Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ದರ್ಶನ್​ಗೆ ದೀಪಾವಳಿ ಉಡುಗೊರೆ: ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು

Darshan Thoogudeepa Bail: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್​ ಸುಮಾರು ಐದು ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದೀಗ ಕೊನೆಗೂ ದೀಪಾವಳಿಗೆ ದರ್ಶನ್​ಗೆ ಸಿಹಿ ದೊರೆತಿದೆ. ಕರ್ನಾಟಕ ರಾಜ್ಯ ಹೈಕೋರ್ಟ್ ದರ್ಶನ್​ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

Breaking: ದರ್ಶನ್​ಗೆ ದೀಪಾವಳಿ ಉಡುಗೊರೆ: ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು
Follow us
ಮಂಜುನಾಥ ಸಿ.
|

Updated on:Oct 30, 2024 | 11:30 AM

ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್​ಗೆ ದೀಪಾವಳಿ ಶುಭ ತಂದಿದೆ. ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್​ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ ಅವಧಿಯ ಮಧ್ಯಂತರ ಜಾಮೀನು ನೀಡಲಾಗಿದ್ದು, ಮಧ್ಯಂತರ ಜಾಮೀನಿಗೆ ಸಾಕಷ್ಟು ಷರತ್ತುಗಳನ್ನು ಮಾನ್ಯ ನ್ಯಾಯಾಲಯ ವಿಧಿಸಿದೆ.

ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್​ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್​ನಲ್ಲಿ ಅರ್ಜಿ ಹಾಕಿದ್ದರು. ಆದರೆ ಹೈಕೋರ್ಟ್​ನಲ್ಲಿ ದರ್ಶನ್ ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು. ದರ್ಶನ್​ಗೆ ತೀವ್ರ ಬೆನ್ನುನೋವಿನ ಸಮಸ್ಯೆ ಇದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಇದನ್ನೂ ಓದಿ:ಜಾಮೀನು ಸಿಗುವ ನಿರೀಕ್ಷೆಯಲ್ಲಿ ನಟ ದರ್ಶನ್; ಹೇಗಿರಲಿದೆ ದಾಸನ ಭವಿಷ್ಯ?

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು, ದರ್ಶನ್​ರ ಆರೋಗ್ಯ ಸಮಸ್ಯೆಯ ಕುರಿತು ವರದಿ ನೀಡಲು ಮೆಡಿಕಲ್ ಬೋರ್ಡ್ ಸ್ಥಾಪನೆ ಮಾಡಬೇಕೆಂಬ ವಾದವನ್ನು ನ್ಯಾಯಾಲಯದ ಮುಂದೆ ಮಂಡಿಸಿದ್ದರು. ಅಲ್ಲದೆ ಈಗ ಸಲ್ಲಿಸಲಾಗಿರುವ ವೈದ್ಯ ವರದಿಯಲ್ಲಿ ದರ್ಶನ್​ಗೆ ಆಗಬೇಕಿರುವ ಶಸ್ತ್ರಚಿಕಿತ್ಸೆ, ಗುಣವಾಗಲು ತೆಗೆದುಕೊಳ್ಳುವ ಸಮಯ ನಿಖರವಾಗಿಲ್ಲವೆಂದು ವಾದಿಸಿದ್ದರು.

ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ. ದರ್ಶನ್​ಗೆ ಹೆಚ್ಚಿನ ಷರತ್ತುಗಳನ್ನೇನೂ ನ್ಯಾಯಾಧೀಶರು ವಿಧಿಸಿಲ್ಲ. ಎಸ್​ಪಿಪಿ ಮನವಿ ಮೇರೆಗೆ ಪಾಸ್​ಪೋರ್ಟ್​ ವಶಕ್ಕೆ ನೀಡುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ದರ್ಶನ್ ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ಒಂದು ವಾರದ ಒಳಗಾಗಿ ನ್ಯಾಯಾಲಯಕ್ಕೆ ಚಿಕಿತ್ಸೆಯ ವಿವರಗಳನ್ನು ಸಲ್ಲಿಸಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:40 am, Wed, 30 October 24

ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ