AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಜೈಲಿನಲ್ಲಿ ದರ್ಶನ್​, ಪಾಲಿಸಬೇಕು ಕಠಿಣ ನಿಯಮ

Darshan Thoogudeepa: ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ಸ್ವೀಕರಿಸಿ ವಿವಾದ ಮೈಮೇಲೆ ಎಳೆದುಕೊಂಡಿರುವ ದರ್ಶನ್ ಇದೀಗ ಬಳ್ಳಾರಿ ಕೇಂದ್ರ ಕಾರಾಗೃಹ ಸೇರಿದ್ದಾರೆ. ಬಳ್ಳಾರಿ ಜೈಲು ಅಧಿಕಾರಿಗಳು ದರ್ಶನ್ ಮೇಲೆ ಕೆಲ ಕಠಿಣ ನಿಯಮಗಳನ್ನು ಹೇರಿದ್ದಾರೆ.

ಬಳ್ಳಾರಿ ಜೈಲಿನಲ್ಲಿ ದರ್ಶನ್​, ಪಾಲಿಸಬೇಕು ಕಠಿಣ ನಿಯಮ
ಮಂಜುನಾಥ ಸಿ.
|

Updated on: Aug 29, 2024 | 10:57 AM

Share

ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ಪಡೆಯುತ್ತ ಆರಾಮವಾಗಿ ಕಾಲ ಕಳೆಯುತ್ತಿದ್ದ ದರ್ಶನ್ ಇದೀಗ ಬಳ್ಳಾರಿ ಕೇಂದ್ರ ಕಾರಾಗೃಹ ಸೇರಿದ್ದಾರೆ. ಇಲ್ಲಿ ದರ್ಶನ್​ಗೆ ಕಠಿಣ ನಿಯಮಗಳನ್ನು ಪಾಲಿಸಬೇಕಿದೆ. ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗುತ್ತಿದ್ದ ‘ಸೌಲಭ್ಯ’ಗಳು ಇಲ್ಲಿ ಸಿಗುವುದಿಲ್ಲ ಎನ್ನಲಾಗುತ್ತಿದೆ. ಇಂದು (ಆಗಸ್ಟ್ 29) ರ ಮುಂಜಾನೆ ದರ್ಶನ್, ಬಳ್ಳಾರಿ ಜೈಲು ಸೇರಿದ್ದು, ಒಳ ಹೋಗುತ್ತಿದ್ದಂತೆ ಪೊಲೀಸರು ದರ್ಶನ್​ಗೆ ಶಿಸ್ತಿನ ಅರಿವು ಮೂಡಿಸಿದ್ದಾರೆ.

ಜೈಲಿನ ಒಳಗೆ ಹೋಗುತ್ತಿದ್ದಂತೆ ಮೊದಲಿಗೆ ಜೈಲು ಡೈರಿಯಲ್ಲಿ ದರ್ಶನ್​ರ ಮಾಹಿತಿ ಬರೆದುಕೊಳ್ಳಲಾಗಿದೆ. ದರ್ಶನ್​ ಆರೋಪಿಯಾಗಿರುವ ಪ್ರಕರಣದ ಮಾಹಿತಿಯನ್ನು ತುಂಬಿಕೊಳ್ಳಲಾಗಿದೆ. ಯಾವ ಜೈಲಿನಿಂದ ಬಂದಿದ್ದಾರೆ, ಯಾವ ಸಮಯಕ್ಕೆ ಬಂದಿದ್ದಾರೆ ಇನ್ನಿತರೆ ಮಾಹಿತಿಗಳನ್ನು ತುಂಬಿಕೊಳ್ಳಲಾಗಿದೆ. ಬಳಿಕ ದರ್ಶನ್ ಕೈಯಲ್ಲಿದ್ದ ಕಡಗ, ಕೊರಳಲ್ಲಿದ್ದ ಮಣಿ ಸರಗಳನ್ನು ಕಳಚುವಂತೆ ಸೂಚಿಸಿದ್ದು, ಆ ವಸ್ತುಗಳನ್ನು ಜೈಲು ಸಿಬ್ಬಂದಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ದರ್ಶನ್ ಕೂಲಿಂಗ್ ಗ್ಲಾಸ್ ಅನ್ನು ಸಹ ಕೊಂಡೊಯ್ದಿದ್ದರು ಅದನ್ನೂ ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಳಿಕ ದರ್ಶನ್​ಗೆ ಜೈಲಿನಲ್ಲಿಯೇ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಬಳಿಕ ನಿಗದಿತ ಬ್ಯಾರಕ್​ಗೆ ಬಿಡಲಾಗಿದೆ.

ಇದನ್ನೂ ಓದಿ:ಅನಂತಪುರ ಮಾರ್ಗವಾಗಿ ಹೊರಟ ದರ್ಶನ್ ಹೊತ್ತ ಪೊಲೀಸ್ ವ್ಯಾನ್ 10 ಗಂಟೆಗೆ ಬಳ್ಳಾರಿ ತಲುಪಲಿದೆ

ವಿಶೇಷ ಆತಿಥ್ಯ ಪಡೆದು ವಿವಾದ ಮಾಡಿಕೊಂಡಿರುವ ಕಾರಣದಿಂದಲೇ ಈಗ ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರಗೊಂಡಿರುವ ಕಾರಣ, ಬಳ್ಳಾರಿ ಜೈಲಿನಲ್ಲಿ ಆ ರೀತಿಯ ಯಾವುದೇ ಸೌಲಭ್ಯಗಳು ನೀಡದಂತೆ ಉನ್ನತ ಅಧಿಕಾರಿಗಳಿಂದ ಶಿಸ್ತಿನ ಸೂಚನೆಗಳು ಸ್ಥಳೀಯ ಅಧಿಕಾರಿಗಳಿಗೆ ದೊರತಿದೆ. ಹಾಗಾಗಿ ದರ್ಶನ್ ವಿಚಾರದಲ್ಲಿ ತುಸು ಹೆಚ್ಚಿನ ಶಿಸ್ತನ್ನೇ ಜೈಲು ಅಧಿಕಾರಿಗಳು ಪಾಲಿಸಲಿದ್ದಾರೆ ಎನ್ನಲಾಗುತ್ತಿದೆ. ಬಳ್ಳಾರಿ ಜೈಲಿನಲ್ಲಿ 385 ಕೈದಿಗಳು ಈಗಾಗಲೇ ಇದ್ದಾರೆ. ಕೆಲವು ನಟೋರಿಯಸ್ ಹಂತಕರು ಸಹ ಅದೇ ಜೈಲಿನಲ್ಲಿದ್ದಾರೆ. ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದ ಆರೋಪಿಗಳು ಸಹ ಅದೇ ಜೈಲಿನಲ್ಲಿದ್ದಾರೆ. ಪರಪ್ಪನ ಅಗ್ರಹಾರದಷ್ಟು ಸುಲಭವಾದ ವಾಸ್ತವ್ಯ ಬಳ್ಳಾರಿ ಜೈಲಿನಲ್ಲಿ ಇರದು ಎನ್ನಲಾಗುತ್ತಿದೆ.

ಲಾಠಿ ಚಾರ್ಜ್

ಅಭಿಮಾನಿಗಳು ಸಮಸ್ಯೆ ಮಾಡಬಾರದೆಂದೇ ತಡ ರಾತ್ರಿ ದರ್ಶನ್ ಅನ್ನು ಬೆಂಗಳೂರಿನ ಜೈಲಿನಿಂದ ಬಳ್ಳಾರಿ ಜೈಲಿಗೆ ಕರೆದುಕೊಂಡು ಹೋಗಲಾಯ್ತು. ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ತಂದ ಸಮಯದಲ್ಲಿ ಜೈಲಿನ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾವಣೆಗೊಂಡಿದ್ದರು. ಅಭಿಮಾನಿಗಳ ಕೂಗಾಟ-ಕಿರುಚಾಟ ಮಿತಿ ಮೀರಿದಾಗ ಪೊಲೀಸರು ಲಾಠಿ ಬೀಸಿ ಅಭಿಮಾನಿಗಳನ್ನು ಚದುರಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!