ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಪಾತ್ರವೇನು? ಚಾರ್ಜ್​ಶೀಟ್ ವಿವರ ಇಲ್ಲಿದೆ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಎ2 ಆರೋಪಿ ಆಗಿ ಮುಂದುವರಿದಿದ್ದಾರೆ. ಅವರ ವಿರುದ್ಧ ಗಂಭೀರ ಆರೋಪಗಳು ಚಾರ್ಜ್​ಶೀಟ್​ನಲ್ಲಿ ಇವೆ. ಕಿಡ್ನಾಪ್ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಕೊಲೆ ನಡೆದ ಬಳಿಕ ಅದನ್ನು ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಪಾತ್ರವೇನು? ಚಾರ್ಜ್​ಶೀಟ್ ವಿವರ ಇಲ್ಲಿದೆ
ದರ್ಶನ್
Edited By:

Updated on: Sep 04, 2024 | 12:00 PM

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ 3,991 ಚಾರ್ಜಶೀಟ್ ಸಲ್ಲಿಕೆ ಆಗಿದೆ. ಇದರಲ್ಲಿ ರೇಣುಕಾ ಸ್ವಾಮಿ ಕೊಲೆಯ ಇಂಚಿಂಚೂ ಮಾಹಿತಿ ಇದೆ. ಹಾಗಾದರೆ ಈ ಕೊಲೆಯಲ್ಲಿ ದರ್ಶನ್ ಪಾತ್ರವೇನು? ಅವರು ಕೊಲೆಯಲ್ಲಿ ಹೇಗೆ ಭಾಗಿ ಆಗಿದ್ದಾರೆ ಎಂಬುದರ ಸಂಪೂರ್ಣ ವಿವರ ಈ ದೋಷಾರೋಪ ಪಟ್ಟಿಯಲ್ಲಿ ಇದೆ. ಕೋರ್ಟ್ ವಿಚಾರಣೆ ವೇಳೆ ಇದು ಬಹಳ ಮುಖ್ಯ ಆಗಲಿದೆ.

ದರ್ಶನ್ ಪಾತ್ರ ಏನು?

ದರ್ಶನ್ ಎ2 ಆರೋಪಿ ಆಗಿ ಮುಂದುವರಿದಿದ್ದಾರೆ. ಅವರ ವಿರುದ್ಧ ಗಂಭೀರ ಆರೋಪಗಳು ಚಾರ್ಜ್​ಶೀಟ್​ನಲ್ಲಿ ಇವೆ. ಕಿಡ್ನಾಪ್ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಕೊಲೆ ನಡೆದ ಬಳಿಕ ಅದನ್ನು ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ. ದರ್ಶನ್ ಕೊಲೆ ನಡೆದ ಸ್ಥಳದಲ್ಲಿ ಇರುವುದು ಹಾಗೂ ಕೊಲೆ ಬಳಿಕ ಸ್ಥಳದಿಂದ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾ ಸ್ವಾಮಿ ರಕ್ತ ಇರುವುದು ಪತ್ತೆ ಆಗಿದೆ. ಇದಕ್ಕೆ ಸಾಕ್ಷ್ಯಗಳು ಕೂಡ ಸಿಕ್ಕಿವೆ. ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿಯಾದ್ದು ಚಾರ್ಜ್​ಶೀಟ್​ನಲ್ಲಿ ದೃಢಪಟ್ಟಿದೆ.

ಪವಿತ್ರಾ ವಿವರ

ಪವಿತ್ರಾ ಗೌಡ ಅವರು ಕೊಲೆ ಮಾಡಲು ಮೂಲ ಕಾರಣ ಅನ್ನೋದು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖ ಆಗಿದೆ. ಹಲ್ಲೆ ನಡೆಸುವ ಸ್ಥಳದಲ್ಲಿ ಹಾಜರಿದ್ದರು ಮತ್ತು ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿರೋದು ಅಧಿಕೃತ ಆಗಿದೆ. ಸಿಸಿಟಿವಿಯಲ್ಲಿ ಪವಿತ್ರಾ ಗೌಡ ಸೆರೆ ಆಗಿದ್ದಾರೆ. ಪವಿತ್ರಾ ಗೌಡ ಮೊಬೈಲ್ ಕೃತ್ಯದ ಸ್ಥಳದಲ್ಲಿ ಆ್ಯಕ್ಟೀವ್ ಆಗಿತ್ತು. ಉಳಿದವರ ಪಾತ್ರದ ಬಗ್ಗೆಯೂ ಉಲ್ಲೇಖ ಮಾಡಲಾಗಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ

ವಿಶೇಷ ಕೋರ್ಟ್​ಗೆ ಮನವಿ ಸಾಧ್ಯತೆ

ದರ್ಶನ್ ಮತ್ತು ಗ್ಯಾಂಗ್​​ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ ಆಗಿದೆ. ಸ್ಪೆಷಲ್ ಕೋರ್ಟ್ ಅಥವಾ ತ್ವರಿತ ಕೋರ್ಟ್​ಗೆ ನೀಡಲು ಸರ್ಕಾರಕ್ಕೆ ಮನವಿ ಮಾಡಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಒಂದೊಮ್ಮೆ ಸರ್ಕಾರ ಇದಕ್ಕೆ ಒಪ್ಪಿಗೆ ಕೊಟ್ಟರೆ ಆದಷ್ಟು ಬೇಗ ಪ್ರಕರಣ ಇತ್ಯರ್ಥ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
Loading...
Unable to load recommendations.
Follow Us