ರೇಣುಕಾ ಸ್ವಾಮಿ ಕೊಲೆ: ಆರೋಪಿಗಳಿಂದ ಸಾಕ್ಷಿಗಳಿಗೆ ಬೆದರಿಕೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ 17 ಆರೋಪಿಗಳಲ್ಲಿ ಕೆಲವರು ಸಾಕ್ಷಿಗಳಾಗಿ ಪರಿವರ್ತಿತವಾಗಿದ್ದು, ಆ ಸಾಕ್ಷಿಗಳ ಮೇಲೆ ಇತರೆ ಆರೋಪಿಗಳು ಪ್ರಭಾವ ಬೀರಬಹುದು, ಹಲ್ಲೆ ಮಾಡಬಹುದು ಎಂಬ ಆತಂಕವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ರಿಮ್ಯಾಂಡ್ ವರದಿಯಲ್ಲಿ ನಮೂದಿಸಿದ್ದಾರೆ.

ರೇಣುಕಾ ಸ್ವಾಮಿ ಕೊಲೆ: ಆರೋಪಿಗಳಿಂದ ಸಾಕ್ಷಿಗಳಿಗೆ ಬೆದರಿಕೆ
ರೇಣುಕಾ ಸ್ವಾಮಿ-ದರ್ಶನ್
Follow us
ಮಂಜುನಾಥ ಸಿ.
|

Updated on:Jun 22, 2024 | 5:47 PM

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಬೆಳವಣಿಗೆಗಳಾಗುತ್ತಿದೆ. ಈಗಾಗಲೇ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪ್ರಕರಣಕ್ಕೆ ತಾರ್ಕಿಕ ಅಂತ್ಯ ನೀಡಲು ಪೊಲೀಸರು ಶ್ರಮಿಸುತ್ತಿದ್ದಾರೆ. ಆದರೆ ಆರೋಪಿಗಳು ಸಹ ಪೊಲೀಸರಿಗೆ ಅಸಹಕಾರ ತೋರುತ್ತಾ ತನಿಖೆಯ ದಿಕ್ಕು ತಪ್ಪಿಸಲು ಶತಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣದಲ್ಲಿ ಈವರೆಗೆ ಬಂಧನಕ್ಕೆ ಒಳಗಾಗಿರುವ 17 ಆರೋಪಿಗಳಲ್ಲಿ ಕೆಲವರು ಅಪ್ರೂವರ್​ಗಳಾಗಿದ್ದು ಘಟನೆ ಬಗ್ಗೆ ಸಾಕ್ಷಿ ಹೇಳಿಕೆ ನೀಡಲು ತಯಾರಾಗಿದ್ದಾರೆ. ಆದರೆ ಇವರಿಗೆ ಆರೋಪಿಗಳಿಂದಲೇ ಬೆದರಿಕೆ ಇದೆ ಎನ್ನಲಾಗುತ್ತಿದೆ.

ಇಂದು (ಜೂನ್ 22) ದರ್ಶನ್, ಪ್ರದೋಶ್, ವಿನಯ್ ಹಾಗೂ ಧನರಾಜ್ ಅನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದ ಪೊಲೀಸರು ನ್ಯಾಯಾಲಯಕ್ಕೆ ನೀಡಿದ ರಿಮ್ಯಾಂಡ್ ಅರ್ಜಿಯನ್ನು ಈ ವಿಷಯವನ್ನು ನಮೂದು ಮಾಡಿದ್ದಾರೆ. ಪ್ರಕರಣದ ಆರೋಪಿಗಳಿಂದ ಸಾಕ್ಷ್ಯಗಳಿಗೆ ಬೆದರಿಕೆ ಇರುವ ಕಾರಣ, ಎಲ್ಲ ಆರೋಪಿಗಳನ್ನು ಒಟ್ಟಿಗೆ ಇರಿಸಬಾರದು ಬದಲಿಗೆ ಬೇರೆ ಬೇರೆ ಜೈಲಿನಲ್ಲಿ ಇಡಬೇಕು ಎಂದು ಮನವಿ ಮಾಡಲಾಗಿತ್ತು. ಆದರೆ ಇದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದು, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ಪ್ರಕರಣ: ದರ್ಶನ್​ ಹಾಗೂ ಗ್ಯಾಂಗ್​ಗೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ

ಯಾವ ಆರೋಪಿಗಳು ಸಾಕ್ಷ್ಯ ಹೇಳಲಿದ್ದಾರೆ ಎಂಬುದನ್ನು ಭದ್ರತೆ ಕಾರಣಕ್ಕೆ ರಿಮ್ಯಾಂಡ್ ವರದಿಯಲ್ಲಿ ಪೊಲೀಸರು ಬಹಿರಂಗಪಡಿಸಿಲ್ಲ. ಆದರೆ ಸಾಕ್ಷ್ಯಗಳ ಮೇಲೆ ಇತರೆ ಆರೋಪಿಗಳು ದೌರ್ಜನ್ಯ ಮಾಡಬಹುದು ಅಥವಾ ಪ್ರಭಾವ ಬೀರಬಹುದು ಎಂಬ ಕಾರಣಕ್ಕೆ ಆರೋಪಿಗಳನ್ನು ಪ್ರತ್ಯೇಕವಾಗಿ ಇಡುವಂತೆ ಪೊಲೀಸರು ಮನವಿ ಮಾಡಿದ್ದರು.

ಇದರ ಜೊತೆಗೆ ಪ್ರಕರಣದ ಬಗ್ಗೆ ಇನ್ನೂ ಕೆಲವು ಅಂಶಗಳು ಇಂದು (ಜೂನ್ 22) ಹೊರಗೆ ಬಂದಿವೆ. ಮೃತನ ಬಟ್ಟೆ ಬದಲಾಯಿಸಿದ್ದಾರೆ, ಮೃತನ ಬಟ್ಟೆಗಳನ್ನು ಬದಲಾಯಿಸಲಾಗಿದೆ. ಹಾಗೂ ಮೃತನ ಬಟ್ಟೆಗಳನ್ನು ಬೇರೆ ಬೇರೆ ಕಡೆಗಳಲ್ಲಿ ಎಸೆಯಲಾಗಿದೆ. ಬಟ್ಟೆಗಳನ್ನು ಎಸೆದ ಆರೋಪಿಗಳಿಂದ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದಾರೆ. ಎ9 ಆರೋಪಿ ಧನರಾಜ್​ಗೆ ಎಲೆಕ್ಟ್ರಿಕ್ ಮಗ್ಗರ್ ಯಂತ್ರವನ್ನು ಖರೀದಿಸಲು ಆನ್​ಲೈನ್ ಮೂಲಕ ಹಣ ಕಳಿಸಿರುವುದು ಪತ್ತೆಯಾಗಿದೆ. ಆದರೆ ಆರೋಪಿ ಧನರಾಜ್, ತನ್ನೊಂದಿಗೆ ಕೊಲೆಯಾದ ಸ್ಥಳಕ್ಕೆ ಬಂದ ಇನ್ನೊಬ್ಬ ವ್ಯಕ್ತಿಯ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಧನರಾಜ್ ಪೊಲೀಸರ ತನಿಖೆಗೆ ಸೂಕ್ತವಾಗಿ ಸಹಕರಿಸುತ್ತಿಲ್ಲ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:45 pm, Sat, 22 June 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ