ಆರ್​ಸಿಬಿ ಸೋಲಿಗೆ ಅಶ್ವಿನಿ ಕಾರಣವೆಂದ ದರ್ಶನ್​ ಫ್ಯಾನ್ಸ್; ದೂರು ನೀಡಲು ಮುಂದಾದ ಅಪ್ಪು ಅಭಿಮಾನಿಗಳು

ಆರ್​ಸಿಬಿ ಅನ್​ಬಾಕ್ಸಿಂಗ್ ಇವೆಂಟ್​ಗೆ ಅಶ್ವಿನಿ ಅವರು ಕೂಡ ತೆರಳಿದ್ದರು. ‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ ಹೆಸರಿನ ಟ್ವಿಟರ್ ಅಕೌಂಟ್ ಮೂಲಕ ಟ್ವೀಟ್ ಮಾಡಲಾಗಿದೆ.

ಆರ್​ಸಿಬಿ ಸೋಲಿಗೆ ಅಶ್ವಿನಿ ಕಾರಣವೆಂದ ದರ್ಶನ್​ ಫ್ಯಾನ್ಸ್; ದೂರು ನೀಡಲು ಮುಂದಾದ ಅಪ್ಪು ಅಭಿಮಾನಿಗಳು
ಅಶ್ವಿನಿ-ದರ್ಶನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 05, 2024 | 8:43 AM

ಆರ್​ಸಿಬಿ ತಂಡ ಈ ಬಾರಿಯ ಐಪಿಎಲ್​ನಲ್ಲೂ ಮುಗ್ಗರಿಸುವ ಸೂಚನೆ ಸಿಕ್ಕಿದೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಸೋತು, ಒಂದು ಮ್ಯಾಚ್​ ಗೆದ್ದಿದೆ. ಆರ್​ಸಿಬಿ ಸೋಲಿಗೆ ಮ್ಯಾನೇಜ್​ಮೆಂಟ್​ನ ಕೆಲವರು ದೂರುತ್ತಿದ್ದಾರೆ. ಇನ್ನೂ ಕೆಲವರು ತಂಡ ಪರ್ಫಾರ್ಮೆನ್ಸ್​​ನ ತೆಗಳುತ್ತಿದ್ದಾರೆ. ದರ್ಶನ್ (Darshan) ಅವರ ಕೆಲ ಅಭಿಮಾನಿಗಳು ಮಾತ್ರ ಆರ್​ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರನ್ನು ದೂರಿದ್ದಾರೆ. ಆರ್​ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್​ ರಾಜ್​ಕುಮಾರ್ಗೂ ಏನು ಸಂಬಂಧ ಎಂಬ ಪ್ರಶ್ನೆ ನಿಮ್ಮಲ್ಲಿ ಕಾಡಬಹುದು. ಇದಕ್ಕೆ ದರ್ಶನ್ ಅಭಿಮಾನಿಗಳ ಥಿಯರಿ ತುಂಬಾನೇ ಕೀಳುಮಟ್ಟದ್ದು.

ಆರ್​ಸಿಬಿ ಅನ್​ಬಾಕ್ಸಿಂಗ್ ಇವೆಂಟ್​ಗೆ ಅಶ್ವಿನಿ ಅವರು ಕೂಡ ತೆರಳಿದ್ದರು. ‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಮೂಲಕ ಟ್ವೀಟ್ ಮಾಡಲಾಗಿದೆ. ಇದನ್ನು ಅನೇಕರು ಖಂಡಿಸಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನೂ ಕೆಲವರು ‘ದರ್ಶನ್ ಅವರು ಫ್ಯಾನ್ಸ್​ಗೆ ಬುದ್ಧಿವಾದ ಹೇಳಬೇಕು’ ಎಂದಿದ್ದಾರೆ. ಈ ರೀತಿ ಪೋಸ್ಟ್ ಮಾಡಿದ್ದು ನಿಜಕ್ಕೂ ದರ್ಶನ್ ಅಭಿಮಾನಿಯೇ ಅಥವಾ ಫೇಕ್ ಖಾತೆಯೇ ಎಂಬ ಪ್ರಶ್ನೆಯೂ ಮೂಡಿದೆ.

ಸಿಟ್ಟಿಗೆದ್ದ ಅಭಿಮಾನಿಗಳು

ಈ ಟ್ವೀಟ್​ನಿಂದ ಪುನೀತ್ ರಾಜಕುಮಾರ್ ಫ್ಯಾನ್ಸ್ ಸದ್ಯ ಕೋಪಗೊಂಡಿದ್ದಾರೆ. ಹೀಗಾಗಿ, ಕಾನೂನು ಕ್ರಮಕ್ಕೆ ಅಪ್ಪು ಅಭಿಮಾನಿಗಳು ಮುಂದಾಗಿದ್ದಾರೆ. ಇಂದು ಕಮಿಷನರ್ ಭೇಟಿಯಾಗಿ, ದೂರು ಕೋಡೋ ಸಾಧ್ಯತೆ ಇದೆ. ಈ ಪ್ರಕರಣದ ತನಿಖೆ ನಡೆದರೆ ಅಸಲಿ ವಿಚಾರ ಹೊರ ಬೀಳಲಿದೆ.

ಇದನ್ನೂ ಓದಿ: ಆಡಿ ಕ್ಯೂ 7 ಕಾರು ಖರೀದಿಸಿದ ಅಶ್ವಿನಿ ಪುನೀತ್​ರಾಜ್​ಕುಮಾರ್, ಬೆಲೆ ಎಷ್ಟು ಕೋಟಿ?

ಸ್ಯಾಂಡಲ್​ವುಡ್​ನಲ್ಲಿ ಅಭಿಮಾನಿಗಳ ಮಧ್ಯೆ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವಾರ್ ನಡೆಯುತ್ತಲೇ ಇರುತ್ತದೆ. ಫ್ಯಾನ್ಸ್ ಪರಸ್ಪರ ಕಿತ್ತಾಡಿಕೊಳ್ಳುತ್ತಾ ಇರುತ್ತಾರೆ. ಆದರೆ, ಇಷ್ಟು ಕೀಳುಮಟ್ಟದಲ್ಲಿ ಮಾತನಾಡುತ್ತಿರುವುದು ಸರಿ ಅಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಅಶ್ವಿನಿ ಪುನೀತ್​ರಾಜ್​ಕುಮಾರ್ ಅವರು ಅನೇಕರಿಗೆ ಮಾದರಿ. ಪುನೀತ್ ನಿಧನದ ನಂತರ ಅವರು ಪಿಆರ್​ಕೆ ಪ್ರೊಡಕ್ಷನ್ಸ್​ನ ಸಂಪೂರ್ಣ ಜವಾಬ್ದಾರಿಯನ್ನು ತಾವೇ ತೆಗೆದುಕೊಂಡಿದ್ದಾರೆ. ಹೊಸಬರಿಗೆ ಅವರು ಅವಕಾಶ ನೀಡುತ್ತಿದ್ದಾರೆ. ಇತ್ತೀಚೆಗೆ ಅವರು ಆಡಿ ಕ್ಯೂ 7 ಕಾರು ಖರೀಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ