Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್, ಚಿತ್ರೀಕರಣಕ್ಕೆ ಮರಳುವುದು ಯಾವಾಗ? ಇಲ್ಲಿದೆ ಅಪ್​ಡೇಟ್

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ತೂಗುದೀಪ ಜಾಮೀನಿನ ಮೇಲೆ ಹೊರಗಿದ್ದು ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಳೆಯ ಕಹಿ ಘಟನೆಗಳನ್ನು ಮರೆತು ನಿಧಾನಕ್ಕೆ ಸಾರ್ವಜನಿಕ ಜೀವನಕ್ಕೆ ಮರಳುತ್ತಿದ್ದಾರೆ. ದರ್ಶನ್ ‘ಡೆವಿಲ್’ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ನಿಜಾಂಶವೇನು?

ದರ್ಶನ್, ಚಿತ್ರೀಕರಣಕ್ಕೆ ಮರಳುವುದು ಯಾವಾಗ? ಇಲ್ಲಿದೆ ಅಪ್​ಡೇಟ್
Darshan Thoogudeepa
Follow us
ಮಂಜುನಾಥ ಸಿ.
|

Updated on:Feb 28, 2025 | 10:46 AM

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಬಳಿಕ ದರ್ಶನ್ (Darshan Thoogudeepa), ನಿಧಾನಕ್ಕೆ ಸಾರ್ವಜನಿಕ ಜೀವನಕ್ಕೆ ಮರಳುತ್ತಿದ್ದಾರೆ. ಕುಟುಂಬದೊಟ್ಟಿಗೆ ದೇವಾಲಯ ಭೇಟಿ, ಗೆಳೆಯರೊಟ್ಟಿಗೆ ಹುಟ್ಟುಹಬ್ಬ ಆಚರಣೆ ಇಂಥಹಾ ಸಣ್ಣ ಪುಟ್ಟ ಕಾರ್ಯಕ್ರಮಗಳಿಗೆ ದರ್ಶನ್ ಭೇಟಿ ನೀಡುತ್ತಿದ್ದಾರೆ. ದರ್ಶನ್ ಇದೇ ತಿಂಗಳಿನಿಂದ ಚಿತ್ರೀಕರಣವನ್ನು ಸಹ ಪ್ರಾರಂಭ ಮಾಡಲಿದ್ದಾರೆ ಎನ್ನಲಾಗಿತ್ತು. ನಿಂತು ಹೋಗಿರುವ ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿ ಮತ್ತೆ ತೊಡಗಿಕೊಳ್ಳಲಿದ್ದಾರೆ ಎನ್ನಲಾಗಿತ್ತು.

ಇಂದಿನಿಂದಲೇ (ಫೆಬ್ರವರಿ 28) ದರ್ಶನ್, ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ ಅದು ಸುಳ್ಳು ಎನ್ನಲಾಗಿದೆ. ದರ್ಶನ್​ರ ಆಪ್ತ ಬಳಗವೇ ಈ ಬಗ್ಗೆ ಖಾತ್ರಿ ನೀಡಿದ್ದು, ದರ್ಶನ್ ಇಂದು ಚಿತ್ರೀಕರಣಕ್ಕೆ ಹೋಗುತ್ತಿಲ್ಲ ಎನ್ನಲಾಗಿದೆ. ದರ್ಶನ್​ ಬೆನ್ನು ನೋವಿಗೆ ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದು, ಬೆನ್ನು ನೋವು ಪೂರ್ಣ ಗುಣಮುಖವಾದ ಬಳಿಕವಷ್ಟೆ ಅವರು ಚಿತ್ರೀಕರಣಕ್ಕೆ ಹೋಗಲಿದ್ದಾರಂತೆ.

ಅಲ್ಲದೆ, ಚಿತ್ರೀಕರಣದಲ್ಲಿ ಭಾಗವಹಿಸಲು ಸಹ ನ್ಯಾಯಾಲಯದಿಂದ ಅನುಮತಿಯನ್ನು ದರ್ಶನ್ ಪಡೆಯಬೇಕಿದೆ. ಆದರೆ ಈ ವರೆಗೂ ದರ್ಶನ್, ಚಿತ್ರೀಕರಣದಲ್ಲಿ ಭಾಗಿಯಾಗಲು ಅನುಮತಿ ನ್ಯಾಯಾಲಯಕ್ಕೆ ಯಾವುದೇ ಮನವಿಯನ್ನು ಸಹ ಸಲ್ಲಿಸಿಲ್ಲ. ಬೆನ್ನು ನೋವು ಸಹ ಸಂಪೂರ್ಣವಾಗಿ ಗುಣವಾಗಿಲ್ಲವಾದ್ದರಿಂದ ಇನ್ನೂ ಕೆಲ ದಿನ ದರ್ಶನ್ ಅವರು ತಮ್ಮ ಆರೋಗ್ಯ ಸುಧಾರಣೆ ಕಡೆಗೆ ಹೆಚ್ಚಿನ ಗಮನ ಕೊಡಲಿದ್ದಾರೆ.

ಇದನ್ನೂ ಓದಿ:ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್

ಕೆಲ ಮೂಲಗಳ ಪ್ರಕಾರ ಮುಂದಿನ ತಿಂಗಳಿನಿಂದ ನಟ ದರ್ಶನ್ ‘ಡೆವಿಲ್’ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ. ಕೆಲ ದಿನಗಳ ಹಿಂದಷ್ಟೆ ದರ್ಶನ್​ರ ಹುಟ್ಟುಹಬ್ಬದ ದಿನದಂದು ‘ಡೆವಿಲ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ‘ಡೆವಿಲ್’ ಸಿನಿಮಾದ ಹೆಸರನ್ನು ತುಸು ಬದಲಾಯಿಸಲಾಗಿದೆ ಸಹ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ದರ್ಶನ್ ಜೈಲಿಗೆ ಹೋದ ಕಾರಣದಿಂದ ಸಿನಿಮಾ ಬಿಡುಗಡೆ ಆಗಿಲ್ಲ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನೂ ಹಲವರು ಜೈಲು ಸೇರಿದ್ದರು. ಕೆಲ ತಿಂಗಳ ಹಿಂದಷ್ಟೆ ಎಲ್ಲ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:45 am, Fri, 28 February 25

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ