ದರ್ಶನ್ ಪ್ರಕರಣ: ನಟ ಚಿಕ್ಕಣ್ಣಗೂ ನೋಟಿಸ್ ಕೊಟ್ಟ ಪೊಲೀಸರು

ದರ್ಶನ್ ಹಾಗೂ ಚಿಕ್ಕಣ್ಣ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ಕಾರಣಕ್ಕೆ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಈ ಮೊದಲು ‘ಉಪಾಧ್ಯಕ್ಷ’ ಸಿನಿಮಾ ರಿಲೀಸ್ ಆದಾಗ ದರ್ಶನ್ ಅವರು ಸಿನಿಮಾ ನೋಡಿ ಚಿಕ್ಕಣ್ಣಗೆ ಬೆಂಬಲ ನೀಡಿದ್ದರು.

ದರ್ಶನ್ ಪ್ರಕರಣ: ನಟ ಚಿಕ್ಕಣ್ಣಗೂ ನೋಟಿಸ್ ಕೊಟ್ಟ ಪೊಲೀಸರು
ಚಿಕ್ಕಣ್ಣ-ದರ್ಶನ್
Follow us
ರಾಚಪ್ಪಾಜಿ ನಾಯ್ಕ್
| Updated By: ರಾಜೇಶ್ ದುಗ್ಗುಮನೆ

Updated on:Jun 17, 2024 | 1:45 PM

ನಟ ದರ್ಶನ್ (Darshan) ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ. ಇದು ಹೈಪ್ರೊಫೈಲ್ ಕೇಸ್ ಆಗಿರುವುದರಿಂದ ಸಹಜವಾಗಿಯೇ ಚರ್ಚೆ ಹುಟ್ಟುಹಾಕಿದೆ. ಈ ಪ್ರಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ವಿಶೇಷ ಎಂದರೆ ಹಾಸ್ಯನಟ ಚಿಕ್ಕಣ್ಣಗೆ ನೋಟಿಸ್​ ನೀಡಿದ್ದಾರೆ. ಅಷ್ಟಕ್ಕೂ ಅವರಿಗೆ ನೋಟಿಸ್ ಹೋಗಲು ಕಾರಣ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ನಟ ದರ್ಶನ್​​ ಶೆಡ್​ಗೆ ಹೋಗುವ ಮೊದಲು ಖಾಸಗಿ ರೆಸ್ಟೋರೆಂಟ್​ನಲ್ಲಿ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ, ನಿರ್ಮಾಪಕರು ಭಾಗಿಯಾಗಿದ್ದರು. ಪಾರ್ಟಿಯಿಂದ ಎದ್ದು ನಟ ದರ್ಶನ್ ಮನೆಗೆ ಹೊಗಬೇಕಿತ್ತು. ಆದರೆ ಅವರು ತೆರಳಿದ್ದು ಪಟ್ಟಣಗೆರೆ ಶೆಡ್​ಗೆ. ಪಾರ್ಟಿ ಮುಗಿಸಿ ಬಂದು ಹಲ್ಲೆಗೈದು ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ನೋಟಿಸ್​ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಲು ಅನ್ನಪೂರ್ಣೇಶ್ವರಿನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು  ನೋಟಿಸ್ ನೀಡಲಾಗಿದೆ.

ಇದನ್ನೂ ಓದಿ: ‘ದರ್ಶನ್​ಗೆ ಈ ಪರಿಸ್ಥಿತಿ ಬರಬಾರದಿತ್ತು’; ಮನನೊಂದು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ?

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಸೇರಿ 19 ಮಂದಿ ಬಂಧನ ಆಗಿದೆ. ಈ ಕೇಸ್​ನಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನೂ ಅರೆಸ್ಟ್ ಮಾಡಲಾಗುತ್ತಿದೆ. ದರ್ಶನ್ ಅವರು ಇನ್ನೂ ಹಲವು ದಿನ ಜೈಲಿನಲ್ಲೇ ಕಳೆಯಬೇಕಾದ ಪರಿಸ್ಥಿತಿ ಬಂದೊದಗಿದೆ.

ದರ್ಶನ್ ಹಾಗೂ ಚಿಕ್ಕಣ್ಣ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ಕಾರಣಕ್ಕೆ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಈ ಮೊದಲು ‘ಉಪಾಧ್ಯಕ್ಷ’ ಸಿನಿಮಾ ರಿಲೀಸ್ ಆದಾಗ ದರ್ಶನ್ ಅವರು ಸಿನಿಮಾ ನೋಡಿ ಚಿಕ್ಕಣ್ಣಗೆ ಬೆಂಬಲ ನೀಡಿದ್ದರು. ದರ್ಶನ್ ಅವರ ಅನೇಕ ಪಾರ್ಟಿಗಳಲ್ಲಿ ಚಿಕ್ಕಣ್ಣ ಭಾಗಿ ಆಗಿದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:08 pm, Mon, 17 June 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ