ಬೇಲ್ ಸಿಗುವ ಹುಮ್ಮಸಿನಲ್ಲಿದ್ದ ದರ್ಶನ್‌ಗೆ ನಿರಾಸೆ; ಆ ಒಂದು ವಿಚಾರದ ಬಗ್ಗೆ ಶುರುವಾಗಿದೆ ಆತಂಕ

ಸೋಮವಾರ (ಸೆಪ್ಟೆಂಬರ್ 30) ಜಾಮೀನು ಸಿಗುವ ನಿರೀಕ್ಷೆಯಲ್ಲಿ ದರ್ಶನ್ ಇದ್ದಾರೆ. ಆದರೆ, ಜಾಮೀನು ಸಿಗೋದು ಅಷ್ಟು ಸುಲಭದಲ್ಲಿ ಇಲ್ಲ. ದರ್ಶನ್ ಅವರನ್ನು IT ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ. ಇದು ದರ್ಶನ್​ಗೆ ತೊಡಕಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೇಲ್ ಸಿಗುವ ಹುಮ್ಮಸಿನಲ್ಲಿದ್ದ ದರ್ಶನ್‌ಗೆ ನಿರಾಸೆ; ಆ ಒಂದು ವಿಚಾರದ ಬಗ್ಗೆ ಶುರುವಾಗಿದೆ ಆತಂಕ
Darshan
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ರಾಜೇಶ್ ದುಗ್ಗುಮನೆ

Updated on: Sep 28, 2024 | 3:09 PM

ನಟ ದರ್ಶನ್ ಅವರು ಶುಕ್ರವಾರ (ಸೆಪ್ಟೆಂಬರ್ 27) ಜಾಮೀನು ಸಿಗುವ ನಿರೀಕ್ಷೆಯಲ್ಲಿ ಇದ್ದರು. ಆದರೆ, ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಪರ ವಕೀಲರು ಸಮಯ ಕೇಳಿದ್ದರಿಂದ ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಿಕೆ ಆಗಿದೆ. ಈ ಕಾರಣಕ್ಕೆ ದರ್ಶನ್​ಗೆ ಟೆನ್ಷನ್ ಶುರುವಾಗಿದೆ. ಇದರ ಜೊತೆಗೆ ಒಂದು ವಿಚಾರದ ಬಗ್ಗೆ ಅವರಿಗೆ ಆತಂಕ ಶುರುವಾಗಿದೆ. ಇದೇ ವಿಚಾರ ಅವರ ಜಾಮೀನಿಗೆ ತೊಂದರೆ ತಂದೊಡ್ಡಬಹುದು ಎನ್ನುವ ಆತಂಕ ಶುರುವಾಗಿದೆ.

ಸೋಮವಾರ (ಸೆಪ್ಟೆಂಬರ್ 30) ಜಾಮೀನು ಸಿಗುವ ನಿರೀಕ್ಷೆಯಲ್ಲಿ ದರ್ಶನ್ ಇದ್ದಾರೆ. ಆದರೆ, ಜಾಮೀನು ಸಿಗೋದು ಅಷ್ಟು ಸುಲಭದಲ್ಲಿ ಇಲ್ಲ. ದರ್ಶನ್ ಅವರನ್ನು IT ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ. ಇದು ದರ್ಶನ್​ಗೆ ತೊಡಕಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಹಣದ ವ್ಯವಹಾರ ಕೂಡ ನಡೆದಿದೆ. ಇದರಿಂದ ದರ್ಶನ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ. ಈ ವಿಚಾರಣೆಯ ಕೆಲ ಅಂಶಗಳು, ಕೊಲೆ ಬಳಿಕ ಹಣ ವಹಿವಾಟು ಮೇಲೆ ಸರ್ಕಾರಿ ವಕೀಲರು ಅಪಸ್ವರ ತೆಗೆಯೋ ಸಾಧ್ಯತೆ ಇದೆ.

ಕೊಲೆ ನಡೆದ ಸ್ಥಳದಲ್ಲಿ ಪವಿತ್ರಾಗೌಡ ಇಲ್ಲ ಎಂದು ಅವರ ಪರ ವಕೀಲರು ವಾದ ಮುಂದಿಟ್ಟಿದ್ದಾರೆ. ಐಟಿ ವಿಚಾರಣೆ ಹಾಗೂ ಪವಿತ್ರಾ ಗೌಡ ಅವರ ನಿಲವು ನೋಡಿಕೊಂಡು ದರ್ಶನ್ ಕಾನೂನು ಹೋರಾಟಕ್ಕೆ ಮುಂದಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಿಕೆ: ಕಾರಣ?

ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿರೋದು ಕೆಳ ಹಂತದ ನ್ಯಾಯಾಲಯದಲ್ಲಿ. ಒಂದೊಮ್ಮೆ ಇಲ್ಲಿ ಜಾಮೀನು ಸಿಗದೇ ಇದ್ದರೆ ಹೈಕೋರ್ಟ್ ಹೋಗಬಹುದು. ಅಲ್ಲಿಯೂ ಅವರಿಗೆ ಬೇಲ್ ಸಿಗದೆ ಇದ್ದರೆ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಇದೆ. ದರ್ಶನ್ ಅವರು ಇನ್ನೂ ಹಲವು ದಿನ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಬಂದೊದಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ