ಅಥವಾ ಬಲವಂತದಿಂದ ರೇಣುಕಾಸ್ವಾಮಿ ಕಿಡ್ನ್ಯಾಪ್ ಮಾಡಲಾಗಿಲ್ಲ ಎಂಬ ವಿಚಾರವನ್ನು ವಕೀಲರು ಒತ್ತಿ ಒತ್ತಿ ಹೇಳಿದ್ದಾರೆ.  ‘ಈಗಾಗಲೇ ಮೃತನ ತಂದೆಯ ಹೇಳಿಕೆಯನ್ನು ಪಡೆಯಲಾಗಿದೆ. ಅದರಲ್ಲಿ ಜೂ.8ರಂದು ರೇಣುಕಾಸ್ವಾಮಿ ಎಂದಿನಂತೆ ಕೆಲಸಕ್ಕೆ ಹೋದ ಬಗ್ಗೆ ವರದಿ ಇದೆ. ಹಳೆಯ ನಾಲ್ವರು ಸ್ನೇಹಿತರೊಂದಿಗೆ ಹೋಗುತ್ತೇನೆಂದು ತಾಯಿ ಬಳಿ ಹೇಳಿದ್ದಾಗಿ ಹೇಳಿಕೆ ದಾಖಲಿಸಲಾಗಿದೆ. ರೇಣುಕಾಸ್ವಾಮಿ ದಿನನಿತ್ಯ ಧರಿಸುವ ಯೂನಿಫಾರ್ಮ್ ಧರಿಸಿರಲಿಲ್ಲ. ಮಧ್ಯಾಹ್ನ ಊಟಕ್ಕೆ ಬರುವುದಿಲ್ಲವೆಂದು ಫೋನ್ ಮಾಡಿ ತಿಳಿಸಿದ್ದ. ಹೀಗಾಗಿ ಇದನ್ನು ಕಿಡ್ನ್ಯಾಪ್ ಎಂದು ಹೇಳಲು ಸಾಧ್ಯವಿಲ್ಲ. ಇದರಲ್ಲಿ ಒತ್ತಾಯವೂ ಇಲ್ಲ, ಮೋಸವೂ ಇಲ್ಲ’ ಎಂದು ವಕೀಲರು ವಾದ ಮಂಡಿಸಿದ್ದಾರೆ.

‘ಚಿತ್ರದುರ್ಗದಿಂದ ಬೆಂಗಳೂರಿಗೆ ಹೋಗುವಾಗ ಬಾರ್​ಗೆ ಹೋಗಿದ್ದಾರೆ. ರೇಣುಕಾಸ್ವಾಮಿ ಫೋನ್ ಪೇ ಮೂಲಕ ಬಾರ್​ಗೆ ಹಣ ಪಾವತಿಸಿದ್ದಾನೆ. ಈ ಬಗ್ಗೆ ಬಾರ್​ನ ಮಾಲೀಕನ ಹೇಳಿಕೆ ದಾಖಲಿಸಲಾಗಿದೆ. ಅಪಹರಣಕ್ಕೊಳಗಾದವನು 640 ರೂಪಾಯಿ ಹಣವನ್ನು ಫೋನ್ ಪೇ ಮೂಲಕ ಹಣ ನೀಡಲು ಸಾಧ್ಯವೇ’ ಎಂದು ನಾಗೇಶ್ ವಾದ ಮಂಡಿಸಿದ್ದಾರೆ. ಈ ಮೂಲಕ ಇದು ಕಿಡ್ನ್ಯಾಪ್ ಅಲ್ಲ ಎಂದು ನಾಗೇಶ್ ವಾದ ಮಂಡಿಸಿದ್ದಾರೆ.

ಇದನ್ನೂ ಓದಿ: ದರ್ಶನ್​ಗೆ ಮತ್ತೆ ಸಂಕಷ್ಟ; ಬ್ಯಾಂಕ್​ನಿಂದ ಪ್ರಮುಖ ಮಾಹಿತಿ ಕಲೆ ಹಾಕಿದ ಪೊಲೀಸರು

ಸಾಕ್ಷಿ ನಾಶ ಆಗಿಲ್ಲ

‘ಕೊಲೆಯಾಗಿದೆಯೋ ಇಲ್ಲವೋ ಬೇರೆ ವಿಚಾರ. ಆದರೆ ಕೊಲೆಯ ಉದ್ದೇಶದಿಂದ ಕಿಡ್ನ್ಯಾಪ್ ಆಗಿಲ್ಲ. ಶವವನ್ನು ಒಂದೆಡೆಯಿಂದ ಇನ್ನೊಂದೆಡೆಗೆ ಸಾಗಿಸುವುದು ಸಾಕ್ಷ್ಯನಾಶವಲ್ಲ’ ಎಂದಿರುವ ಸಿವಿ ನಾಗೇಶ್ ಅವರು ಅಲಹಾಬಾದ್ ಹೈಕೋರ್ಟ್​ನ ತೀರ್ಪು ಉಲ್ಲೇಖಿಸಿದರು. ‘ಮೃತದೇಹವನ್ನು ಸುಟ್ಟುಹಾಕಿದ್ದರೆ ಸಾಕ್ಷ್ಯನಾಶ ಪರಿಗಣಿಸಬಹುದಿತ್ತು. ಆದರೆ ಆ ರೀತಿ ಆಗಿಲ್ಲ, ಕೇವಲ ಮೃತದೇಹ ಸ್ಥಳಾಂತರಿಸಲಾಗಿದೆ’ ಎಂದು ನಾಗೇಶ್ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ