ಜಾಮೀನು ಪ್ರಕ್ರಿಯೆ ಮುಗಿಸಲು ಕೋರ್ಟ್ಗೆ ತೆರಳಿದ ದರ್ಶನ್
ದರ್ಶನ್ಗೆ ಶಸ್ತ್ರಚಿಕಿತ್ಸೆ ಮಾಡಿಸದೇ ಇದ್ದರೆ ಪಾರ್ಶವಾಯು ಆಗುತ್ತದೆ ಎಂದು ವೈದ್ಯರು ವರದಿ ನೀಡಿದ್ದರು. ಇದೇ ವರದಿ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆ ಸೇರಿದ್ದರು. ಒಂದೂವರೆ ತಿಂಗಳು ಕಳೆದರೂ ದರ್ಶನ್ ಯಾವುದೇ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ಈಗ ದರ್ಶನ್ ಅವರು ಜಾಮೀನು ಪ್ರಕ್ರಿಯೆಗೆ ಕೋರ್ಟ್ಗೆ ತೆರಳಿದ್ದಾರೆ.
ನಟ ದರ್ಶನ್ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದರು. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲಿಯೇ ಇದ್ದರು. ಇನ್ನೂ ದರ್ಶನ್ ಚಿಕಿತ್ಸೆ ಪೂರ್ಣಗೊಂಡಿಲ್ಲ. ಅವರು ವೈದ್ಯರ ಸಲಹೆ ಪಡೆದು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಅವರು ನೇರವಾಗಿ ಕೋರ್ಟ್ಗೆ ತೆರಳಿದ್ದಾರೆ.
ದರ್ಶನ್ಗೆ ಶಸ್ತ್ರಚಿಕಿತ್ಸೆ ಮಾಡಿಸದೇ ಇದ್ದರೆ ಪಾರ್ಶ್ವವಾಯು ಆಗುತ್ತದೆ ಎಂದು ವೈದ್ಯರು ವರದಿ ನೀಡಿದ್ದರು. ಇದೇ ವರದಿ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆ ಸೇರಿದ್ದರು. ಒಂದೂವರೆ ತಿಂಗಳು ಕಳೆದರೂ ದರ್ಶನ್ ಯಾವುದೇ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ‘ಬಿಪಿ ಕಾರಣಕ್ಕೆ ಶಸ್ತ್ರಚಿಕಿತ್ಸೆ ಆಗಿಲ್ಲ’ ಎಂದು ದರ್ಶನ್ ಪರ ವಕೀಲರು ಹೇಳಿದ್ದರು. ಈಗ ದರ್ಶನ್ ಅವರು ಜಾಮೀನು ಪ್ರಕ್ರಿಯೆಗಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಇಂದು (ಡಿಸೆಂಬರ್ 16) ಮಧ್ಯಾಹ್ನ ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ಆಪ್ತ ಧನ್ವಿರ್ ಬಂದಿದ್ದರು. ಆ ಬಳಿಕ ಅವರು ಆಸ್ಪತ್ರೆಯಿಂದ ಹೊರ ಬಂದು ಕಾರನ್ನು ಏರಿ ನೇರವಾಗಿ ಕೋರ್ಟ್ಗೆ ತೆರಳಿದ್ದಾರೆ.
ಇದನ್ನೂ ಓದಿ: ಬೇಲ್ ಜತೆಗೆ ದರ್ಶನ್ಗೆ ಹೈಕೋರ್ಟ್ ಖಡಕ್ ಎಚ್ಚರಿಕೆ: ಮತ್ತೊಂದು ಸಂಕಷ್ಟದಲ್ಲಿ ದಾಸ!
ಬಳ್ಳಾರಿ ಜೈಲಿನಲ್ಲಿ ಇದ್ದ ಸಂದರ್ಭದಲ್ಲಿ ದರ್ಶನ್ ನಡೆದಾಡಲೂ ಕಷ್ಟಪಡುತ್ತಿದ್ದರು. ತಂದ ಬ್ಯಾಗ್ನ ತೆಗೆದುಕೊಂಡು ಹೋಗಲಾರದೆ ಕಷ್ಟಪಡುತ್ತಿದ್ದರು. ಆ ಬಳಿಕ ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ಇವರಿಗೆ ಸರ್ಜರಿ ಮಾಡಿಸದಿದ್ದರೆ ಸಮಸ್ಯೆ ಆಗುತ್ತದೆ ಎಂದು ವರದಿ ನೀಡಿದ್ದರು. ಈ ವರದಿಯನ್ನು ಮುಂದಿಟ್ಟುಕೊಂಡು ವಕೀಲ ಸಿವಿ ನಾಗೇಶ್ ಹೈಕೋರ್ಟ್ನಲ್ಲಿ ವಾದ ಮಾಡಿ ದರ್ಶನ್ಗೆ ಮಧ್ಯಂತರ ಜಾಮೀನು ಕೊಡಿಸಲು ಯಶಸ್ವಿ ಆದರು. ಕಳೆದ ಒಂದೂವರೆ ತಿಂಗಳಿಂದ ಆಸ್ಪತ್ರೆಯಲ್ಲೇ ಇದ್ದ ದರ್ಶನ್ ಸರ್ಜರಿಯನ್ನು ಮುಂದಕ್ಕೆ ಹಾಕುತ್ತಲೇ ಬರುತ್ತಿದ್ದರು. ಈಗ ಅವರು ಸರ್ಜರಿ ಇಲ್ಲದೆ ಆಸ್ಪತ್ರೆಯಲ್ಲಿದ್ದಾರೆ. ಗುರುವಾರದ ವೇಳೆಗೆ ಅವರು ಡಿಸ್ಚಾರ್ಜ್ ಆಗೋ ಸಾಧ್ಯತೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 2:08 pm, Mon, 16 December 24