ಕೊಲೆ ಆರೋಪಿ ದರ್ಶನ್​​ಗೆ ಕೊನೆಗೂ ಸಿಕ್ತು ರಿಲೀಫ್; ಫ್ಯಾನ್ಸ್​ಗೆ ಗುಡ್ ನ್ಯೂಸ್

ದರ್ಶನ್ ಅವರು ಜಾಮೀನು ನೀಡಬೇಕು ಎಂದು ಕೆಳ ಹಂತದ ಕೋರ್ಟ್​ನಲ್ಲಿ ಕೋರಿದ್ದರು. ಆದರೆ, ಇದಕ್ಕೆ ಕೋರ್ಟ್ ಒಪ್ಪಿಗೆ ಕೊಟ್ಟಿಲ್ಲ. ದರ್ಶನ್ ಅವರ ಜಾಮೀನು ಅರ್ಜಿ ವಜಾ ಆಗಿದೆ. ಈ ಬೆನ್ನಲ್ಲೇ ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ.  ಈ ಮಧ್ಯೆ ಅವರಿಗೆ ಥೆರಪಿ ಕೊಡಲಾಗಿದೆ.

ಕೊಲೆ ಆರೋಪಿ ದರ್ಶನ್​​ಗೆ ಕೊನೆಗೂ ಸಿಕ್ತು ರಿಲೀಫ್; ಫ್ಯಾನ್ಸ್​ಗೆ ಗುಡ್ ನ್ಯೂಸ್
ದರ್ಶನ್
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ರಾಜೇಶ್ ದುಗ್ಗುಮನೆ

Updated on:Oct 19, 2024 | 12:02 PM

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ ನಾಲ್ಕು ತಿಂಗಳುಗಳು ಕಳೆದಿವೆ. ಹೊರ ಬರಲು ಅವರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದರಾದರೂ ಅದು ಸಾಧ್ಯವಾಗುತ್ತಿಲ್ಲ. ದರ್ಶನ್ ಅವರ ಜಾಮೀನು ಅರ್ಜಿ ಈಗಾಗಲೇ ಕೆಳ ಹಂತದ ಕೋರ್ಟ್​ನಲ್ಲಿ ರಿಜೆಕ್ಟ್ ಆಗಿದೆ. ಈ ಮಧ್ಯೆ ದರ್ಶನ್​ಗೆ ಕೊಂಚ ರಿಲೀಫ್ ಆಗುವಂತಹ ಬೆಳವಣಿಗೆ ನಡೆದಿದೆ. ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದ ದರ್ಶನ್​ಗೆ ಫಿಜಿಯೋ ಥೆರಪಿ ಚಿಕಿತ್ಸೆ ಕೊಡಿಸಲಾಗಿದೆ.

ಶುಕ್ರವಾರ (ಅಕ್ಟೋಬರ್ 19) ಸಂಜೆಯಿಂದಲೇ ವಿಮ್ಸ್ ಆಸ್ಪತ್ರೆ ವೈದ್ಯರಿಂದ ಫಿಜಿಯೋಥೆರೆಪಿ ಚಿಕಿತ್ಸೆ ಕೊಡಲಾಗುತ್ತಿದೆ. ಜೈಲಿನ ಹೈ ಸೆಕ್ಯೂರಿಟಿ ಸೆಲ್​ನಲ್ಲೇ ವಿಮ್ಸ್ ವೈದ್ಯರು ಒಂದು ಗಂಟೆ ಫಿಜಿಯೋಥೆರೆಪಿ ಮಾಡಿದ್ದಾರೆ. ಇದರಿಂದ ದರ್ಶನ್ ಕೊಂಚ ರಿಲೀಫ್ ಆಗಿದ್ದಾರೆ. ದರ್ಶನ್​ ಬೆನ್ನಿನ ಭಾಗದಲ್ಲಿ ಊತ ಕಾಣಿಸಿಕೊಂಡಿದೆ. ಈಗ ಅವರಿಗೆ ಚಿಕಿತ್ಸೆ ಸಿಗುತ್ತಿರುವ ವಿಚಾರ ಫ್ಯಾನ್ಸ್ ಖುಷಿಗೆ ಕಾರಣ ಆಗಿದೆ.

ನ್ಯೂರೋ ಹಾಗೂ ಆರ್ಥೋಪಿಡಿಷನ್ ವೈದ್ಯರು ದರ್ಶನ್ ಅವರ ದೇಹವನ್ನು ಸ್ಕ್ಯಾನಿಂಗ್ ಮಾಡಿದ್ದರು. ಈ ವೇಳೆ ಸರ್ಜರಿ ಹಾಗೂ ಫಿಜಿಯೋಥೆರಪಿ ಮಾಡಿಸುವಂತೆ ಸಲಹೆ ನೀಡಿದ್ದರು. ಸದ್ಯ ಸರ್ಜರಿಯನ್ನು ಅವರು ಬೆಂಗಳೂರಿಗೆ ಹೋಗಿ ಮಾಡಿಸುವುದಾಗಿ ಹೇಳುತ್ತಿದ್ದಾರೆ. ಹೀಗಾಗಿ, ಫಿಜಿಯೋಥೆರೆಪಿ ಆರಂಭಿಸಲಾಗಿದೆ.

ದರ್ಶನ್​ಗೆ ಬುಧವಾರವೇ ಫಿಜಿಯೋಥೆರೆಪಿ ಆರಂಭ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಫಿಜಿಯೋಥೆರಪಿ ಮಾಡಿಸಲು ಸಾಧ್ಯವಾಗಿರಲಿಲ್ಲ. ಈಗ ಅವರು ಫಿಜಿಯೋಥೆರೆಪಿ ಮಾಡಿಸಿದ್ದಾರೆ. ವೈದ್ಯರ ಸೂಚನೆ ಮೇರೆಗೆ ಮೆಡಿಕಲ್ ಬೆಡ್, ದಿಂಬು ಹಾಗೂ ಚೇರ್​ಗಳನ್ನು ಕೊಡಲಾಗಿದೆ.

ಇದನ್ನೂ ಓದಿ: ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ

ದರ್ಶನ್ ಅವರು ಜಾಮೀನು ನೀಡಬೇಕು ಎಂದು ಕೆಳ ಹಂತದ ಕೋರ್ಟ್​ನಲ್ಲಿ ಕೋರಿದ್ದರು. ಆದರೆ, ಇದಕ್ಕೆ ಕೋರ್ಟ್ ಒಪ್ಪಿಗೆ ಕೊಟ್ಟಿಲ್ಲ. ದರ್ಶನ್ ಅವರ ಜಾಮೀನು ಅರ್ಜಿ ವಜಾ ಆಗಿದೆ. ಈ ಬೆನ್ನಲ್ಲೇ ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:00 pm, Sat, 19 October 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್