AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಕೊಲೆ: ದರ್ಶನ್​ಗೆ ವಿಚಾರಣಾಧೀನ ಕೈದಿ ಸಂಖ್ಯೆ ಕೊಟ್ಟ ಪೊಲೀಸರು

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪಗೆ ಇಂದು (ಜೂನ್ 22) ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರಕ್ಕೆ ನಟನನ್ನು ಸ್ಥಳಾಂತರಿಸಲಾಗಿದೆ. ದರ್ಶನ್​ಗೆ ಜೈಲಿನಲ್ಲಿ ಯಾವ ಸಂಖ್ಯೆ ನೀಡಲಾಗಿದೆ? ಇಲ್ಲಿ ತಿಳಿಯಿರಿ.

ರೇಣುಕಾ ಸ್ವಾಮಿ ಕೊಲೆ: ದರ್ಶನ್​ಗೆ ವಿಚಾರಣಾಧೀನ ಕೈದಿ ಸಂಖ್ಯೆ ಕೊಟ್ಟ ಪೊಲೀಸರು
ದರ್ಶನ್-ತೂಗುದೀಪ
ಮಂಜುನಾಥ ಸಿ.
|

Updated on:Jun 22, 2024 | 6:10 PM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಆರೋಪಿ ದರ್ಶನ್ (Darshan Thoogudeepa) ಇಂದು (ಜೂನ್ 22) ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದು, ನ್ಯಾಯಾಲಯದ ಕಲಾಪ ಮುಗಿದೊಡನೆ ದರ್ಶನ್ ಹಾಗೂ ಇತರ ಮೂವರು ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನ ಬಳಿ ಬಿಗಿ ಬಂಧೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ದರ್ಶನ್​ಗೆ ಈಗಾಗಲೇ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ಸಹ ನೀಡಲಾಗಿದೆ.

ದರ್ಶನ್​ಗೆ ವಿಚಾರಣಾಧೀನ ಕೈದಿ ಸಂಖ್ಯೆ 6106 ನ್ನು ನೀಡಲಾಗಿದೆ. ಇನ್ನು ಇಂದು ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಧನರಾಜ್​ಗೆ 6107, ವಿನಯ್​ಗೆ 6108, ಪ್ರದೂಶ್​ಗೆ 6109 ಸಂಖ್ಯೆಗಳನ್ನು ನೀಡಲಾಗಿದೆ. ಭದ್ರತೆ ದೃಷ್ಟಿಯಿಂದ ದರ್ಶನ್​ ಅನ್ನು ವಿಶೇಷ ಬ್ಯಾರಕ್​ನಲ್ಲಿ ಇರಿಸಲಾಗಿದೆ. ಪರಪ್ಪನ ಅಗ್ರಹಾರದಲ್ಲಿ ಮೂರು ವಿಶೇಷ ಬ್ಯಾರಕ್​ಗಳಿದ್ದು, ಇತರೆ ಕೈದಿಗಳಿಂದ ಅಪಾಯವಿರುವ ಆರೋಪಿಗಳನ್ನು ಈ ಬ್ಯಾರಕ್​ನಲ್ಲಿ ಇಡಲಾಗುತ್ತಿದೆ. ಇದೀಗ ದರ್ಶನ್​ ಅನ್ನು ಮೂರನೇ ಬ್ಯಾರಕ್​ನಲ್ಲಿ ಇರಿಸಲಾಗಿದೆ.

ಇದನ್ನೂ ಓದಿ:ದರ್ಶನ್​ಗೆ ಕೌನ್ಸಲಿಂಗ್ ಅಗತ್ಯವಿದೆ ಎಂದು ನಾನು ಜನವರಿಯಲ್ಲೇ ಹೇಳಿದ್ದೆ; ಮನೋ ವೈದ್ಯೆ

ವಿಚಾರಣಾಧೀನ ಕೈದಿಗಳಿಗೆ ಹಲವು ಪರೀಕ್ಷೆಗಳನ್ನು ಮಾಡಿ ಒಳಗೆ ಸೇರಿಸಿಕೊಳ್ಳಲಾಗುತ್ತದೆ. ಅವರ ದೇಹದ ಮೇಲಿರುವ ಮಚ್ಚೆಯಿಂದ ಹಿಡಿದು ಎಲ್ಲವನ್ನೂ ನೋಡಿ ನಮೂದು ಮಾಡಿಕೊಳ್ಳಲಾಗುತ್ತದೆ. ದರ್ಶನ್​ ಸಹ ಬಟ್ಟೆ ಬಿಚ್ಚಿ ಪೊಲೀಸರೆದುರು ಪರೀಕ್ಷೆಗೆ ಒಳಪಟ್ಟಿದ್ದಾರೆ. ಅದಾದ ಬಳಿಕವೇ ಅವರಿಗೆ ಯುಟಿಪಿ ಸಂಖ್ಯೆಯನ್ನು ನೀಡಲಾಗಿದೆ. ಇತರೆ ಆರೋಪಿಗಳಿಗೆ ಅವರ ಆರೋಪಿ ಕ್ರಮಕ್ಕೆ ಅನುಗುಣವಾಗಿ ಸಂಖ್ಯೆ ನೀಡಿದಂತಿದೆ.

ಎರಡು ದಿನದ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರದ ಮಹಿಳಾ ವಿಭಾಗದ ಡಿ ಬ್ಯಾರಕ್​ನಲ್ಲಿ ಇರಿಸಲಾಗಿದೆ. ಪವಿತ್ರಾಗೆ 6024 ಸಂಖ್ಯೆಯನ್ನು ನೀಡಲಾಗಿತ್ತು. ಇಂದು ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಆರೋಪಿಗಳಿಗೆ ಇಂದು ಸೇರಿದಂತೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಜುಲೈ 4 ರವರೆಗೆ ದರ್ಶನ್ ಮತ್ತು ಗ್ಯಾಂಗ್ ನ್ಯಾಯಾಂಗ ಬಂಧನದಲ್ಲಿ ಇರಬೇಕಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Sat, 22 June 24

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್